ಅದಾನಿ ಲಾಭಕ್ಕಾಗಿ 30 ಕೋಟಿ ಎಲ್‌ಐಸಿ ಪಾಲಿಸಿದಾರರ ಹಣ ದುರ್ಬಳಕೆ: ವಾಷಿಂಗ್ಟನ್ ಪೋಸ್ಟ್ ವರದಿ

Date:

ಅದಾನಿ ಲಾಭಕ್ಕಾಗಿ ಅದಾನಿ ಗ್ರೂಪ್‌ನ ಸೆಕ್ಯುರಿಟಿಗಳಲ್ಲಿ ಜೀವ ವಿಮಾ ನಿಗಮ(ಎಲ್‌ಐಸಿ) ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಈ ವರದಿ ಬಳಿಕ ಈ ಬಗ್ಗೆ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಆದರೆ ಎಲ್‌ಐಸಿ ಮಾತ್ರ ಈ ಆರೋಪಗಳನ್ನು ಅಲ್ಲಗಳೆದಿದ್ದು, “ಇದು ಸುಳ್ಳು, ಆಧಾರಹಿತ ಮತ್ತು ಸತ್ಯಕ್ಕೆ ದೂರವಾದುದ್ದು” ಎಂದು ಹೇಳಿದೆ.

- Advertisement -

2025ರ ಮೇ ತಿಂಗಳಲ್ಲಿ ವಿವಿಧ ಅದಾನಿ ಗ್ರೂಪ್ ಕಂಪನಿಗಳಲ್ಲಿ ಸುಮಾರು 33,000 ಕೋಟಿ ರೂ. ಎಲ್‌ಐಸಿ ನಿಧಿಯನ್ನು ಹೂಡಿಕೆ ಮಾಡುವ ಪ್ರಸ್ತಾವನೆಯನ್ನು ಭಾರತೀಯ ಅಧಿಕಾರಿಗಳು ಜಾರಿಗೆ ತಂದಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ಆಂತರಿಕ ದಾಖಲೆಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಇದಾದ ಬಳಿಕ ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಹಿಂಡನ್‌ಬರ್ಗ್ ಸ್ಪೋಟಕ ವರದಿ; ಅದಾನಿ ಗ್ರೂಪ್‌ನಿಂದ ಹೇಳಿಕೆ ಬಿಡುಗಡೆ

ಈ ಬಗ್ಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಎಕ್ಸ್‌ನಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. “ಮೋದಾನಿ(ಮೋದಿ-ಪ್ರಧಾನಿ) ಜಂಟಿ ಉದ್ಯಮವು ಭಾರತೀಯ ಜೀವ ವಿಮಾ ನಿಗಮ (LIC) ಮತ್ತು ಅದರ 30 ಕೋಟಿ ಪಾಲಿಸಿದಾರರ ಉಳಿತಾಯವನ್ನು ಹೇಗೆ ವ್ಯವಸ್ಥಿತವಾಗಿ ದುರುಪಯೋಗಪಡಿಸಿಕೊಂಡಿದೆ ಎಂಬುದರ ಬಗ್ಗೆ ಮಾಧ್ಯಮಗಳಲ್ಲಿ ಬಹಿರಂಗವಾಗಿದೆ” ಎಂದು ಹೇಳಿದ್ದಾರೆ.

“ಹಣಕಾಸು ಸಚಿವಾಲಯ ಮತ್ತು ನೀತಿ ಆಯೋಗದ ಅಧಿಕಾರಿಗಳು ಯಾರ ಒತ್ತಡದಿಂದಾಗಿ ಹಲವು ಗಂಭೀರ ಆರೋಪಗಳಿಂದಾಗಿ ಹಣಕಾಸಿನ ತೊಂದರೆಗಳನ್ನು ಎದುರಿಸುತ್ತಿರುವ ಖಾಸಗಿ ಕಂಪನಿಯಲ್ಲಿ ಹೂಡಿಕೆ ಮಾಡುವ ನಿರ್ಧಾರ ಮಾಡಿದರು? ಇದು ‘ಮೊಬೈಲ್ ಫೋನ್ ಬ್ಯಾಂಕಿಂಗ್’ ನ ಪ್ರಕರಣವಲ್ಲವೇ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

