ಲೋಕಸಭೆ ಹಣಾಹಣಿ -2024 | 5 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90 ಮತದಾನ

Date:

Advertisements

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಸಂಜೆ 5ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90ರಷ್ಟು ಮತದಾನವಾಗಿದೆ.

ದೇಶದಲ್ಲಿ ಇಂದು (ಏ.26) ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇದಾಗಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆದಿದೆ.

ಬೆಳಿಗ್ಗೆ 7ಗಂಟೆಗೆ ಮತದಾನ ಪ್ರಕ್ರಿಯೆ ರಾಜ್ಯದಲ್ಲಿ ಆರಂಭವಾಯಿತು. ಬಿಸಿಲಿನ ಕಾವು ಏರುವ ಹೊತ್ತಿಗೆ ಶೇ.22.34ರಷ್ಟು ಮತದಾನ ರಾಜ್ಯದಲ್ಲಿ ಕಂಡು ಬಂತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ.38.23ರಷ್ಟು, 3 ಗಂಟೆ ಹೊತ್ತಿಗೆ ಶೇ.50.93ರಷ್ಟು, ಹಾಗೂ ಸಂಜೆ 5 ಗಂಟೆಗೆ ಶೇ.63.90 ರಷ್ಟು ಮತದಾನ ನಡೆದಿದೆ. ಸಂಜೆ 6 ಗಂಟೆಗೆ ಮತದಾನ ಪ್ರಕ್ರಿಯೆ ಮುಗಿಯಲಿದೆ.

Advertisements

ರಾಜ್ಯದಲ್ಲಿ ಬಹುತೇಕ ಕಡೆ ಮತದಾರರು ಉತ್ಸಾಹದಿಂದಲೇ ಮತಚಲಾಯಿಸಿದ್ದಾರೆ. ಶತಾಯುಸಿಗಳು ಮತಗಟ್ಟೆಗೆ ಬಂದು ಮತಚಾಲಯಿಸಿದ್ದು ಅಲ್ಲಲ್ಲಿ ಕಂಡುಬಂತು. ಸ್ಟಾರ್‌ ನಟರುಮ ಸೆಲೆಬ್ರೆಟಿಗಳು ತಮ್ಮ ಹತ್ತರಿದರ ಬೂತ್‌ಗಳಿಗೆ ತೆರಳಿ ಮತ ಚಲಾಯಿಸಿದರು.

ಅಭ್ಯರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರು ದೇವಸ್ಥಾನಗಳಿಗೆ ತೆರಳಿ, ಹಿರಿಯರ ಅಶೀರ್ವಾದ ಪಡೆದು ಮತಚಲಾಯಿಸಿದರು. ಇದೇ ವೇಳೆ ಪ್ರಮುಖ ನಾಯಕಾರ ಕುಮಾರಸ್ವಾಮಿ, ಡಿ ಕೆ ಶಿವಕುಮಾರ್‌ ಮತ ಚಲಾಯಿಸಿದ ಬಳಿಕ ಪರಸ್ಪರ ಟೀಕೆಗಳನ್ನು ಮಾಧ್ಯಮಗಳ ಮುಂದೆ ಮಾಡಿದರು.

ಕೆಲವು ಕಡೆ ವಿಳಂಬ

ಹುಣಸೂರು, ರಾಮನಗರ, ಮಂಗಳೂರು, ಚಿಕ್ಕಮಗಳೂರು, ವಿಟ್ಲ, ಸಳ್ಯ ಸೇರಿದಂತೆ ಕೆಲವು ಬೂತ್‌ಗಳಲ್ಲಿ ಇವಿಎಂ ಕೈಕೊಟ್ಟ ಕಾರಣ ಮತದಾನ ತಡವಾಗಿ ಆರಂಭವಾಯಿತು.

ಕಲ್ಲು ತೂರಾಟ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರು, ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ, ಇವಿಎಂಗೆ ಹಾನಿ ಮಾಡಿದರು.

ಮತದಾನ ಬಹಿಷ್ಕಾರ

ಚಿತ್ರದುರ್ಗ ತಾಲ್ಲೂಕಿನಲ್ಲಿ ಗಣಿಬಾಧಿತ ಪ್ರದೇಶದ ವ್ಯಾಪ್ತಿಯಿಂದ ಹೊರಗಿಟ್ಟ ಕ್ರಮವನ್ನು ವಿರೋಧಿಸಿ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದ ಸಿದ್ದಾಪುರ ಗ್ರಾಮಸ್ಥರು, ಶುಕ್ರವಾರ ಮತಗಟ್ಟೆಯತ್ತಲೇ ಸುಳಿಯಲಿಲ್ಲ.

ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಮತಗಟ್ಟೆಯ ಬಳಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗ ಚಾಮರಾಜಪೇಟೆ ಮತಗಟ್ಟೆಯ ಬಳಿ ನಡೆಯಿತು. ಮತಗಟ್ಟೆಯ ಬಳಿ ಬಿಜೆಪಿ ಕಾರ್ಯಕರ್ತರು ನಿಂತಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಮಧ್ಯಪ್ರವೇಶ ಮಾಡಿದ ಪೊಲೀಸರು ಗುಂಪನ್ನು ಚದುರಿಸಿದರು.

ಶಿಕ್ಷಕಿ ಹೃದಯಾಘಾತದಿಂದ ನಿಧನ

ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿ ಮೇಗಳ ಗೊಲ್ಲರಹಟ್ಟಿ ಮತಗಟ್ಟೆಗೆ ನಿಯೋಜನೆಗೊಂಡಿದ್ದ ಶಿಕ್ಷಕಿ ಯಶೋಧಮ್ಮ(58)ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತ ಶಿಕ್ಷಕಿ ಬೊಮ್ಮಸಮುದ್ರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ

ಉಡುಪಿ-ಚಿಕ್ಕಮಗಳೂರು – ಶೇ.72.13
ಹಾಸನ – ಶೇ.72.13
ದಕ್ಷಿಣ ಕನ್ನಡ – ಶೇ.71.83
ಚಿತ್ರದುರ್ಗ – ಶೇ.67.00
ತುಮಕೂರು – ಶೇ.72.10
ಮಂಡ್ಯ – ಶೇ.74.87
ಮೈಸೂರು – ಶೇ.65.85
ಚಾಮರಾಜನಗರ – ಶೇ. 69.60
ಬೆಂಗಳೂರು ಗ್ರಾಮಾಂತರ – ಶೇ.61.78
ಬೆಂಗಳೂರು ಉತ್ತರ – ಶೇ.50.4
ಬೆಂಗಳೂರು ಕೇಂದ್ರ – ಶೇ.48.61
ಬೆಂಗಳೂರು ದಕ್ಷಿಣ – ಶೇ.49.37
ಚಿಕ್ಕಬಳ್ಳಾಪುರ – ಶೇ. 70.97
ಕೋಲಾರ – ಶೇ.71.26

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X