- ಸಂಸದ ಡಿಕೆ ಸುರೇಶ್ ಸೇರಿ ಸಚಿವರು, ಶಾಸಕರು ಭಾಗಿ
- ಅನುಕೂಲಸಿಂಧು ರಾಜಕಾರಣ ಬೇಕಾಗುತ್ತದೆ: ಡಿಕೆಶಿ
ಲೋಕಸಭಾ ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಸಿಎಂ ಗೃಹ ಕಚೇರಿಯಲ್ಲಿ ಬೆಂಗಳೂರಿನ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿದರು.
ಈ ಸಭೆಗೆ ಸಂಸದ ಡಿಕೆ ಸುರೇಶ್, ಸಚಿವರಾದ ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಜಮೀರ್ ಅಹಮದ್ ಖಾನ್ ಸೇರಿದಂತೆ ಇತರ ಸಚಿವರು ಹಾಗೂ ಶಾಸಕರು ಭಾಗಿಯಾಗಿದ್ದರು.
ಸಭೆ ಆರಂಭಕ್ಕೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಡಿ ಕೆ ಶಿವಕುಮಾರ್, “ಸ್ಥಳೀಯವಾಗಿ ಒಮ್ಮೊಮ್ಮೆ ಅನುಕೂಲಸಿಂಧು ರಾಜಕಾರಣ ಮಾಡಿಕೊಳ್ಳಬೇಕಾಗುತ್ತದೆ. ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎನ್ನುವುದು ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ. ದೊಡ್ಡ ದೊಡ್ಡ ನಾಯಕರನ್ನು ಸೇರಿಸಿಕೊಳ್ಳುತ್ತಿಲ್ಲ, ಅನ್ಯಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಒಲವು ತೋರಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು
“ನಮ್ಮ ಮುಂದಿನ ಗುರಿ ಲೋಕಸಭಾ ಚುನಾವಣೆ, ಯಾವುದೇ ಕಾರಣಕ್ಕೂ ದ್ವೇಷ ಸಾಧಿಸಬೇಡಿ, ಪಕ್ಷದ ಮತ ಗಳಿಕೆ ಪ್ರಮಾಣ ಹೆಚ್ಚು ಮಾಡಿ ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇವೆ” ಎಂದು ತಿಳಿಸಿದರು.
