ಲೋಕಸಭಾ ಚುನಾವಣೆ | ಜೆಡಿಎಸ್‌ಗೆ 3 ಕ್ಷೇತ್ರ- ಹಾಸನ, ಮಂಡ್ಯ, ಕೋಲಾರ ಬಿಟ್ಟುಕೊಟ್ಟ ಬಿಜೆಪಿ

Date:

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಯೂ ಆರಂಭವಾಗಿದೆ. ಈ ನಡುವೆ, ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ನಡುವೆ ಇನ್ನೂ ಸೀಟು ಹಂಚಿಕೆ ಕಸರತ್ತು ನಡೆಯುತ್ತಲೇ ಇದ್ದು, ಜೆಡಿಎಸ್‌ಗೆ 3 ಕ್ಷೇತ್ರಗಳನ್ನು ಬಿಜೆಪಿ ಬಿಟ್ಟುಕೊಟ್ಟಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ತಿಳಿದುಬಂದಿದೆ. ಅಲ್ಲದೆ, ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರ ಅಳಿಯ ಸಿ.ಎನ್ ಮಂಜುನಾಥ್ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈಗಾಗಲೇ, ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಅಭ್ಯರ್ಥಿಗಳ ಘೋಷಣೆ ವೇಳೆ, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಯಾವುದೇ ಸಭೆಗಳಿಗೆ ತಮ್ಮನ್ನು ಕರೆಯುತ್ತಿಲ್ಲ ಎಂದು ಜೆಡಿಎಸ್‌ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, 2 ಕ್ಷೇತ್ರಕ್ಕಾಗಿ ಇಷ್ಟೆಲ್ಲ ಮಾಡಬೇಕಿತ್ತಾ ಎಂದು ಎರಡು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ನಾಯಕ ಎಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದರು. ಇದೀಗ, ಮೂರು ಕ್ಷೇತ್ರಗಳನ್ನು ಜೆಡಿಎಸ್‌ ತನ್ನ ಪಾಲಿಗೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಜೆಡಿಎಸ್ ಮತ್ತು ಬಿಜೆಪಿ ನಡುವಿನ ಸೀಟು ಹಂಚಿಕೆ ಮಾತುಕತೆ ಕೋಲಾರ ಕ್ಷೇತ್ರದಲ್ಲಿ ಬಿಕ್ಕಟ್ಟಿಗೆ ಸಿಲುಕಿದೆ. ಕಳೆದ ಬಾರಿ, ಕೋಲಾರದಲ್ಲಿ ಗೆದ್ದಿದ್ದ ಬಿಜೆಪಿ, ಕ್ಷೇತ್ರದಲ್ಲಿ ತನ್ನ ಹಿಡಿತ ಸಾಧಿಸಲು ಬಯಸಿತ್ತು. ಆದರೆ, ಜೆಡಿಎಸ್ ಎರಡು ಸ್ಥಾನಕ್ಕೆ ಒಪ್ಪುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿತ್ತು.

2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದನ್ನು ಗೆದ್ದಿದ್ದವು. ಕಳೆದ ವರ್ಷ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕಾರದಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...