ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಮಿತ್‌ ಶಾಗೆ ಪತ್ರ

Date:

ಧರ್ಮಸ್ಥಳದಲ್ಲಿ ರಹಸ್ಯವಾಗಿ ನೂರಾರು ಮೃತದೇಹಗಳನ್ನು ಅಂತ್ಯಕ್ರಿಯೆ ಮಾಡಲಾದ ಮತ್ತು ಹಲವಾರು ಮಂದಿ ನಾಪತ್ತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ವಿಸ್ತರಿಸಿದೆ. ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎಂದು ದಾಖಲಾಗಿರುವ ಎಲ್ಲ ದೂರುಗಳನ್ನು ತನಿಖೆಯನ್ನು ಒಳಗೊಳ್ಳುವುದಾಗಿ ಘೋಷಿಸಿದೆ. ಈ ನಡುವೆ, ಧರ್ಮಸ್ಥಳ ದೇವಾಲಯದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನಾಗರಿಕ ಸೇವಾ ಟ್ರಸ್ಟ್‌ನ ಕೆ ಸೋಮನಾಥ್ ನಾಯಕ್ ಪತ್ರ ಬರೆದಿದ್ದಾರೆ.

- Advertisement -

ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆ ಅವರು ಭೂ ಅಕ್ರಮಗಳನ್ನು ಎಸಗಿದ್ದಾರೆ ಎಂಬುದಕ್ಕೆ ಸಂಬಂಧಿಸಿದ ಹಲವಾರು ದಾಖಲೆಗಳನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಸೋಮನಾಥ್ ನಾಯಕ್ ಇ-ಮೇಲ್ ಮೂಲಕ ಸಲ್ಲಿಸಿದ್ದಾರೆ. ವೀರೇಂದ್ರ ಹೆಗ್ಗಡೆ ಅವರು ಕಾನೂನುಬಾಹಿರ ಕೃತ್ಯಗಳನ್ನು ಎಸಗಿದ್ದಾರೆ. ಸುಮಾರು 2,500 ಎಕರೆ ಭೂ ಹಗರಣ ನಡೆಸಿದ್ದಾರೆ ಹಾಗೂ ಸಾವಿರಾರು ಕೋಟಿ ರೂಪಾಯಿಗಳ ಆರ್ಥಿಕ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
WhatsApp Image 2025 09 09 at 3.08.23 PM

“ವೀರೇಂದ್ರ ಹೆಗ್ಗಡೆ ಅವರ ‘ಶ್ರೀ ಧರ್ಮಸ್ಥಳ ಮಂಜುನಾಥ (ಎಸ್‌ಡಿಎಂ) ಶೈಕ್ಷಣಿಕ ಟ್ರಸ್ಟ್‌ ಮತ್ತು ಎಸ್‌ಡಿಎಂ ಶೈಕ್ಷಣಿಕ ಸೊಸೈಟಿ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳು ಹಲವಾರು ಕಾನೂನುಗಳನ್ನು ಉಲ್ಲಂಘಿಸಿವೆ. ಕಾನೂನಿನ ಪ್ರಕಾರ 18% ಎಸ್‌ಸಿ/ಎಸ್‌ಟಿ ಸಿಬ್ಬಂದಿಯನ್ನು ನೇಮಿಸಿಲ್ಲ. ಅಲ್ಲದೆ, ಎಸ್‌ಸಿ/ಎಸ್‌ಟಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ನೀಡಲಾದ ಹಣಕಾಸಿನ ಅನುದಾನವನ್ನು ಟ್ರಸ್ಟ್‌ ಮತ್ತು ಸೊಸೈಟಿಗಳು ದುರುಪಯೋಗ ಮಾಡಿಕೊಂಡಿವೆ ಎಂಬುದು ತಿಳಿದುಬಂದಿದೆ. ಹೆಗ್ಗಡೆ ಅವರ ಅವರ ವಿರುದ್ಧ ಇಡಿ ಮತ್ತು ಸಮರ್ಥ ಪ್ರಾಧಿಕಾರದ ಮೂಲಕ ವಿಚಾರಣೆ ನಡೆಸಬೇಕು. ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ವೀರೇಂದ್ರ ಹೆಗ್ಗಡೆ ಅವರನ್ನು 2022ರ ಜುಲೈನಲ್ಲಿ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬಿಜೆಪಿ ನಾಮನಿರ್ದೇಶನ ಮಾಡಿತು. ಅಂದಿನಿಂದ ಅವರು ರಾಜ್ಯಸಭಾ ಸದಸ್ಯರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...