ಲೋಕಸಭಾ ಚುನಾವಣೆ | ಮೊದಲ ಮಹಿಳಾ ‘ಎಂಪಿ’ಯನ್ನು ಆಯ್ಕೆ ಮಾಡುವುದೇ ಬೆಂಗಳೂರು

Date:

70 ವರ್ಷಗಳ ಪ್ರಜಾಪ್ರಭುತ್ವ ಆಡಳಿತದಲ್ಲಿ 17 ಬಾರಿ ಲೋಕಸಭಾ ಚುನಾವಣೆಗಳು ನಡೆದಿವೆ. 18ನೇ ಚುನಾವಣೆ ನಡೆಯುತ್ತಿದೆ. ಆದರೆ, ಬೆಂಗಳೂರಿನಿಂದ ಈವರೆಗೆ ಒಬ್ಬ ಸಂಸದೆಯೂ ಆಯ್ಕೆಯಾಗಿಲ್ಲ. ಈ ಬಾರಿ, ಪ್ರಬಲ ಮಹಿಳಾ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಅವರನ್ನು ಸಂಸತ್‌ಗೆ ಕಳಿಸುವ ಮೂಲಕ ಬೆಂಗಳೂರು ಹೊಸ ಇತಿಹಾಸ ಬರೆಯುವುದೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಮೂರು ಲೋಕಸಭಾ ಕ್ಷೇತ್ರಗಳಿವೆ. ಈ ಪೈಕಿ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ತನ್ನ ಪ್ರಬಲ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಂಗಳೂರು ಉತ್ತರದಲ್ಲಿ ಬೆಜೆಪಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪರ್ಧಿಸಿದ್ದರೆ, ಬೆಂಗಳೂರು ದಕ್ಷಿಣದಲ್ಲಿ ಮಾಜಿ ಶಾಸಕಿ, ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಕಾಂಗ್ರೆಸ್‌ನಿಂದ ಕಣದಲ್ಲಿದ್ದಾರೆ. ಐಟಿ ನಗರದ ಮತದಾರರು ಮೊದಲ ಬಾರಿಗೆ ಸಂಸದೆಯನ್ನು ಆಯ್ಕೆ ಮಾಡುತ್ತದೆಯೇ ಕಾದು ನೋಡಬೇಕಿದೆ.

ಬೆಂಗಳೂರು ಉತ್ತರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಪ್ರತಿಸ್ಪರ್ಥಿಯಾಗಿ ಕಾಂಗ್ರೆಸ್‌ನಿಂದ ಪ್ರೊ.ರಾಜೀವ್‌ ಗೌಡ ಕಣಕ್ಕಿಳಿದಿದ್ದಾರೆ. ಎರಡು ಬಾರಿ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಯಾಗಿದ್ದ ಕರಂದ್ಲಾಜೆ ವಿರುದ್ಧ ಆ ಕ್ಷೇತ್ರದಲ್ಲಿ ಭಾರೀ ಜನಾಕ್ರೋಶವಿತ್ತು. ಅಲ್ಲದೆ, ಅವರ ಸ್ಪರ್ಧೆಗೆ ಬಿಜೆಪಿಗರೇ ಆಕ್ಷೇಪವನ್ನೂ ವ್ಯಕ್ತಪಡಿಸಿದ್ದರು. ಇತ್ತೀಚೆಗೆ, ‘ಗೋ ಬ್ಯಾಕ್ ಶೋಭಾ’ ಅಭಿಯಾನವೂ ನಡೆದಿತ್ತು. ಕರಂದ್ಲಾಜೆಗೆ ಟಿಕೆಟ್‌ ದೊರೆಯುವುದೇ ಅನುಮಾನ ಎಂದೂ ಹೇಳಲಾಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದರೆ, ಅವರನ್ನು ಕ್ಷೇತ್ರ ಬದಲಿಸಿ, ಬೆಂಗಳೂರು ಉತ್ತರಕ್ಕೆ ವರ್ಗಾಯಿಸಲಾಗಿದೆ. ಬೆಂಗಳೂರು ಉತ್ತರದ ಬಿಜೆಪಿ ಸಂಸದರಾಗಿದ್ದ ಸದಾನಂದ ಗೌಡರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ. ಶೋಭಾ ಬೆಂಗಳೂರಿಗೆ ಬರುವುದು ಬೆಂಗಳೂರಿನ ಬಿಜೆಪಿ ನಾಯಕರಿಗೆ ಇಷ್ಟವಿಲ್ಲ. ಒಂದು ವೇಳೆ, ಶೋಭಾ ಗೆದ್ದರೆ, ಅವರ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಗಳೂರಿನಲ್ಲಿ ಹಿಡಿತ ಸಾಧಿಸುತ್ತಾರೆ ಎಂಬ ಆತಂಕ ಸ್ಥಳೀಯ ನಾಯಕರಲ್ಲಿದೆ ಎನ್ನಲಾಗಿದೆ. ಹೀಗಾಗಿ, ಶೋಭಾರನ್ನು ಬಿಜೆಪಿಯೇ ಸೋಲಿಸಬಹುದು ಎಂಬ ಚರ್ಚೆಯೂ ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿದೆ.

