ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ

Date:

ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ (ನೂರಾ ಇಪ್ಪತ್ತೆಂಟನೇ ತಿದ್ದುಪಡಿ) ಮಹಿಳಾ ಮೀಸಲಾತಿ ಮಸೂದೆ, 2023 ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿದೆ.

ಮಸೂದೆಯ ಪರವಾಗಿ 454 ಸಂಸದರು ಮತ ಚಲಾಯಿಸಿದರೆ ಮಸೂದೆ ವಿರುದ್ಧವಾಗಿ ಕೇವಲ 2 ಮತಗಳು ಮಾತ್ರ ಚಲಾವಣೆಯಾಗಿದೆ.ಈ ಮೂಲಕ ಬಹುಮತದೊಂದಿಗೆ ಮಹಿಳಾ ಮೀಸಲಾತಿ ಮಸೂದೆಯು ಅಂಗೀಕಾರವಾಯಿತು.

ಲೋಕಸಭೆಯಲ್ಲಿ ಸುದೀರ್ಘ 8 ಗಂಟೆಗಳ ಕಾಲ ಚರ್ಚೆ ನಂತರ ಸ್ಪೀಕರ್ ಓಂಬಿರ್ಲಾ ಮತದಾನ ಮಾಡುವಂತೆ ಸಂಸದರಲ್ಲಿ ಮನವಿ ಮಾಡಿದರು. ಆನಂತರ ಮತ ಪತ್ರಗಳ ಮೂಲಕ ಸಂಸದರು ಮತ ಚಲಾಯಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ 213 ಸದಸ್ಯರ ಬೆಂಬಲ ಅಗತ್ಯವಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಾಳೆ (ಸೆ.21) ಈ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗುವುದು. ರಾಜ್ಯಸಭೆಯಲ್ಲೂ ಮಸೂದೆಗೆ ಅಂಗೀಕಾರ ಸಿಕ್ಕ ಬಳಿಕ ರಾಷ್ಟ್ರಪತಿಗಳ ಅನುಮೋದನೆಗೆ ಹೋಗಲಿದೆ. ರಾಷ್ಟ್ರಪತಿಗಳ ಒಪ್ಪಿಗೆ ದೊರೆತ ಬಳಿಕ ಇದು ಕಾನೂನಾಗಿ ರೂಪುಗೊಳ್ಳಲಿದೆ.

ಈ ಸುದ್ದಿ ಓದಿದ್ದೀರಾ? 90 ಅಧಿಕಾರಿಗಳಲ್ಲಿ ಮೂವರು ಮಾತ್ರ ಒಬಿಸಿಗಳು

ಮಸೂದೆ ಮೇಲಿನ ಚರ್ಚೆಯಲ್ಲಿ 60 ಸಂಸದರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಒಬಿಸಿ ಮೀಸಲಾತಿ ಇಲ್ಲದೆ ಈ ಮಸೂದೆ ಅಪೂರ್ಣ ಎಂದು ರಾಹುಲ್ ಗಾಂಧಿ ಹೇಳಿದರು.

ಈ ಬಗ್ಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಈ ಮೀಸಲಾತಿ ಸಾಮಾನ್ಯ, ಎಸ್‌ಸಿ ಮತ್ತು ಎಸ್‌ಟಿಗೆ ಸಮಾನವಾಗಿ ಅನ್ವಯಿಸುತ್ತದೆ. ಚುನಾವಣೆ ಮುಗಿದ ಕೂಡಲೇ ಜನಗಣತಿ ಮತ್ತು ಡಿಲಿಮಿಟೇಶನ್ ನಡೆಯಲಿದ್ದು, ಸದನದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಶೀಘ್ರದಲ್ಲಿ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯು ಪ್ರಮಾಣ ಶೇ. 14ರಷ್ಟು ಮಾತ್ರ ಇದೆ.

ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಲು ಇದು ಐದನೇ ಪ್ರಯತ್ನವಾಗಿದೆ. ಮಾಜಿ ಪ್ರಧಾನಿಗಳಾದ ದೇವೇಗೌಡರಿಂದ ಹಿಡಿದು ಮನಮೋಹನ್‌ ಸಿಂಗ್‌ವರೆಗೆ ನಾಲ್ಕು ಬಾರಿ ಈ ಮಸೂದೆ ತರಲು ಪ್ರಯತ್ನಿಸಲಾಗಿತ್ತು. ಆದರೆ ನಾಲ್ಕು ಬಾರಿಯೂ ಇದು ಸಾಧ್ಯವಾಗಿರಲಿಲ್ಲ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 6 ನವಜಾತ ಶಿಶುಗಳು ಸಾವು

ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ನವಜಾತ...