ಲೋಕಸಭೆ | ಗುಂಡೂರಾವ್, ಕೃಷ್ಣಭೈರೇಗೌಡರಿಗೆ ರಾಜ್ಯದಲ್ಲೇ ಮುಂದುವರಿಯಲು ಹೈಕಮಾಂಡ್ ಸೂಚನೆ

Date:

ರಾಜ್ಯದಲ್ಲಿ ಹಿರಿಯ ಸಚಿವರನ್ನು ಲೋಕಸಭೆ ಚುನಾವಣೆಗೆ ಕಣಕ್ಕಿಳಿಸುವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ವಿಭಿನ್ನ ನಿಲುವು ತಾಳಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿದೆ.‌

- Advertisement -

ರಾಜ್ಯದಲ್ಲಿ ಪ್ರಮುಖ ಎಂಟು ಸಚಿವರನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಐಸಿಸಿಗೆ ಸರ್ವೆ ರಿಪೋರ್ಟ್ ಸಲ್ಲಿಸಿದ್ದರು. ಮೊನ್ನೆಯಷ್ಟೇ ರಾಜ್ಯಕ್ಕೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆ ಈ ಬಗ್ಗೆ ಆಪ್ತವಾಗಿ ಚರ್ಚೆ ಕೂಡ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ನಿಟ್ಟಿನಲ್ಲಿ ಬಹುತೇಕ ಸಚಿವರು ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಲೋಕಸಭೆ ಸ್ಪರ್ಧೆಗೆ ನಿರಾಸಕ್ತಿ ವ್ಯಕ್ತಪಡಿಸಿದ್ದರು. ‘ಪಕ್ಷ ಹೇಳಿದರೆ ಸ್ಫರ್ಧೆ ಮಾಡಬೇಕಾಗುತ್ತದೆ’ ಎಂದು ಸುರ್ಜೇವಾಲ ಅವರು ಸಚಿವರಿಗೆ ಸ್ಪಷ್ಟವಾಗಿ ಹೇಳಿ ಕಳಿಸಿದ್ದರು.

ಇದೀಗ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಹೈಕಮಾಂಡ್ ವಿಭಿನ್ನ ನಿಲುವನ್ನು ತಳೆದಿದ್ದು, ಸಚಿವರ ಲೋಕಸಭೆ ಸ್ಪರ್ಧೆಯ ವಿಚಾರವನ್ನು ಆಡಳಿತಾತ್ಮಕ ದೃಷ್ಟಿಯಿಂದ ಚರ್ಚೆ ನಡೆಸಿದೆ. ವಿಶೇಷವಾಗಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಹಾಗೂ ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡರನ್ನ ರಾಜ್ಯ ರಾಜಕಾರಣದಲ್ಲೇ ಮುಂದುವರಿಸಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

ರಾಜ್ಯದ ಆರೋಗ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಕಾರ್ಯವೈಖರಿ ಉತ್ತಮವಾಗಿದೆ. ಎರಡೂ ಕೂಡ ಮಹತ್ವದ ಇಲಾಖೆಗಳಾಗಿದ್ದು, ಇಬ್ಬರು ಸಚಿವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಸಭೆಗೆ ಕಣಕ್ಕಿಳಿಸಿ ಅನಗತ್ಯ ಗೊಂದಲ ಸೃಷ್ಟಿ ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಕುರಿತಂತೆ ದೆಹಲಿಯಲ್ಲಿ ದಿನೇಶ್ ಗುಂಡೂರಾವ್ ಹಾಗೂ ಕೃಷ್ಣಬೈರೇಗೌಡರ ಜೊತೆ ಚರ್ಚೆ ನಡೆಸಿರುವ ಹೈಕಮಾಂಡ್ ನಾಯಕರು, ರಾಜ್ಯ ರಾಜಕಾರಣದಲ್ಲೇ ಮುಂದುವರಿಯುವಂತೆ ಸಲಹೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಬದುಕಿನಲ್ಲಿ ಬದಲಾವಣೆ ತರಲು ಯುವನಿಧಿ ಜಾರಿಗೆ ತಂದಿದ್ದೇವೆ: ಡಿಸಿಎಂ ಡಿ ಕೆ ಶಿವಕುಮಾರ್

ಪ್ರಮುಖ ಖಾತೆ ಹೊಂದಿರುವ ಎಲ್ಲ ಸಚಿವರನ್ನ ಲೋಕಸಭೆಗೆ ಕಣಕ್ಕಿಳಿಸಿದರೆ ಆಡಳಿತಾತ್ಮಕವಾಗಿ ಸಮಸ್ಯೆಯಾಗಬಹುದು. ಆರು ತಿಂಗಳಿಗೆ ಸಚಿವರೆಲ್ಲ ಇಲಾಖೆ ಕಾರ್ಯ ಬಿಟ್ಟು ಚುನಾವಣೆಯಲ್ಲಿ ಧುಮುಕಿದರೆ ಜನರು ಸರ್ಕಾರದ ಬಗ್ಗೆ ಬೇರೆ ರೀತಿಯ ವ್ಯಾಖ್ಯಾನ ಮಾಡಬಹುದು. ಅಲ್ಲದೇ ಕೋವಿಡ್ ಉಲ್ಬಣಗೊಂಡರೆ, ಪ್ರತಿಪಕ್ಷಗಳಿಗೆ ಆಹಾರವಾಗಬೇಕಾಗುತ್ತದೆ. ಹೀಗಾಗಿ ಜವಾಬ್ದಾರಿಯುತವಾಗಿ ಇಲಾಖೆ ಆಡಳಿತದ ಕಡೆ ಹೆಚ್ಚು ಗಮನ ಹರಿಸುವುದರೊಂದಿಗೆ, ಚುನಾವಣೆಗೆ ಸಹಾಕರ ನೀಡುವಂತೆ ಗುಂಡೂರಾವ್, ಹಾಗೂ ಕೃಷ್ಣಬೈರೇಗೌಡರಿಗೆ ಎಐಸಿಸಿ ನಾಯಕರು ಸೂಚಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಲೋಕಸಭೆಗೆ ಕಣಕ್ಕಿಳಿಸುವ ಎಂಟು ಸಚಿವರ ಪಟ್ಟಿಯಿಂದ ಇಬ್ಬರು ಪ್ರಮುಖ ಖಾತೆಯ ಸಚಿವರನ್ನ ಕೈಬಿಟ್ಟಿರುವ ಕಾಂಗ್ರೆಸ್ ಹೈಕಮಾಂಡ್, ತುಮಕೂರು ಕ್ಷೇತ್ರದಲ್ಲೂ ಕೆ.ಎನ್ ರಾಜಣ್ಣ ಕಣಕ್ಕಿಳಿಸುವ ಬದಲು ಮುದ್ದಹನುಮೇಗೌಡರನ್ನ ಪಕ್ಷಕ್ಕೆ ಸೇರಿಸಿಕೊಂಡು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...