ಲೋಕಸಭೆ ಫಲಿತಾಂಶ ಬರಲಿ, ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ ಆಗಲಿದೆ: ಸಿಎಂ ಸಿದ್ದರಾಮಯ್ಯ

Date:

ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

- Advertisement -

ಕಾಂಗ್ರೆಸ್‌ನಲ್ಲಿ ಒಳಜಗಳವಿದ್ದು ಸರ್ಕಾರ ಬೀಳಲಿದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ನಾಯಕರ ಮಾತಿಗೆ ಪ್ರತ್ಯುತ್ತರಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

“ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸದಿದ್ದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ ಆಗಲಿದೆ” ಎಂದು ಹೇಳಿದ್ದಾರೆ.

“ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಈ ಪಕ್ಷದ್ರೋಹಿ ಶಿಂದೆ ಅವರ ಪಕ್ಷ ಈ ಚುನಾವಣೆಯಲ್ಲಿ ದೂಳೀಪಟವಾಗಲಿರುವುದು ಮಾತ್ರವಲ್ಲ ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ಮೂಲೆ ಸೇರುವುದು ಖಚಿತ. ಈ ಹತಾಶೆಯಿಂದ ಏನೋ ಬಡಬಡಿಸಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಅನರ್ಹತೆ ನೋಟಿಸ್: ಲೋಕಸಭಾ ಸ್ಪೀಕರ್ ಬಳಿ ಮತ್ತೆ 15 ದಿನ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು

ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...