ಲೋಕಸಭಾ ಚುನಾವಣೆ | ಜಗದೀಶ ಶೆಟ್ಟರ್‌ಗೆ ಟಿಕೆಟ್ ಬೇಡವೇ ಬೇಡ, ಅವ್ರು ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ; ಮತದಾರರ ಆಕ್ರೋಶ

Date:

ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಆದರೂ ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬಿಜೆಪಿ ವರಿಷ್ಠರು ಜಗದೀಶ ಶೆಟ್ಟರ್‌ಗೆ ಟಿಕೆಟ್ ಎಂದು ಹೇಳಿದ್ದರು ಸಹ ಇನ್ನೂ ಸ್ಪಷ್ಟವಾಗಿಲ್ಲ. ಅಲ್ಲದೆ ಜಗದೀಶ ಶೆಟ್ಟರ್‌ ಬೆಳಗಾವಿ ಲೋಕಸಭೆಗೆ ಬೇಡವೇ ಬೇಡ ಎಂಬ ಕೂಗು ಕೇಳಿ ಬರುತ್ತಿದೆ.

ಜಗದೀಶ ಶೆಟ್ಟರ ಮುಖ್ಯಮಂತ್ರಿ ಆಗಿದ್ದಾಗ ಬೆಳಗಾವಿ ಜಿಲ್ಲೆಯನ್ನು ಕಡೆಗಣಿಸಿದ್ದಾರೆ. ಬೆಳಗಾವಿ ಗೆ ಬರಬೇಕಿದ್ದ ಹೈಕೋರ್ಟ್ ಧಾರವಾಡಕ್ಕೆ ಮಾಡಿದ್ದಾರೆ, ರೈಲ್ವೆ ಮತ್ತು ವಿಮಾನ ಸೌಲಭ್ಯಗಳನ್ನು ಬೆಳಗಾವಿ ಬಿಟ್ಟು ಹುಬ್ಬಳ್ಳಿಗೆ ಮಾಡಿದ್ದಾರೆ ಈ ಮೂಲಕ ಜಗದೀಶ ಶೆಟ್ಟರ ಬೆಳಗಾವಿ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ ಈ ಕಾರಣಕ್ಕೆ ಜಗದೀಶ ಶೆಟ್ಟರ್‌ ಬೆಳಗಾವಿ ಲೋಕಸಭೆಗೆ ಬೇಡವೆ ಬೇಡ ಎಂಬುದು ಬೆಳಗಾವಿ ಜನತೆಯ ಆಕ್ರೋಶವಾಗಿದೆ.

ವಿಧಾನ ಸಭಾ ಚುನಾವಣೆಯಲ್ಲಿ ಜಗದೀಶ ಶೆಟ್ಟರ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿ ನಮ್ಮನ್ನು ಸೋಲಿಸಿದ್ದಾರೆ ಅವರಿಗೆ ಬಿಜೆಪಿ ಟಿಕೆಟ್ ಕೊಡುವುದು ಯಾವ ನ್ಯಾಯ. ಮಹಾಂತೇಶ ಕವಟಗಿಮಠ, ವಿಶ್ವನಾಥ ಪಾಟೀಲ, ರಮೇಶ ಕತ್ತಿ, ಸಂಜಯ ಪಾಟಿಲ, ಟಿಕೆಟ್ ಗೆ ಪೈಟ್ ಮಾಡುತ್ತಿದ್ದು ಇವರಲ್ಲಿ ಯಾರಿಗಾದರೂ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಬೆಳಗಾವಿ ಜಿಲ್ಲೆಯ ಬಿಜೆಪಿ ಮುಖಂಡರು ಒತ್ತಾಯ ಮಾಡುತ್ತಿದ್ದಾರೆ‌

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪಂಚಮಸಾಲಿ ಸಮುದಾಯದವರಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಪುತ್ರನಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡುತ್ತಿದ್ದು ಬಿಜೆಪಿಯು ಸಹ ಪಂಚಮಸಾಲಿ ಸಮುದಾಯದವರಿಗೆ ಟಿಕೆಟ್ ಕೊಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು ಮುರುಗೇಶ ನೀರಾಣಿಯವರು ಬೆಳಗಾವಿ ಲೋಕಸಭಾ ಟಿಕೆಟ್ ಗೆ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಜಗದೀಶ ಶೆಟ್ಟರ ಅವರು ನಾನು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಡುತ್ತೆನೆ ಕ್ಷೇತ್ರದ ಜನತೆಯು ನನ್ನ ಜೊತೆಗೆ ಇದ್ದಾರೆ ಎಂದು ಹೇಳಿಕೆ ನೀಡಿದ್ದು ಒಂದು ವೇಳೆ ಜಗದೀಶ ಶೆಟ್ಟರ್‌ ಅವರಿಗೆ ಬೆಳಗಾವಿ ಲೋಕಸಭಾ ಟಿಕೆಟ್ ನೀಡಿದರೆ ಸ್ಥಳೀಯ ಬಿಜೆಪಿ ಮುಖಂಡರು ಜಗದೀಶ ಶೆಟ್ಟರ್‌ ಪರವಾಗಿ ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತಾರೆ? ಇದು ನಿಜಕ್ಕೂ ಜಗದೀಶ ಶೆಟ್ಟರ್‌ಗೆ ಕಠಿಣ ಸವಾಲಾಗಿದೆ.

ಸುನಿಲ್ ಹಂಪನ್ನವರ
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...