ಬೀದರ್‌ | ಮೈತ್ರಿ ಅಭ್ಯರ್ಥಿ ಭಗವಂತ ಖೂಬಾ ಗೆಲುವಿಗೆ ಶತಪ್ರಯತ್ನ ಮಾಡೋಣ : ಬಂಡೆಪ್ಪ ಕಾಶೆಂಪುರ್

Date:

Advertisements

ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇರಿದ್ದ ಜನರನ್ನು ನೋಡಿ ಬೇರೆ ಪಕ್ಷದವರು ಆಶ್ಚರ್ಯ ಪಡುವಂತಾಗಿದೆ. ಆ ರೀತಿಯ ಜನ ಬೆಂಬಲ ನಮ್ಮ ಮೈತ್ರಿಗೆ ಸಿಕ್ಕಿದೆ ಎಂದು ಮಾಜಿ ಸಚಿವ, ಜೆಡಿಎಸ್ ನಾಯಕ ಬಂಡೆಪ್ಪ ಕಾಶೆಂಪುರ್ ಹೇಳಿದರು.

ಬೀದರ್ ನಗರದ ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರ ನಿವಾಸದಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ-ಜೆಡಿಎಸ್ ಪಕ್ಷದ ಮುಖಂಡರುಗಳ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, “ಎರಡು ಪಕ್ಷಗಳ ನಾಯಕರನ್ನು ಒಂದು ಕಡೆ ಸೇರಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ‌. ನಾವು ಈ ಮೈತ್ರಿಯನ್ನು ವಿಧಾನಸಭಾ ಚುನಾವಣೆಯ ಮುಂಚೆ ಮಾಡಿಕೊಂಡಿದ್ದರೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ” ಎಂದರು.

“ನಮ್ಮ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಭಗವಂತ ಖೂಬಾ ಅವರನ್ನು ಗೆಲ್ಲಿಸಲು ನಾವೆಲ್ಲರೂ ಶ್ರಮಿಸುತ್ತೇವೆ. ನಾವು ಈಗಾಗಲೇ ಮೂರು ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ವಿಧಾನಸಭಾ ಕ್ಷೇತ್ರವಾರು ಸಭೆಗಳನ್ನು ನಡೆಸುತ್ತೇವೆ” ಎಂದು ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದರು.

Advertisements

ಬಿಜೆಪಿ ಮೈತ್ರಿಯಿಂದ ಉತ್ತಮ ಬಾಂಧವ್ಯ ದೊರಕಿದೆ:

“ನಾನು ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆಗಿನ ಮೈತ್ರಿ ಎರಡು ಸಂದರ್ಭಗಳಲ್ಲಿ ಕೂಡ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ನಮಗೆ ಬಿಜೆಪಿ ಜೊತೆಗಿನ ಮೈತ್ರಿ ವೇಳೆ ರಾಜ್ಯದಲ್ಲಿ ಉತ್ತಮ ಪ್ರೋತ್ಸಾಹ, ಬೆಂಬಲ ಸಿಕ್ಕಿದೆ. ಬಿಜೆಪಿ ಜೊತೆಗಿನ ಮೈತ್ರಿ ನ್ಯಾಚುರಲ್ ಅಲೈಯನ್ಸ್ ಇದ್ದಂತೆ. ಈ ಮೈತ್ರಿಗೆ ಜೆಡಿಎಸ್ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಕೂಡ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಬೂತ್ ಮಟ್ಟದಿಂದ ಬಿಜೆಪಿ ಗೆಲುವಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ” ಎಂದರು.

ಮೋದಿಯವರ ನೇತೃತ್ವದಲ್ಲಿ ಮತ್ತೆ ಭಾರತ ಮುನ್ನಡೆಸಬೇಕಾಗಿದೆ. ಭಾರತ ಮತ್ತಷ್ಟು ಬಲಿಷ್ಠವಾಗಿ ವಿಶ್ವಕ್ಕೆ ಮಾದರಿಯಾಗಬೇಕಾಗಿದೆ. ಆ ನಿಟ್ಟಿನಲ್ಲಿ ಭಾರತಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು. ನಾವೆಲ್ಲರೂ ಮೋದಿಯವರಿಗೆ ಬೆಂಬಲ ಕೊಡಬೇಕು ಎಂದು ಜೆಡಿಎಸ್‌ ವರಿಷ್ಠರಾದ ಹೆಚ್.ಡಿ ದೇವೇಗೌಡರು ಪಕ್ಷದ ಶಾಸಕರಿಗೆ, ಮಾಜಿ ಶಾಸಕರಿಗೆ, ಮುಖಂಡರಿಗೆ, ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕುಸ್ತಿ ಪಂದ್ಯವಳಿ; ಬಾಲಕನನ್ನು ಸೋಲಿಸಿದ ಬಾಲಕಿ

ಸಭೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರ ಸಚಿವ, ಬೀದರ್ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಭಗವಂತ ಖೂಬಾ, ಜಿಲ್ಲೆಯ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಶರಣು ಸಲಗಾರ್, ಸಿದ್ದು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ‌ ರಘುನಾಥರಾವ್ ಮಲ್ಕಾಪೂರೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿದಂತೆ ಪ್ರಮುಖರಾದ ಮಹೇಶ್ವರಿ ವಾಲಿ, ಸಜ್ಜದ್ ಸಾಹೇಬ್, ಎಂ.ಜಿ ಮೂಳೆ ಹಾಗೂ ಲೋಕಸಭಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X