“ಸೌರಶಕ್ತಿ ಒಪ್ಪಂದವನ್ನು ಪಡೆಯುವ ನಿಟ್ಟಿನಲ್ಲಿ ಸುಮಾರು 2,000 ಕೋಟಿ ರೂ. ಲಂಚ ನೀಡಿದ ಆರೋಪವನ್ನು ಅದಾನಿ ಗ್ರೂಪ್ ಹೊಂದಿದೆ. ಮೋದಿ ಸರ್ಕಾರವು ಸುಮಾರು ಒಂದು ವರ್ಷದವರೆಗೆ ಪ್ರದಾನಿಯವರ ಪ್ರಿಯ ವ್ಯಾಪಾರ ಸಮೂಹಕ್ಕೆ ಅಮೆರಿಕ ನೀಡಿದ ಸಮನ್ಸ್ ಅನ್ನು ನೀಡಲು ನಿರಾಕರಿಸಿದೆ” ಎಂದು ಟೀಕಿಸಿದ್ದಾರೆ.

ಇನ್ನು ಅದಾನಿ ಸಂಸ್ಥೆಯಲ್ಲಿ ಎಲ್‌ಐಸಿ ಹೂಡಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಸರ್ಕಾರದ ನೇರ ಲಾಭ ವರ್ಗಾವಣೆಯ ಫಲಾನುಭವಿಗಳು ದೇಶದ ಸಾಮಾನ್ಯ ಜನರಲ್ಲ. ಬದಲಾಗಿ ಮೋದಿಯವರ ಉತ್ತಮ ಸ್ನೇಹಿತರು. ತಮ್ಮ ಎಲ್‌ಐಸಿ ಪ್ರೀಮಿಯಂನ ಪ್ರತಿ ಪೈಸೆಯನ್ನು ಪಾವತಿಸುವ ಸರಾಸರಿ ಸಂಬಳ ಪಡೆಯುವ ಮಧ್ಯಮ ವರ್ಗದ ವ್ಯಕ್ತಿಯ ಹಣವನ್ನು ಮೋದಿ ಅದಾನಿಯನ್ನು ಉಳಿಸಲು ಬಳಸುತ್ತಿದ್ದಾರೆ ಎಂದು ತಿಳಿದಿದೆಯೇ? ಇದು ನಂಬಿಕೆಯ ಉಲ್ಲಂಘನೆಯಲ್ಲವೇ? ಇದು ಲೂಟಿಯಲ್ಲವೇ” ಎಂದೂ ಖರ್ಗೆ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಆದರೆ ಎಲ್‌ಐಸಿ ಮಾತ್ರ ಈ ಆರೋಪಗಳನ್ನು ಅಲ್ಲಗಳೆದಿದೆ. “ಈ ಆರೋಪಗಳು ಸುಳ್ಳು, ಆಧಾರರಹಿತ” ಎಂದು ಹೇಳಿದೆ. “ಲೇಖನದಲ್ಲಿ ಆರೋಪಿಸಲಾದ ಯಾವುದೇ ದಾಖಲೆ ಅಥವಾ ಯೋಜನೆಯನ್ನು ಎಲ್‌ಐಸಿ ಎಂದಿಗೂ ಸಿದ್ಧಪಡಿಸಿಲ್ಲ” ಎಂದು ಹೇಳಿದೆ. ಕಾಂಗ್ರೆಸ್ ಆರೋಪಗಳಿಗೆ ಅದಾನಿ ಗ್ರೂಪ್‌ನಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

ಇನ್ನು ಅಮೆರಿಕದ ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥೆ ಈ ಹಿಂದೆ ಅದಾನಿ ಗ್ರೂಪ್ ಷೇರು ಮಾರುಕಟ್ಟೆಯಲ್ಲಿ ವಂಚನೆ ಮಾಡಿದೆ ಎಂದು ಆರೋಪಿಸಿತ್ತು. ಸುಪ್ರೀಂ ಕೋರ್ಟ್ ಹಸ್ತಕ್ಷೇಪದ ಬಳಿಕ ಈ ಬಗ್ಗೆ ಸೆಬಿ ತನಿಖೆ ಪ್ರಾರಂಭಿಸಿತ್ತು. ಆದರೆ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಹೇಳಿ ಸೆಬಿ ಈ ಆರೋಪದಿಂದ ಅದಾನಿ ಗ್ರೂಪ್ ಅನ್ನು ಮುಕ್ತಗೊಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...