ಲೋಕಸಭೆ | ಒಂದು ದೇಶ- ಒಂದು ಚುನಾವಣೆ ಮಸೂದೆ ಮಂಡನೆ ಮುಂದೂಡಿಕೆ

Date:

ಲೋಕಸಭೆಯಲ್ಲಿ ಸೋಮವಾರ ಒಂದು ದೇಶ – ಒಂದು ಚುನಾವಣೆ ಮಸೂದೆ ಮಂಡಿಸುವುದನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ.

- Advertisement -

ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆಯನ್ನು – ಸಂವಿಧಾನ (129 ನೇ ತಿದ್ದುಪಡಿ) ಮಸೂದೆ (ಒಂದು ದೇಶ- ಒಂದು ಚುನಾವಣೆ) ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆಯನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಲು ನಿಗದಿಪಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನು ಓದಿದ್ದೀರಾ? ‘ಒಂದು ದೇಶ- ಒಂದು ಚುನಾವಣೆ’ಗೆ ಕೇಂದ್ರ ಸಚಿವ ಸಂಪುಟ ಅಸ್ತು

ಹಾಗೆಯೇ ಈಗಾಗಲೇ ಒಂದು ದೇಶ- ಒಂದು ಚುನಾವಣೆ ಮಸೂದೆ ಪ್ರತಿಯನ್ನು ಸರ್ಕಾರವು ಸಂಸದರಿಗೆ ನೀಡಿದೆ. ಆದ್ದರಿಂದ ಸೋಮವಾರವೇ ಈ ಮಸೂದೆ ಮಂಡಿಸಲಾಗುತ್ತದೆ ಎಂದು ಹೇಳಲಾಗಿತ್ತು.

ಆದರೆ ಇಂದು ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಈ ಎರಡು ಮಸೂದೆಗಳ ಮಂಡನೆಯ ಬಗ್ಗೆ ಉಲ್ಲೇಖಿಸಲಾಗಿಲ್ಲ. ಆದರೆ ಯಾವ ಕಾರಣಕ್ಕೆ ಈ ವಿವಾದಿತ ಮಸೂದೆ ಮಂಡನೆಯನ್ನು ಸರ್ಕಾರ ವಿಳಂಬಗೊಳಿಸುತ್ತಿದೆ ಎಂಬುದು ಅಸ್ಪಷ್ಟವಾಗಿದೆ.

ಇದನ್ನು ಓದಿದ್ದೀರಾ? ಧಾರವಾಡ | ಒಂದು ದೇಶ, ಒಂದು ವೇತನ ಜಾರಿಗೆ ಸಿಎಐ(ಎಂ) ಒತ್ತಾಯ

ಸೋಮವಾರ ಮಂಡಿಸಲಾಗುವ ಇತರೆ ಮಸೂದೆಗಳು ಅಂಗೀಕಾರಗೊಂಡ ಬಳಿಕವೇ ಒಂದು ದೇಶ- ಒಂದು ಚುನಾವಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.

ಇನ್ನು ಇತ್ತೀಚೆಗೆ ‘ಒಂದು ದೇಶ- ಒಂದು ಚುನಾವಣೆ’ ಶಿಫಾರಸಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಲೋಕಸಭೆ, ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸನ್ನು ಸರ್ಕಾರವು ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಿದೆ. ಆದರೆ ಈ ಮಸೂದೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಲೋಕಸಭೆ ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4ರಂದು ಆರಂಭವಾಗಿದ್ದು ಡಿಸೆಂಬರ್ 20ರಂದು ಮುಕ್ತಾಯವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಗನಕ್ಕೇರಿದ ದಿನಬಳಕೆ ವಸ್ತುಗಳ ದರ: ‘ಕ್ಯಾ ಹುವಾ ತೇರಾ ವಾದಾ’ – ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ

ದೇಶದಲ್ಲಿ ಪ್ರಮುಖ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರುತ್ತಿರುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್...

ಗುಜರಾತ್‌ನ ವಾಡಿಯಾ ಗ್ರಾಮದ ಕರಾಳ ವಾಸ್ತವ: ವೇಶ್ಯಾವಾಟಿಕೆಯಿಂದ ಪಾರಾಗಲು ‘ಬಾಲ್ಯವಿವಾಹ’ವೇ ರಕ್ಷಾಕವಚ

ಅಹಮದಾಬಾದ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಗುಜರಾತ್‌ನ ವಾಡಿಯಾ ಗ್ರಾಮದ ಹೆಣ್ಣುಮಕ್ಕಳ...

ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ...