ಮುಂಬರಲಿರುವ ಲೋಕಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಈಗಾಗಲೇ ತಯಾರಿ ನಡೆಸಿಕೊಳ್ಳುತ್ತಿದೆ. ಇದೇ ಹಿನ್ನೆಲೆಯಲ್ಲಿ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ಕೂಡ ತನ್ನ ‘ಸೆಂಟ್ರಲ್ ವಾರ್ ರೂಮ್’ ಅನ್ನು ರಚಿಸಿದೆ.
ಸಂಘಟನಾತ್ಮಕ ವಾರ್ ರೂಮ್ನ ಅಧ್ಯಕ್ಷರಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆ ಮಾಡಿದ್ದಾರೆ.
ಉಳಿದಂತೆ ಉಪಾಧ್ಯಕ್ಷರುಗಳಾಗಿ ಗೋಕುಲ್ ಬುತೈಲ್, ನವೀನ್ ಶರ್ಮಾ, ವರುಣ್ ಸಂತೋಷ್, ಅರವಿಂದ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಹಾಗೂ ಸಂವಹನ ವಾರ್ ರೂಮ್ ಅಧ್ಯಕ್ಷರಾಗಿ ಆಗಿ ವೈಭವ್ ವಾಲಿಯಾರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವರ್ಷದ ವೇಣುಗೋಪಾಲ್ ಅವರು ತಿಳಿಸಿದ್ದಾರೆ.
ಶಶಸಿಕಾಂತ್ ಸೆಂಥಿಲ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ವೇಳೆಯೇ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿ, ಬಳಿಕ ಕಾಂಗ್ರೆಸ್ ಸೇರಿದ್ದರು. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಇಲ್ಲದೇ ಇದ್ದರೂ, ಪಕ್ಷದಲ್ಲಿ ಸ್ಟ್ರಾಟಜಿ ಮೇಕರ್ ಆಗಿ ಕೆಲಸ ಮಾಡಿದ್ದರು.