ಲೋಕಸಭೆ ಚುನಾವಣೆ | ಶೇ 50ರಷ್ಟು ಅಭ್ಯರ್ಥಿಗಳ ಆಯ್ಕೆ ಇಂದು ನಿರ್ಣಯ: ಡಿ ಕೆ ಶಿವಕುಮಾರ್

Date:

ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಶೇ 50 ರಷ್ಟು ರಾಜ್ಯದ ಅಭ್ಯರ್ಥಿಗಳ ಬಗ್ಗೆ ಇಂದು ನಿರ್ಣಯ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

- Advertisement -

ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿ, “ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲು ಆಗುವುದಿಲ್ಲ. ಒಂದೆರಡು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಇಂದಿನ ಸಭೆಗೆ ಮುಖ್ಯಮಂತ್ರಿಗಳು ಆಗಮಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಇಂದು ಬಸವ ಕಲ್ಯಾಣದಲ್ಲಿ ದೊಡ್ಡ ಕಾರ್ಯಕ್ರಮ ನಿಗದಿಯಾಗಿದೆ. ಆ ಕಾರ್ಯಕ್ರಮದಲ್ಲಿ ಎಲ್ಲಾ ಮಠಾಧೀಶರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಇದನ್ನು ಮುಂದೂಡಲು ಸಾಧ್ಯವಿಲ್ಲ. ಇದು ಅದ್ಯತೆಯ ಕಾರ್ಯಕ್ರಮವಾದ್ದರಿಂದ ಸಿಎಂ ಅಲ್ಲಿ ಭಾಗವಹಿಸುತ್ತಿದ್ದಾರೆ. ನಾವುಗಳು ಸೇರಿ ಈಗಾಗಲೇ ಚರ್ಚೆ ಮಾಡಿರುವುದನ್ನು ನಾನು ಈ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ” ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನೋಡಿಕೊಂಡು ನೀವು ಅಭ್ಯರ್ಥಿಗಳ ಆಯ್ಕೆ ಮಾಡುತ್ತೀರಾ ಎಂದು ಕೇಳಿದಾಗ, “ಅವರ ರಾಜಕಾರಣಕ್ಕೂ ನಮ್ಮ ರಾಜಕಾರಣಕ್ಕೂ ಬಹಳ ವ್ಯತ್ಯಾಸವಿದೆ. ನಮ್ಮ ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಮೇಲೆ ರಾಜಕಾರಣ ನಡೆಯುವುದಿಲ್ಲ. ಪಕ್ಷ, ನಮ್ಮ ಗ್ಯಾರಂಟಿ ಯೋಜನೆಗಳ ಮೇಲೆ ನಾವು ರಾಜಕೀಯ ಮಾಡುತ್ತೇವೆ. ಅವರು ಅವರದೇ ಆದ ಲೆಕ್ಕಾಚಾರ ಇಟ್ಟುಕೊಂಡಿದ್ದರೆ, ನಾವು ನಮ್ಮದೇ ಲೆಕ್ಕಾಚಾರ ಇಟ್ಟುಕೊಂಡಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ

ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾದವರಿಗೆ ಟಿಕೆಟ್ ನೀಡುತ್ತೀರಾ, ಸಚಿವರು ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರಾ ಎಂದು ಕೇಳಿದಾಗ, “ರಾಜಕೀಯದಲ್ಲಿ ಎಲ್ಲಾ ಸಾಧ್ಯತೆಗಳೂ ಇರುತ್ತವೆ” ಎಂದರು.

ಸುಪ್ರೀಂ ಕೋರ್ಟ್ ನಿಮಗೆ ರಿಲೀಫ್ ನೀಡಿದ್ದು, ನೋಟಿಸ್ ಬರುತ್ತಿಲ್ಲವೇ ಎಂದು ಕೇಳಿದಾಗ, “ಇನ್ನೂ ನೋಟಿಸ್ ಬರುತ್ತಿವೆ. ಮಾಧ್ಯಮಗಳು ಹಗಲು ರಾತ್ರಿ ನನ್ನನ್ನು ಕಾಯುತ್ತಾ ಕೆಲಸ ಮಾಡಿವೆ. ಹೆರಿಗೆ ನೋವು ಅನುಭವಿಸಿದವರಿಗೆ ಗೊತ್ತು ಎಂಬಂತೆ, ನನ್ನ ನೋವು ನನಗೆ ಗೊತ್ತು. ರಾಜ್ಯದ ಜನ ನನ್ನ ಪರವಾಗಿ ಹೋರಾಟ ಮಾಡಿದರು. ಪ್ರಾರ್ಥನೆ ಮಾಡಿದರು. ಈಗ ಅವರಿಗೆ ಸಮಾಧಾನ ಆಗಿದೆಯಲ್ಲ ಅಷ್ಟೇ ಸಾಕು” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...