ಇನ್ನು, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್‌ನಿಂದ ಸೌಮ್ಯಾ ರೆಡ್ಡಿ ಕಣಕ್ಕಿಳಿದಿದ್ದಾರೆ. ಈ ಹಿಂದೆ, ಇದೇ ಕ್ಷೇತ್ರದ ಭಾಗವಾಗಿರುವ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಯಾಗಿದ್ದ ಸೌಮ್ಯಾ ರೆಡ್ಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆರಳೆಣಿಕೆಯಷ್ಟು ಮತಗಳ ಅಂತರದಿಂದ ಸೋತಿದ್ದರು. ಇದೀಗ, ಅವರು ಲೋಕಸಭೆಯ ಅಖಾಡದಲ್ಲಿದ್ದಾರೆ.

ಅವರ ತಂದೆ, ರಾಮಲಿಂಗಾರೆಡ್ಡಿ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದು, ಸೌಮ್ಯಾ ರೆಡ್ಡಿ ಅವರನ್ನು ಗೆಲ್ಲಿಸಿಕೊಂಡುಬರಬೇಕಾದ ಹೊಣೆಯೂ ಅವರ ಮೇಲಿದೆ. ಕಳೆದ ಐದು ವರ್ಷಗಳಲ್ಲಿ ಕ್ಷೇತ್ರದಲ್ಲಿ ಕಾಣಸಿಗದಿದ್ದ ತೇಜಸ್ವಿ ಸೂರ್ಯ, ಆಗಾಗ್ಗೆ ಕೆಲ ಕಾರ್ಯಕ್ರಮಗಳಲ್ಲಿ ಮಾತ್ರವೇ ಕಾಣಸಿಗುತ್ತಿದ್ದರು. ಹೀಗಾಗಿ, ಸೌಮ್ಯಾ ರೆಡ್ಡಿ ಮತ್ತು ರಾಮಲಿಂಗಾರೆಡ್ಡಿ ಅವರ ಜನಪ್ರಿಯತೆ, ತೇಜಸ್ವಿ ವಿರುದ್ಧದ ಅಸಮಾಧಾನ ಸೌಮ್ಯಾ ರೆಡ್ಡಿ ಗೆಲುವಿಗೆ ನೆರವಾಗಬಹುದು ಎನ್ನಲಾಗುತ್ತಿದೆ. ಆದರೂ, ಬಿಜೆಪಿ ಬೆಂಬಲಿಗರೇ ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರವನ್ನು ಭೇದಿಸುವುದು ಅಷ್ಟು ಸುಲಭವಲ್ಲ ಎಂಬ ಅಭಿಪ್ರಾಯಗಳೂ ಇವೆ. ಏನಾಗಲಿದೆ ಕಾದುನೋಡಬೇಕಿದೆ.

