ಸ್ಟ್ರಾಂಗ್ ಸಿಎಂ ನೀವಾಗಿದ್ದರೆ ‘ನಾನೇ ಐದು ವರ್ಷ ಸಿಎಂ’ ಎಂದು ಹೇಳಿ ನೋಡೋಣ: ಸಿದ್ದರಾಮಯ್ಯಗೆ ಅಶೋಕ್‌ ಸವಾಲು

Date:

ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಕಂಡ ಅತ್ಯಂತ ದುರ್ಬಲ, ಅಸಹಾಯಕ ಮುಖ್ಯಮಂತ್ರಿ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಟೀಕಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರು ಅವರು, “ಬಿ ಕೆ ಹರಿಪ್ರಸಾದ್‌ ಅವರು ತಮ್ಮ ಮೇಲೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟು ಅಸಹಾಯಕರ ತಾವು” ಎಂದು ಸಿದ್ದರಾಮಯ್ಯರನ್ನು ಕುಟುಕಿದ್ದಾರೆ.

“ಡಿಸಿಎಂ ಡಿ ಕೆ ಶಿವಕುಮಾರ್‌ ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ expiry date ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ಸಿದ್ದರಾಮಯ್ಯರದ್ದು” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರಧಾನಿ ಮೋದಿ ಅವರೇ ಮತ್ತೊಮ್ಮೆ ಮುಂದಿನ ಐದು ವರ್ಷ ಈ ದೇಶದ ಸ್ಟ್ರಾಂಗ್ ಪ್ರಧಾನಿ ಆಗಿ ಮುಂದುವರೆಯುತ್ತಾರೆ ಎಂದು ವಿಶ್ವಾಸದಿಂದ ಹೇಳುವ ಧೈರ್ಯ ನನಗಿದೆ. ನಿಮಗೆ ತಾಕತ್ತಿದ್ದರೆ, ನೀವು ಹೇಳಿಕೊಳ್ಳುವಂತೆ ತಾವು ಸ್ಟ್ರಾಂಗ್ ಮುಖ್ಯಮಂತ್ರಿಯೇ ಆಗಿದ್ದರೆ, “ನಾನೇ ಐದು ವರ್ಷ ಮುಖ್ಯಮಂತ್ರಿ” ಎಂದು ಒಮ್ಮೆ ಹೇಳಿ ನೋಡೋಣ” ಎಂದು ಆರ್‌ ಅಶೋಕ್‌ ಸವಾಲು ಹಾಕಿದ್ದಾರೆ.

“ನಿಮಗೆ ಖಂಡಿತ ಹೇಳಲು ಆಗಲ್ಲ. ಅದಕ್ಕೆ ತಮ್ಮನ್ನು ಈ ರಾಜ್ಯ ಕಂಡ ಅತ್ಯಂತ ವೀಕ್ ಮುಖ್ಯಮಂತ್ರಿ ಎಂದು ಜನ ಮಾತಾಡಿಕೊಳ್ಳುವುದು” ಎಂದು ಲೇವಡಿ ಮಾಡಿದ್ದಾರೆ.‌

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ...

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...

ಬಿಎಸ್‌ವೈ ಪೋಕ್ಸೊ | ಕಾನೂನು ರಕ್ಷಕರಿಂದಲೇ ಕಾನೂನು ಉಲ್ಲಂಘನೆ: ವಕೀಲ ಎಸ್‌ ಬಾಲನ್ ಆರೋಪ

"ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ...