ಬಜೆಟ್ 23 -24| ಕ್ಷಣ ಕ್ಷಣದ ಮಾಹಿತಿ…

Date:

Advertisements

02: 47 PM

2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿಯನ್ನು ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರ್ಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ ಇಲ್ಲಿಯವರೆಗೂ ಅನುಷ್ಠಾನಗೊಳಿಸಿರುವುದಿಲ್ಲ. ಸರ್ಕಾರವು ಹಿಂದೆ ಘೋಷಿಸಿದಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲಿದೆ.

ಬೆಂಗಳೂರಿನಲ್ಲಿರುವ ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗುವುದು.

Advertisements

02: 45 PM

ಯಾವುದೇ ಗಮನಾರ್ಹ ಆದಾಯವಿಲ್ಲದ ʻಸಿʼ ವರ್ಗದ ಒಟ್ಟು 121 ಮುಜರಾಯಿ ದೇವಸ್ಥಾನಗಳಿಗೆ ಕನಿಷ್ಠ 35 ರೂ.ಗಳಿಂದ 15,000 ರೂ.ಗಳವರೆಗೆ ನಗದು ಸಹಾಯಾನುದಾನ ನೀಡಲಾಗುತ್ತಿದ್ದು, ಎಲ್ಲಾ ದೇವಸ್ಥಾನಗಳಿಗೆ ಸಮಾನವಾಗಿ 15,000 ರೂ.ಗಳ ಸಹಾಯಾನುದಾನವನ್ನು ನೀಡಲಾಗುವುದು.

ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುವ ಮಾಸಾಶನ ಮೊತ್ತವನ್ನು 10 ಸಾವಿರ ರೂ. ಗಳಿಂದ 12 ಸಾವಿರ ರೂ.ಗಳಿಗೆ ಹೆಚ್ಚಿಸಲಾಗುವುದು. ಮಾಸಾಶನ ಪಡೆಯುವ ಪತ್ರಕರ್ತರು ಮೃತಪಟ್ಟಾಗ ನೀಡಲಾಗುವ ಕುಟುಂಬ ಮಾಸಾಶನ ಮೊತ್ತವನ್ನು ಮೂರು ಸಾವಿರ ರೂ. ಗಳಿಂದ ಆರು ಸಾವಿರ ರೂ. ಗಳಿಗೆ ಹೆಚ್ಚಿಸಲಾಗುವುದು.

02: 30 PM

ಕನ್ನಡ ಸಾಹಿತ್ಯ ಲೋಕಕ್ಕೆ ಸಲ್ಲಿಸಿದ ಅನುಪಮ ಸೇವೆಯನ್ನು ಸ್ಮರಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಎಂ. ಎಂ. ಕಲಬುರಗಿ ಅವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪನೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್‌ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸಲಾಗುವುದು ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆ

ರಾಜ್ಯದಲ್ಲಿರುವ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯವಿಠಲ ದೇವಸ್ಥಾನ, ಬೀದರ್ ಕೋಟೆ, ನಂದಿಬೆಟ್ಟದ
ಶ್ರೀ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್, ಕಿತ್ತೂರು ಕೋಟೆ ಮತ್ತು ಬಾದಾಮಿ ಗುಹೆಗಳ ಬಳಿ ರಾತ್ರಿ ವೇಳೆ ಪ್ರವಾಸಿಗರ ಭೇಟಿಯನ್ನು ಉತ್ತೇಜಿಸಲು ಹಾಗೂ ಕರ್ನಾಟಕ ರಾಜ್ಯದ ಕಲೆ, ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಲು 3D ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಷೋ ಯೋಜನೆ

