ಲೋಕಸಭಾ ಚುನಾವಣೆ | ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಧೀರಜ್ ಕಾಂಗ್ರೆಸ್‌ ಸೇರುವ ಸಾಧ್ಯತೆ!

Date:

Advertisements

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂಬ ಮಾತುಗಳೂ ಇದ್ದು, ಅವರು ಈ ಬಾರಿ ಮೈಸೂರನ್ನು ಕಾಂಗ್ರೆಸ್ಸಿಗೆ ಗೆಲ್ಲಿಸಿಕೊಡಬೇಕು. ಇದೇ ಅವರು ಕಾಂಗ್ರೆಸ್‌ಗೆ ಕೊಡುವ ಉಡುಗೊರೆ ಎಂಬ ಅಭಿಪ್ರಾಯಗಳೂ ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್‌ನ ಹಲವರನ್ನು ಪಕ್ಷಕ್ಕೆ ಸೆಳೆಯುವ ಮೂಲಕ, ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಸಿದ್ದರಾಮಯ್ಯ ಕಣಕ್ಕಿಳಿದಿದ್ದಾರೆ.

ಹಲವಾರು ಬಿಜೆಪಿ-ಜೆಡಿಎಸ್‌ ಮುಖಂಡರನ್ನು ಪಕ್ಷಕ್ಕೆ ಸೆಳೆಯುತ್ತಿರುವ ಕಾಂಗ್ರೆಸ್‌, ಇದೀಗ, ಬಿಜೆಪಿ ಯುವ ಮೂರ್ಚಾದ ಉಪಾಧ್ಯಕ್ಷ, ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್‌ ಅವರನ್ನು ಪಕ್ಷಕ್ಕೆ ಕರೆತರಲು ಮುಂದಾಗಿದೆ. ಸದ್ಯ, ಧೀರಜ್ ಕೂಡ ಬಿಜೆಪಿ ತೊರೆಯಲು ಸಜ್ಜಾಗಿದ್ದು, ಒಂದು ವಾರದೊಳಗೆ ಕಾಂಗ್ರೆಸ್‌ ಸೇರುತ್ತಾರೆಂದು ಹೇಳಲಾಗುತ್ತಿದೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ರಾಜವಂಸ್ಥರಿಗೆ ಬಿಜೆಪಿ ಮಣೆ ಹಾಕಿದ್ದು, ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಿದೆ. ಇದು ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವಾರು ಬಿಜೆಪಿಗರಿಗೆ ಅಸಮಾಧಾನ ಮೂಡಿಸಿದೆ. ಆದರೆ, ಪ್ರತಾಪ್ ಸಿಂಹ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸದೇ ಇದ್ದರೂ, ಪರೋಕ್ಷವಾಗಿ ಯದುವೀರ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನೂ ಹಲವರು ಬಿಜೆಪಿ ತೊರೆಯಲು ಸಜ್ಜಾಗಿದ್ದಾರೆ.

Advertisements

ಈ ನಡುವೆ, ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿರುವ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್, ಈ ಬಾರಿಯ ಚುನಾವಣೆಯಲ್ಲಿ ಯಾರ ಪರವಾಗಿಯೂ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಅವರ ಬೆಂಬಲ ಪಡೆಯಲು ಕಾಂಗ್ರೆಸ್‌ ಮುಂದಾಗಿದ್ದು, ಅವರನ್ನು ಕಾಂಗ್ರೆಸ್‌ ನಾಯಕರು ಭೇಟಿ ಮಾಡಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಕೂಡ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಒಕ್ಕಲಿಗ ಸಮುದಾಯದ ಎಂ ಲಕ್ಷ್ಮಣ್‌ ಅವರನ್ನು ಕಣಕ್ಕಿಳಿಸಿರುವ ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ನ ಅವರನ್ನು ಪಕ್ಷಕ್ಕೆ ಕರೆತಂದಿದೆ. ಈಗಾಗಲೇ, ಯಡಿಯೂರಪ್ಪ ಅವರ ಆಪ್ತರಾಗಿದ್ದ ಮೈಸೂರು ಮೂಡಾದ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್, ಜೆಡಿಎಸ್‌ ಮುಖಂಡ ಕೆ.ವಿ ಮಲ್ಲೇಶ್, ಮೈಸೂರು ಪಾಲಿಕೆಯ ಮಾಜಿ ಮೇಯರ್ ಭೈರಪ್ಪ ಸೇರಿದಂತೆ ಹಲವರು ಕಾಂಗ್ರೆಸ್‌ ಸೇರಿದ್ದಾರೆ. ಈಗ, ಧೀರಜ್ ಪ್ರಸಾದ್ ಕೂಡ ಕಾಂಗ್ರೆಸ್‌ ಸೇರಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗುಣಾತ್ಮಕ ಶಿಕ್ಷಣಕ್ಕಾಗಿ ಕಲಿಕೆ: ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಮಸುಂದರ ಅಡಿಗ

"ಎಲ್. ಬಿ.ಎ.ಫ್.ಲ್ ಎನ್ ಕಾರ್ಯಕ್ರಮಗಳ ಪರಿಣಾಮ ಮುಂದಿನ ದಿಗಳಲ್ಲಿ ಕಾಣಬಹುದು. ಆಂಗ್ಲ...

ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರ ವಿಜಯ್ ವಿರುದ್ಧ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ಅಸ್ತು

ಮಾಜಿ ಸಚಿವ ಮುರುಗೇಶ್ ನಿರಾಣಿಯವರ ಪುತ್ರ ಹಾಗೂ ಉದ್ಯಮಿ ವಿಜಯ್ ನಿರಾಣಿ...

ಬಂಟ್ವಾಳ | ತಾಲೂಕು ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಆರೋಗ್ಯಾಧಿಕಾರಿಯನ್ನು ಭೇಟಿಯಾದ ಎಸ್‌ಡಿಪಿಐ ನಿಯೋಗ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್...

ಧಾರವಾಡ | ಬಸವಾದಿ ಶರಣರ ಆಶಯದಂತೆ ಮಾತು ಕೃತಿ ಒಂದಾಗಬೇಕು: ಡಾ. ವೀರಣ್ಣ ರಾಜೂರ

ಬಸವಾದಿ ಶರಣರ ಆಶಯದಂತೆ ನಮ್ಮ ಮಾತು ಕೃತಿ ಒಂದಾಗಬೇಕು, ನಡೆ ನುಡಿ...

Download Eedina App Android / iOS

X