ಲೋಕಸಭೆ ಚುನಾವಣೆ| ನೂರರ ಗಡಿಯಲ್ಲಿ ಕಾಂಗ್ರೆಸ್‌, ಇಂಡಿಯಾ ಒಕ್ಕೂಟಕ್ಕೆ ಬೃಹತ್ ಕೊಡುಗೆ

Date:

ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೂರರ ಗಡಿಯನ್ನು ದಾಟಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಇಂಡಿಯಾ ಒಕ್ಕೂಟಕ್ಕೆ ಬೃಹತ್ ಕೊಡುಗೆಯನ್ನು ನೀಡಲು ಕಾಂಗ್ರೆಸ್ ಸಜ್ಜಾಗಿದೆ.

- Advertisement -

2014ರಲ್ಲಿ ಕೇವಲ 44 ಮತ್ತು 2019ರ ಚುನಾವಣೆಯಲ್ಲಿ 52 ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದ ಕಾಂಗ್ರೆಸ್ 2024ರಲ್ಲಿ ನೂರಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಹಾದಿಯಲ್ಲಿದೆ. 2009ರಲ್ಲಿ ಯುಪಿಎ 206 ಸ್ಥಾನಗಳನ್ನು ಗೆದ್ದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನು ಓದಿದ್ದೀರಾ?  ರಾಹುಲ್ ಗಾಂಧಿ ದೇಶ ಮುನ್ನಡೆಸಬೇಕು ಎಂಬುವುದು ರಾಷ್ಟ್ರದ ಆಶಯ: ಸಂಜಯ್ ರಾವತ್

ಬೆಳಗ್ಗೆ 11.15ಕ್ಕೆ ಕಾಂಗ್ರೆಸ್ 99 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇಂಡಿಯಾ ಒಕ್ಕೂಟವು 226ಕ್ಕೂ ಅಧಿಕ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಎಕ್ಸಿಟ್‌ ಪೋಲ್‌ಗಳ ಲೆಕ್ಕಾಚಾರವನ್ನು ಹುಸಿಯಾಗಿಸುತ್ತಿದೆ. ಎನ್‌ಡಿಎ 291 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

2014ರಲ್ಲಿ ಏನಾಯಿತು?

2014ರಲ್ಲಿ ಕಾಂಗ್ರೆಸ್ ಮೋದಿ ಅಲೆಯನ್ನು ಎದುರಿಸಿ ಭಾರೀ ಸೋಲು ಕಂಡಿತ್ತು. ಆದರೆ 2024ರಲ್ಲಿ ಮೋದಿ ಅಲೆ ಅಲಿಯುತ್ತಿದ್ದು ಕಾಂಗ್ರೆಸ್‌ ಅಧಿಕ ಸ್ಥಾನವನ್ನು ಗಳಿಸುವ ನಿರೀಕ್ಷೆಯಿದೆ. 2014ರ ಚುನಾವಣೆಯಲ್ಲಿ ಹಿಂದಿ ಮಾತನಾಡುವ ಜನರು ಅಧಿಕವಾಗಿರುವ ರಾಜ್ಯಗಳಲ್ಲಿ ಬಿಜೆಪಿ ಅಧಿಕ ಸ್ಥಾನ ಪಡೆದುಕೊಂಡಿದೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ: ರಾಯ್‌ಬರೇಲಿ, ವಯನಾಡಿನಲ್ಲಿ ರಾಹುಲ್ ಗಾಂಧಿ ಮುನ್ನಡೆ

10 ವರ್ಷಗಳ ಹಿಂದೆ ದೇಶದ 543 ಸ್ಥಾನಗಳಲ್ಲಿ 336 ಸ್ಥಾನಗಳನ್ನು ಎನ್‌ಡಿಎ ಗೆದ್ದಿತ್ತು, ಸ್ವಂತ ಬಲದಿಂದ ಕೇಸರಿ ಪಕ್ಷ 282 ಸ್ಥಾನಗಳನ್ನು ಗೆದ್ದಿದೆ. ಆದರೆ ಹಲವಾರು ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಳ್ಳುತ್ತಿದೆ.

2019ರಲ್ಲಿ ಏನಾಯಿತು?

ಐದು ವರ್ಷಗಳ ಕಾಲ ಬಿಜೆಪಿ ತನ್ನ ಸ್ವಂತ ಬಲದಿಂದ 303 ಮತ್ತು ಮಿತ್ರಪಕ್ಷಗಳೊಂದಿಗೆ 353 ಸ್ಥಾನಗಳನ್ನು ಗೆದ್ದು ಮುಂದೆ ಸಾಗಿತು. ಯುಪಿಯಲ್ಲಿ 74, ಬಿಹಾರದಲ್ಲಿ 39 ಮತ್ತು ಮಧ್ಯಪ್ರದೇಶದಲ್ಲಿ 28 ಸ್ಥಾನಗಳನ್ನು ಗಳಿಸಿತ್ತು. ಕಾಂಗ್ರೆಸ್, ಈ ಬಾರಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಸ್ಪರ್ಧಿಸಿದ್ದು, ಮತ್ತೊಮ್ಮೆ ಹಿನ್ನೆಡೆ ಕಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ...

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...