02: 15 PM

ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ
ರೈಲ್ವೆ ಜಾಲದ ಸಾಂದ್ರತೆಯನ್ನು ಹೆಚ್ಚಿಸಿ, ಕರ್ನಾಟಕದ ಎಲ್ಲಾ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಮೂಲಕ, ಪ್ರಾದೇಶಿಕ ಅಸಮತೋಲನ ಕಡಿಮೆ ಮಾಡುವುದು, ಜನಸಾಮಾನ್ಯರ ಸುಗಮ ಸಂಚಾರ ಹಾಗೂ ಸರಕು ಸಾಗಾಣಿಕೆಗೆ ಅನುವು ಮಾಡಿಕೊಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಸುಮಾರು 8,766 ಕೋಟಿ ರೂ.ಗಳ ರಾಜ್ಯದ ಹೂಡಿಕೆಯೊಂದಿಗೆ, 1,110 ಕಿ.ಮೀ. ಉದ್ದದ, ಒಂಬತ್ತು ರೈಲ್ವೆ ಯೋಜನಾ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು. ಇದರ ಜೊತೆಗೆ, ರಸ್ತೆ ಮಾರ್ಗದ ವಾಹನ ದಟ್ಟಣೆಯನ್ನು ನಿವಾರಿಸಿ ಸುಗಮ ರೈಲು ಸಂಚಾರಕ್ಕಾಗಿ ಅನುಮೋದಿತ ರೈಲ್ವೆ ಮೇಲ್ಸೇತುವೆ / ಕೆಳ ಸೇತುವೆಗಳ ನಿರ್ಮಾಣದ ಸುಮಾರು 803 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು.

02: 00 PM

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾರಿಗೆ ತಂದ ಇಂದಿರಾ ಕ್ಯಾಂಟೀನ್‌ ಯೋಜನೆಯು ನಗರ ಪ್ರದೇಶಗಳಲ್ಲಿ ಬಡವರು ಹಾಗೂ ಶ್ರಮಿಕರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ, ಉಪಾಹಾರ ಒದಗಿಸುವ ಮೂಲಕ ಅವರ ನೆಮ್ಮದಿಗೆ ಕಾರಣವಾಗಿತ್ತು. ಆದರೆ ಹಿಂದಿನ ಸರ್ಕಾರ ವಿವಿಧ ನೆಪಗಳೊಡ್ಡಿ, ಈ ಯೋಜನೆಯನ್ನು ಸ್ಥಗಿತಗೊಳಿಸಿ, ಬಡವರ ವಿರೋಧಿ ಕ್ರಮವನ್ನು ಅನುಸರಿಸಿತು.

ಇದೀಗ ಮೊದಲನೇ ಹಂತದಲ್ಲಿ (Phase-1) ಹೊಸ ಮೆನುವಿನೊಂದಿಗೆ, ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಬಿಬಿಎಂಪಿ ಹಾಗೂ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪುನರಾರಂಭ ಮಾಡಲಾಗುವುದು. ಎರಡನೇ ಹಂತದಲ್ಲಿ (Phase-2) ಎಲ್ಲಾ ಹೊಸ ಪಟ್ಟಣಗಳಲ್ಲಿ ಮತ್ತು ಬಿಬಿಎಂಪಿಯ ಹೊಸ ವಾರ್ಡ್‌ಗಳಲ್ಲಿ ಈ ಯೋಜನೆಯನ್ನು ವಿಸ್ತರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್‌ಗಳ ದುರಸ್ತಿ, ನವೀಕರಣ ಹಾಗೂ ನಿರ್ವಹಣೆಗೆ ರಾಜ್ಯ ಸರ್ಕಾರವು
100 ಕೋಟಿ ರೂ. ಒದಗಿಸಲಿದೆ.

ತ್ಯಾಜ್ಯ ಸಂಗ್ರಹಣೆ ಮತ್ತು ಸಂಸ್ಕರಣೆಯನ್ನು ಹೆಚ್ಚು ವೈಜ್ಞಾನಿಕವಾಗಿ ಮತ್ತು ಸುಸ್ಥಿರ ರೀತಿಯಲ್ಲಿ ವಿಲೇವಾರಿ ಮಾಡಲು ಬೆಂಗಳೂರು ಘನತಾಜ್ಯ ನಿರ್ವಹಣಾ ಸಂಸ್ಥೆಯ (BSWMCL) ಪರಿಣಾಮಕಾರಿ ಕಾರ್ಯಾಚರಣೆಗಾಗಿ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.

01: 35 PM

ರಾಜ್ಯದಲ್ಲಿನ ಆಸಿಡ್‍‍ ದಾಳಿ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಇವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಐದು ಲಕ್ಷ ರೂ.ಗಳವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು ಎರಡು ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು.

01: 30 PM

ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ಧಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು ವಾರ್ಷಿಕ ಆರು ತಿಂಗಳುಗಳಿಗೆ ನೀಡಲಾಗುತ್ತಿದ್ದು, ಇದನ್ನು 12 ತಿಂಗಳಿಗೆ ವಿಸ್ತರಿಸಲಾಗುವುದು. ಇದಕ್ಕೆ ವಾರ್ಷಿಕವಾಗಿ 50 ಕೋಟಿ ರೂ.ಗಳನ್ನು ಒದಗಿಸಲಾಗುವುದು.

01: 25 PM

ʻಸ್ವಾವಲಂಬಿ ಸಾರಥಿʼ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲದ ಶೇ.75 ರಷ್ಟು, ಗರಿಷ್ಠ ನಾಲ್ಕು ಲಕ್ಷ ರೂ. ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸಲಾಗುವುದು.

01: 15 PM

ರಾಜ್ಯದ ಸಾವಿರಾರು ಬಡಜನರಿಗೆ ಕೈಗೆಟಕುವ ದರದಲ್ಲಿ ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆ ನೀಡುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು (Kidwai Memorial Institute of Oncology) ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಲಬುರಗಿ ಮತ್ತು ಮೈಸೂರಿನಲ್ಲಿರುವ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ 20 ಕೋಟಿ ರೂ. ಒದಗಿಸಲಾಗುವುದು.

01: 15 PM

ಅಬಕಾರಿ

01:00 PM

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಇದೀಗ ಯೋಜನೆ ಮುಂದುವರಿಸಲು 60 ಕೋಟಿ ಅನುದಾನ ಅಲ್ಪಸಂಖ್ಯಾತ ಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ 28 ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡಲು ಶೇ.2ರ ಬಡ್ಡಿ ದರದಲ್ಲಿ ಸಾಲ.

ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯ ಐದು ಕೋಟಿ ವೆಚ್ಚದಲ್ಲಿ ಸ್ಥಾಪನೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹತ್ತು ತಿಂಗಳು ವಸತಿ ಸಹಿತ ಐಎಎಸ್ ಹಾಗೂ ಕೆ ಎ ಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿವಿ ಗಳಲ್ಲಿ ಪದವಿ ಸ್ನಾತಕೋತ್ತರ ವ್ಯಾಸಾಂಗ ಅನುಕೂಲಕ್ಕೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷದವರೆಗೆ ಸಾಲ.

12:55 PM

ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ

ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದೆ. ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ.

ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು ಮತ್ತು ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ ಸೆಂಟರ್ ತೆರೆಯಲಾಗುವುದು.

12:50 PM

ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಮುಂದಾಗಿದ್ದು, 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲು ಇಡಲಾಗಿದೆ. ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ನಿರ್ಧಾರ ಮಾಡಲಾಗಿದೆ.

12:45 PM

  • ಅಬಕಾರಿ ತೆರಿಗೆ ಶೇ.20ರಷ್ಟು ಹೆಚ್ಚಿಸಲಾಗಿದೆ. ಬಿಯರ್ ಮೇಲೆ ಶೇ 10ರಷ್ಟು ತೆರಿಗೆ ಹೆಚ್ಚಳ
  • ಆಹಾರ ಇಲಾಖೆಗೆ 10 ಸಾವಿರ ಕೋಟಿ ಅನುದಾನ
  • 100 ರೈತ ಉತ್ಪಾದನಾ ಕಂಪನಿಗಳಿಗೆ ಶೇ 4ರ ಬಡ್ಡಿದರದಲ್ಲಿ ಸಹಾಯಧನ
  • ಮೈಸೂರು, ಕಲಬುರ್ಗಿಯಲ್ಲಿ ಟ್ರಾಮಾ ಸೆಂಟರ್ ಚಿತ್ರದುರ್ಗಕ್ಕೆ ವೈದ್ಯಕೀಯ ಕಾಲೇಜು ಘೋಷಣೆ
  • ನಮ್ಮ ಮೆಟ್ರೊಗೆ 30ಸಾವಿರ ಕೋಟಿ ಅನುದಾನ
  • ಸಮಾಜ ಕಲ್ಯಾಣ ಇಲಾಖೆಗೆ 11 ಸಾವಿರ ಕೋಟಿ ಅನುದಾನ
  • ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರಾಂಡ್‌ಗೆ 10 ಕೋಟಿ ಅನುದಾನ
  • ಕೃಷಿ ಭಾಗ್ಯ ಯೋಜನೆಯಡಿ ನರೇಗಾ ಯೋಜನೆಗೆ 10 ಕೋಟಿ ಅನುದಾನ
  • ಇಂದಿರಾ ಕ್ಯಾಂಟೀನ್‌ಗೆ ₹100 ಕೋಟಿ ಅನುದಾನ
  • ಬೆಂಗಳೂರು ಅಭಿವೃದ್ಧಿಗೆ 45 ಸಾವಿರ ಕೋಟಿ ಅನುದಾನ
  • ಲೋಕೋಪಯೋಗಿ ಇಲಾಖೆಗೆ 10 ಸಾವಿರ ಕೋಟಿ ಅನುದಾನ

12:40 PM

ರಾಜ್ಯದ ಅರ್ಥವ್ಯವಸ್ಥೆ
ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೇಂದ್ರ ಸಾಂಖ್ಯಿಕ ಕಛೇರಿಯು ಬಿಡುಗಡೆ ಮಾಡಿರುವ ಮುಂಗಡ ಅಂದಾಜುಗಳ ಪ್ರಕಾರ ರಾಜ್ಯದ ಜಿ.ಎಸ್.ಡಿ.ಪಿ ಯು 2022-23ರಲ್ಲಿ ಶೇ. 7.9 ರಷ್ಟು ಬೆಳವಣಿಗೆ ದಾಖಲಿಸಿದೆ.

2021-22 ರಲ್ಲಿ ರಾಜ್ಯದ ಜಿ.ಎಸ್.ಡಿ.ಪಿ ಬೆಳವಣಿಗೆಯು ಶೇ.11 ರಷ್ಟು ದಾಖಲಾಗಿತ್ತು. 2022-23ರ ವಲಯವಾರು ಬೆಳವಣಿಗೆಯನ್ನು ಗಮನಿಸಿದರೆ, ಕೃಷಿ, ಕೈಗಾರಿಕೆ ಮತ್ತು ಸೇವಾ ವಲಯಗಳಲ್ಲಿನ ಬೆಳವಣಿಗೆಯು ಶೇ. 5.5, 5.1 ಮತ್ತು 9.2 ರಷ್ಟು ಬೆಳವಣಿಗೆಯನ್ನು ದಾಖಲಿಸಿರುತ್ತದೆ.

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅಂದರೆ, 2013-14 ರಿಂದ 2017-18ರವರೆಗೆ ಕೈಗಾರಿಕಾ ವಲಯದಲ್ಲಿ ಶೇ. 8.70 ರಷ್ಟು ಬೆಳವಣಿಗೆ (CAGR) ಹಾಗೂ ಸೇವಾ ವಲಯದಲ್ಲಿ ಶೇ. 9.69 ರಷ್ಟು ಬೆಳವಣಿಗೆ (CAGR) ದಾಖಲಾಗಿರುತ್ತದೆ. ಆದರೆ, 2019-20 ರಿಂದ 2022-23ರ ವರೆಗೆ ಕೈಗಾರಿಕಾ ವಲಯದಲ್ಲಿ ಶೇ. 3.86 ರಷ್ಟು ಬೆಳವಣಿಗೆ (CAGR) ಹಾಗೂ ಸೇವಾ ವಲಯದಲ್ಲಿ ಶೇ. 4.25 ರಷ್ಟು ಬೆಳವಣಿಗೆ (CAGR) ದಾಖಲಾಗಿದ್ದು, ಇದು ಕೋವಿಡ್‌ನಿಂದ ತತ್ತರಿಸಿದ ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಈ ಹಿಂದಿದ್ದ ಸರ್ಕಾರವು ವಿಫಲವಾಗಿರುವುದನ್ನು ಎತ್ತಿ ತೋರಿಸುತ್ತದೆ.

12:38 PM

ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲು
ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ
ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ
ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ

ಬೆಂಗಳೂರಿಗೆ 45,000 ಕೋಟಿ ಅನುದಾನ: ಬೆಂಗಳೂರು ವೈಟ್‌ ಟಾಪಿಂಗ್​, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು-ದುರಸ್ತಿಗೆ ಅನುದಾನ, ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆದ್ಯತೆ

12:31 PM

ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯದ ಜನತೆ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದೆ. ಕೋವಿಡ್‌ 19 ರಿಂದಾಗಿ ಹಾಗೂ ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಹಿಂದಿನ ಸರ್ಕಾರದ ಸಂವೇದನಾರಹಿತ ಕಾರ್ಯನಿರ್ವಹಣೆಯ ಪರಿಣಾಮ, ಒಪ್ಪತ್ತಿನ ಊಟಕ್ಕೂ ಸಂಚಕಾರ ಒದಗಿದ್ದು ಸುಳ್ಳಲ್ಲ. ದುಡಿಯುವ ಕೈಗಳಿಗೆ ಕೆಲಸ ತಪ್ಪಿದ್ದೂ ನೋಡಿದ್ದೇವೆ. ಉದ್ಯಮಗಳು ಮುಚ್ಚಿದ್ದರಿಂದ ಸಾವಿರಾರು ಕಾರ್ಮಿಕರು ನೌಕರಿ ಕಳೆದುಕೊಂಡು ಬೀದಿ ಪಾಲಾಗಬೇಕಾಯಿತು. ತಮ್ಮ ಅರ್ಹತೆಗಿಂತ ಕಡಿಮೆ ಮಟ್ಟದ ನೌಕರಿ ನೆಚ್ಚಿಕೊಂಡವರು ಅದೆಷ್ಟೋ? ಒಂದೆಡೆ ಸಾಂಕ್ರಾಮಿಕದ ಭೀತಿ; ಮತ್ತೊಂದೆಡೆ ಹೊಟ್ಟೆಪಾಡಿನ ಚಿಂತೆ. ಸಂಕಷ್ಟಗಳ ಸರಮಾಲೆಗೆ ಬೆಲೆ ಏರಿಕೆಯ ಸೇರ್ಪಡೆಯಿಂದ, ಬಡಜನರ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಸಾಮಾನ್ಯ ವರ್ಗದ ಜನರ ಬದುಕು ಮೂರಾಬಟ್ಟೆಯಾಗಿ ಸಂಕಟ ಅನುಭವಿಸಿದ್ದು ನಾವೆಲ್ಲರೂ ಕಂಡಿದ್ದೇವೆ.

