ಲೋಕಸಭೆ ಚುನಾವಣೆ | ಡ್ರಗ್ಸ್ ಸೇರಿದಂತೆ 8,889 ಕೋಟಿ ರೂ. ವಶ

Date:

ಚುನಾವಣಾ ಸಮಯದಲ್ಲಿ ದೇಶಾದ್ಯಂತ ಈ ವರೆಗೆ 8,889 ಕೋಟಿ ರೂ. ಮೌಲ್ಯದ ಹಣ, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ, 45% ಮಾದಕ ವಸ್ತುಗಳು ಸೇರಿವೆ ಎಂದುಭಾರತೀಯ ಚುನಾವಣಾ ಆಯೋಗ (ಇಸಿಐ) ಮಾಹಿತಿ ನೀಡಿದೆ.

- Advertisement -

ಲೋಕಸಭಾ ಚುನಾವಣೆಯ ನಾಲ್ಕು ಹಂತದ ಮತದಾನ ಮುಗಿದಿದೆ. ಇನ್ನೂ 3 ಹಂತಗಳ ಮತದಾನ ನಡೆಸಬೇಕಿದೆ. ಈ ನಡುವೆ, ಬರೋಬ್ಬರಿ ಸುರಿಸುಮಾರು 9 ಸಾವಿರ ಕೋಟಿ ರೂ. ಮೌಲ್ಯದ ಹಣ ಮತ್ತು ವಸ್ತುಗಳು ಚುನಾವಣಾ ಅಧಿಕಾರಿಗಳ ವಶವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

“ವಶಪಡಿಸಿಕೊಂಡ ವಸ್ತುಗಳಲ್ಲಿ ಮಾದಕ ವಸ್ತುಗಳು ಮತ್ತು ಸೈಕೋಟ್ರೋಪಿಕ್ ಪದಾರ್ಥಗಳು ಸೇರಿದ್ದು, ಅವುಗಳು ಹೆಚ್ಚು ಅಪಾಯಕಾರಿಯಾಗಿವೆ. ಮಾರ್ಚ್ 1ರಿಂದ ವಶಪಡಿಸಿಕೊಳ್ಳುವಿಕೆಯಲ್ಲಿ ಗಮನಾರ್ಹ ಏರಿಕೆ ಕಂಡುಬರುತ್ತಿದೆ” ಎಂದು ಆಯೋಗ ಹೇಳಿದೆ.

ಗುಜರಾತ್ ಎಟಿಎಸ್, ಎನ್‌ಸಿಬಿ ಮತ್ತು ಇಂಡಿಯನ್ ಕೋಸ್ಟ್ ಗಾರ್ಡ್ ಜಂಟಿ ಕಾರ್ಯಾಚರಣೆಯಲ್ಲಿ ಕೇವಲ ಮೂರು ದಿನಗಳಲ್ಲಿ 892 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿವೆ. ಗುಜರಾತ್, ಮಹಾರಾಷ್ಟ್ರ ಮತ್ತು ದೆಹಲಿ ಹೊರತುಪಡಿಸಿ ಇತರ ರಾಜ್ಯಗಳಲ್ಲಿಯೂ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಉತ್ತರ ಪ್ರದೇಶದ ನೋಯ್ಡಾ ಪೊಲೀಸರು ಶುಕ್ರವಾರ, ಗ್ರೇಟರ್ ನೋಯ್ಡಾದ ಡ್ರಗ್ ಫ್ಯಾಕ್ಟರಿ ಮೇಲೆ ದಾಳಿನಡೆಸಿದ್ದರು. ಅಲ್ಲಿ 150 ಕೋಟಿ ರೂ, ಮೌಲ್ಯದ 26.7 ಕೆಜಿ ಎಂಡಿಎಂಎ ಡ್ರಗ್ಸ್‌ ಪತ್ತೆಯಾಗಿತ್ತು. ಅಲ್ಲದೆ, ಅಲ್ಲಿದ್ದ ಇಬ್ಬರು ವಿದೇಶಿ ಮೂಲದ ವ್ಯಕ್ತಿಗಳನ್ನು ಬಂಧಿಸಲಾಗಿದೆ” ಎಂದು ಆಯೋಗ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಸಿಜೆಪಿ ಪ್ರತಿಭಟನೆ ಬೆನ್ನಲ್ಲೇ ಹೋರಾಟಗಾರರ ವಿರುದ್ಧ ಮೂರು ಎಫ್‌ಐಆರ್ ದಾಖಲು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ (SIR) ಅಕ್ರಮ ನಡೆದಿದೆ ಎಂದು ಆರೋಪಿಸಿ,...

ದೆಹಲಿಯಲ್ಲಿ ಹೊಸ ಖಾಸಗಿ ಶಾಲೆಗಳ ಸ್ಥಾಪನೆ ನಿಯಮ ಸಡಿಲಿಕೆ: ಎರಡು ಕಡ್ಡಾಯ ಷರತ್ತುಗಳ ರದ್ದು

ಹೊಸ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಇರುವ ನಿಯಮಗಳನ್ನು ದೆಹಲಿ ಸರ್ಕಾರವು ಸಡಿಲಿಸಿದ್ದು,...

ಕೇರಳ ಸರ್ಕಾರದಲ್ಲಿ ಭಿನ್ನಮತ ಸ್ಫೋಟ; ಮುಖ್ಯಮಂತ್ರಿ ವಿರುದ್ಧವೇ ತಿರುಗಿಬಿದ್ದ ಯುಡಿಎಫ್ ಸಂಚಾಲಕ

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ...