ರಾಮನವಮಿ | ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್ ಪ್ರಾರಂಭಿಸಿದ ಎಎಪಿ

Date:

ಆಮ್ ಆದ್ಮಿ ಪಕ್ಷ (ಎಎಪಿ) ಬುಧವಾರ ರಾಮನವಮಿ ದಿನದಂದು ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್ಅನ್ನು ಪ್ರಾರಂಭಿಸಿದೆ. ‘ರಾಮ ರಾಜ್ಯ’ ಪರಿಕಲ್ಪನೆಯ ಅಡಿಯಲ್ಲಿ ಈ ವೆಬ್‌ಸೈಟ್‌ಅನ್ನು ಆರಂಭಿಸಿದೆ.

- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ ಶ್ರೀರಾಮನ ಆದರ್ಶಗಳನ್ನು ಸಾಕಾರಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ವೆಬ್‌ಸೈಟ್‌ನಲ್ಲಿ ಎಎಪಿ ಹೇಳಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

सियावर रामचंद्र जी की जय🏹🙏

ಬುಧವಾರ ರಾಮನವಮಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ದಿನವೇ ಎಎಪಿ ತನ್ನ ವೆಬ್‌ಸೈಟ್ಅನ್ನು ಬಿಡುಗಡೆ ಮಾಡಿದೆ. ಅಲ್ಲದೆ, ಲೋಕಸಭೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆಯಲಿದ್ದು, ಇದಕ್ಕೂ ಮುನ್ನ ವೆಬ್‌ಸೈಟ್ ಬಿಡುಗಡೆಗೊಳಿಸಲಾಗಿದೆ.

ಇದನ್ನು ಓದಿದ್ದೀರಾ?   ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಯತ್ನ: ಎಎಪಿ ಆರೋಪ

ಈ ಬಗ್ಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, “ವೆಬ್‌ಸೈಟ್ ಎಎಪಿಯ ‘ರಾಮ ರಾಜ್ಯ’ ಪರಿಕಲ್ಪನೆಯನ್ನು ಮತ್ತು ಎಎಪಿ ಸರ್ಕಾರಗಳು ಮಾಡಿದ ಕೆಲಸದ ಮಾಹಿತಿ ಒಳಗೊಂಡಿರುತ್ತದೆ” ಎಂದು ಹೇಳಿದರು.

‘ರಾಮರಾಜ್ಯ’ ಸಾಕಾರಕ್ಕಾಗಿ ಕಳೆದ 10 ವರ್ಷಗಳಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅದ್ಭುತವಾದ ಕೆಲಸಗಳನ್ನು ಮಾಡಿದ್ದಾರೆ. ಉತ್ತಮ ಶಾಲೆಗಳು, ಮೊಹಲ್ಲಾ ಚಿಕಿತ್ಸಾಲಯಗಳು, ಉಚಿತ ನೀರು ಮತ್ತು ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ ಎಂದು ಕೂಡಾ ಸಂಜಯ್ ಸಿಂಗ್ ತಿಳಿಸಿದರು.

ಇದನ್ನು ಓದಿದ್ದೀರಾ?   ‘ಗೋಲ್‌ಪೋಸ್ಟ್‌’ ಬದಲಿಸುತ್ತಿರುವವರು ಒಲಿಂಪಿಕ್ಸ್ ಬಗ್ಗೆ ಮಾತನಾಡುತ್ತಾರೆ: ಬಿಜೆಪಿ ಪ್ರಣಾಳಿಕೆಗೆ ಕಾಂಗ್ರೆಸ್, ಎಎಪಿ ಟೀಕೆ

“ರಾಮ ನವಮಿಯಂದು ಅರವಿಂದ್ ಕೇಜ್ರಿವಾಲ್ ಅವರು ಜನರ ನಡುವೆ ಇಲ್ಲದಿರುವುದು ಇದೇ ಮೊದಲು. ಸುಳ್ಳು ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ ಆಧಾರರಹಿತವಾದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಲಾಗಿದೆ” ಎಂದು ಆರೋಪಿಸಿದರು.

ಎಎಪಿ ಮುಖಂಡರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಜಾಸ್ಮಿನ್ ಶಾ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...