ನಮ್ಮ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲವನ್ನು ನಮ್ಮ ಸರ್ಕಾರವು ಜನರಿಗೆ ಹೆಚ್ಚಿನ ಹೊರೆಯಾಗದಂತೆ ಹೊಂದಿಸಲಿದೆ. ಈ ನಿಟ್ಟಿನಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟುವುದರ ಜೊತೆಗೆ ಸರ್ಕಾರದ ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಕ್ರಮ ವಹಿಸಲಾಗುವುದು. ವಿತ್ತೀಯ ಸಂಪನ್ಮೂಲಗಳು ಹಾಗೂ ಆಡಳಿತದ ದಕ್ಷ ನಿರ್ವಹಣೆ ಒಂದು ಕಲೆ ಮತ್ತು ವಿಜ್ಞಾನ; ಕೇವಲ ಸಾಮಾಜಿಕ ಜಾಲತಾಣಗಳ ಸಂದೇಶವಲ್ಲ ಎಂಬುದನ್ನು ಅರಿತರೆ ಒಳ್ಳೆಯದು. ಈ ಯೋಜನೆಗಳು ಅರ್ಹರಿಗೆ ನೇರವಾಗಿ ತಲುಪುವುದರಿಂದ ಹಾಗೂ ಬವಣೆಗಳ ಭಾರದಿಂದ ಏದುಸಿರು ಬಿಡುತ್ತಿರುವ ಬಡವರ ಬದುಕಿನಲ್ಲಿ ಪ್ರಾಣವಾಯುವಿನಂತೆ ಕೆಲಸ ಮಾಡುವುದೆಂಬ ಆಶಯದೊಂದಿಗೆ ಇವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ.

12:30 PM

ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಒಂದು ವರ್ಷದಲ್ಲಿ ಸುಮಾರು 52,000 ಕೋಟಿ ರೂ.ಗಳನ್ನು ಅಂದಾಜು 1.30 ಕೋಟಿ ಕುಟುಂಬಗಳಿಗೆ ತಲುಪಿಸುವುದರಿಂದ ಪ್ರತೀ ಕುಟುಂಬಕ್ಕೆ ಮಾಸಿಕ 4,000 ರಿಂದ 5,000 ರೂ.ಗಳಷ್ಟು, ಅಂದರೆ, ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಿದಂತಾಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ (Universal basic income) ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ.

ಬಡವರ ಕೈಗೆ ಹೆಚ್ಚಿನ ಹಣ ನೀಡುವುದರ ಹಿಂದಿರುವ ಪ್ರಬಲ ಆರ್ಥಿಕ ತರ್ಕವನ್ನು ಸದನದ ಗೌರವಾನ್ವಿತ ಸದಸ್ಯರು ಗಮನಿಸಬಹುದಾಗಿದೆ. ಜಿ.ಎಸ್‌.ಟಿ. ಯ ಬಹುಪಾಲು ಮೊತ್ತವು ಸಮಾಜದ ತಳಹಂತದ ಶೇ.60 ರಷ್ಟು ಜನರಿಂದ ಸಂಗ್ರಹವಾಗುತ್ತಿದ್ದರೂ ಆರ್ಥಿಕ ವ್ಯವಸ್ಥೆಯ ಹೆಚ್ಚಿನ ಲಾಭವು ಸಮಾಜದ ಮೇಲ್ಮಟ್ಟದ ಶೇ.10 ರಷ್ಟು ಜನರಿಗೆ ತಲುಪುತ್ತಿದೆ. ಆದ್ದರಿಂದ ಬಡವರಿಗೆ ಸಂಪತ್ತನ್ನು ಮರುಹಂಚಿಕೆ ಮಾಡುವ ನೀತಿಗಳನ್ನು ಜನಪರ ಸರ್ಕಾರಗಳು ಅನುಸರಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಈ ಕೆಲಸವನ್ನು ಮಾಡುತ್ತವೆ.

12:28 PM

ʻನಡೆಯ ಚೆನ್ನ ನುಡಿದು ತೋರಿ, ನುಡಿಯ ಚೆನ್ನ ನಡೆದು ತೋರಿʼ ಎಂಬ ಬಸವಣ್ಣನವರ ವಚನದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಚಾಲನೆ ನೀಡುವ ಮೂಲಕ ನುಡಿದಂತೆ ನಡೆಯುವ ನಮ್ಮ ಸರ್ಕಾರದ ಬದ್ಧತೆಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದೇವೆ.