ಈ ವರದಿ ಓದಿದ್ದೀರಾ?: ಮೋದಿ ವೈಫಲ್ಯ-3 | 100 ಸ್ಮಾರ್ಟ್‌ ಸಿಟಿಗಳು ಎಲ್ಲಿವೆ? ಇದು ಮೋದಿಯ ‘ಸ್ಮಾರ್ಟ್‌’ ಸುಳ್ಳು!

“ಇಂದಿರಾ ಗಾಂಧಿ ಅವರು ದೇಶದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನಿಯಾಗಿದ್ದರು. ಬಸವಣ್ಣ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳಾ ನಾಯಿಕತ್ವದ ಬಗ್ಗೆ ಒತ್ತಿ ಹೇಳಿದ್ದರು. ಆದರೆ, ರಾಜಕೀಯದಲ್ಲಿ ಮಹಿಳೆಯರಿಗೆ ಸರಿಯಾದ ಪ್ರಾತಿನಿಧ್ಯವಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಮಹಿಳೆ ಎಂಬ ಕಾರಣಕ್ಕೆ ಚಿಕ್ಕಪೇಟೆ ಕ್ಷೇತ್ರದಲ್ಲಿ ನನಗೆ ಟಿಕೆಟ್ ದೊರೆಯಲಿಲ್ಲ. ಲೋಕಸಭೆಯಲ್ಲಿ ಮಹಿಳೆಯರು ಬೆಂಗಳೂರನ್ನು ಪ್ರತಿನಿಧಿಸಬೇಕು” ಎಂದು ಬಿಬಿಎಂಪಿ ಮಾಜಿ ಮೇಯರ್, ಕಾಂಗ್ರೆಸ್‌ ನಾಯಕಿ ಗಂಗಾಂಬಿಕೆ ಹೇಳಿದ್ದಾರೆ.

ಅಂದಹಾಗೆ, ಕಳೆದ 17 ಲೋಕಸಭಾ ಚುನಾವಣೆಗಳಲ್ಲಿ ಕರ್ನಾಟಕವು 15 ಮಹಿಳಾ ಸಂಸದರನ್ನು ಆಯ್ಕೆ ಮಾಡಿದೆ ಅದರಲ್ಲಿ, ಇಂದಿರಾ ಗಾಂಧಿ ಅವರು 1978ರಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ, ಗೆದ್ದಿದ್ದರು. ಆ ಮೂಲಕ ತಮ್ಮ ರಾಜಕೀಯ ಪುನರ್ಜನ್ಮ ಪಡೆದಿದ್ದರು.

ರಾಜ್ಯದಿಂದ ಆಯ್ಕೆಯಾಗಿದ್ದ ಪ್ರಮುಖ ಸಂಸದೆಯರು

ಸರೋಜಿನಿ ಮಹಿಷಿ: ಧಾರವಾಡ ಉತ್ತರ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ (1962-1980) ಆಯ್ಕೆಯಾಗಿದ್ದರು. ಅಲ್ಲದೆ, ರಾಜ್ಯದ ಮೊದಲ ಸಂಸದೆಯೂ ಆಗಿದ್ದರು.

ಇಂದಿರಾ ಗಾಂಧಿ: 1978ರಲ್ಲಿ ಚಿಕ್ಕಮಗಳೂರು ಲೋಕಸಭಾ ಉಪಚುನಾವಣೆಯಲ್ಲಿ ವೀರೇಂದ್ರ ಪಾಟೀಲ್ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದರು.

ತೇಜಸ್ವಿನಿ ಗೌಡ: 2004ರ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರನ್ನು ಸೋಲಿಸಿದ್ದರು.

ಸೋನಿಯಾ ಗಾಂಧಿ: 1999ರಲ್ಲಿ ಬಿಜೆಪಿಯ ಸುಷ್ಮಾ ಸ್ವರಾಜ್ ವಿರುದ್ಧ ಬಳ್ಳಾರಿಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು.

ಸುಮಲತಾ ಅಂಬರೀಶ್: 2019ರಲ್ಲಿ ಮಂಡ್ಯ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆದ್ದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ,...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...