12:25 PM

ನಮ್ಮ ಮೆಟ್ರೋಗೆ ₹30 ಸಾವಿರ ಕೋಟಿ
ಅನುಗ್ರಹ ಯೋಜನೆ ಮರುಜಾರಿ
ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೈತರಿಗೆ
ಸಮಾಜ ಕಲ್ಯಾಣ ಇಲಾಖೆಗೆ 11,173 ಕೋಟಿ

12:20 PM

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಚಾಲನೆ ನೀಡಿ, ನುಡಿದಂತೆ ನಡೆದಿದ್ದೇವೆ : ಸಿಎಂ

12:15 PM 2023ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮಂಡಿಸಲು ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೂರು ಲಕ್ಷದ 27 ಸಾವಿರ ಕೋಟಿ ಬಜೆಟ್ ಮಂಡಿಸುವುದಾಗಿ ತಿಳಿಸಿದ ಸಿಎಂ

ಸಿದ್ದರಾಮಯ್ಯ ಬಜೆಟ್

12:05 PM ನೀಲಿಬಣ್ಣದ ಸೂಟ್‌ನಲ್ಲಿ ಮಿಂಚಿದ ಸ್ಪೀಕರ್ ಯು ಟಿ ಖಾದರ್

ಬಜೆಟ್ ಅಧಿವೇಶನಕ್ಕೆ ವಿಧಾನಸಭೆಗೆ ಆಗಮಿಸಿದ ಸ್ಪೀಕರ್ ಯು ಟಿ ಖಾದರ್, ನೀಲಿಬಣ್ಣದ ಸೂಟ್‌ನಲ್ಲಿ ಮಿಂಚಿದ್ದಾರೆ. ಜನಪರ ಬಜೆಟ್ ಮಂಡನೆಯಾಗುವ ನಿರೀಕ್ಷೆಯಿಂದ ಬಂದಿದದ್ದೇನೆ ಎಂದು ತಿಳಿಸಿದರು.

ಯುಟಿಕೆ

ಈ ವರ್ಷದಲ್ಲೇ ಐದೂ ಗ್ಯಾರಂಟಿ ಜಾರಿ: ಡಿಸಿಎಂ ಡಿಕೆ ಶಿವಕುಮಾರ್

ನಮ್ಮ ಸರ್ಕಾರ ಈಗಾಗಲೇ ಮೂರು ಗ್ಯಾರಂಟಿ ಯೋಜನೆ ಜಾರಿ ಮಾಡಿದೆ. ಈ ವರ್ಷದಲ್ಲೇ ಐದೂ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಮುಂದುವರಿದು, “ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಪ್ರತಿಪಕ್ಷಗಳೇ ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ” ಎಂದರು.

12:05 PM

ಬಜೆಟ್ ಬ್ರೀಫ್ ಕೇಸನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದ ಅಧಿಕಾರಿಗಳು

11:45 AM

ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ-ಎದೆ ಎತ್ತಿ ಉತ್ತರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ 45 ದಿನಗಳ ಒಳಗೇ ಜಾರಿ ಮಾಡಿದ್ದೇವೆ. ಇದನ್ನು ಪ್ರತಿಯೊಬ್ಬ ಮತದಾರರಿಗೆ ಅರ್ಥ ಮಾಡಿಸಿ, ವಿಧಾನಸಭೆ ಅಧಿವೇಶನದಲ್ಲಿ ಎದೆ ಎತ್ತಿ ಹೆಮ್ಮೆಯಿಂದ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಶಾಸಕರಿಗೆ ಹುರಿದುಂಬಿಸಿದರು.

ಸಂಪುಟ ಸಭೆಗೂ ಮುನ್ನ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದರು.

11:15 AM

ಟ್ವೀಟ್ ಮೂಲಕ ಜನರ ಆಶೀರ್ವಾದ ಕೋರಿದ ಸಿಎಂ ಸಿದ್ದರಾಮಯ್ಯ

11:05 AM

ಶಾಸಕಾಂಗ ಪಕ್ಷದ ನಾಯಕ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ರಾಜ್ಯ ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ವಿಧಾನಸೌಧದ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X