ಲೋಕಸಭಾ ಚುನಾವಣೆ | ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಧೀರಜ್ ಕಾಂಗ್ರೆಸ್‌ ಸೇರುವ ಸಾಧ್ಯತೆ!

Date:

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂಬ ಮಾತುಗಳೂ ಇದ್ದು, ಅವರು ಈ ಬಾರಿ ಮೈಸೂರನ್ನು ಕಾಂಗ್ರೆಸ್ಸಿಗೆ ಗೆಲ್ಲಿಸಿಕೊಡಬೇಕು. ಇದೇ ಅವರು ಕಾಂಗ್ರೆಸ್‌ಗೆ ಕೊಡುವ ಉಡುಗೊರೆ ಎಂಬ ಅಭಿಪ್ರಾಯಗಳೂ ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್‌ನ ಹಲವರನ್ನು ಪಕ್ಷಕ್ಕೆ ಸೆಳೆಯುವ ಮೂಲಕ, ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಸಿದ್ದರಾಮಯ್ಯ ಕಣಕ್ಕಿಳಿದಿದ್ದಾರೆ.

ಹಲವಾರು ಬಿಜೆಪಿ-ಜೆಡಿಎಸ್‌ ಮುಖಂಡರನ್ನು ಪಕ್ಷಕ್ಕೆ ಸೆಳೆಯುತ್ತಿರುವ ಕಾಂಗ್ರೆಸ್‌, ಇದೀಗ, ಬಿಜೆಪಿ ಯುವ ಮೂರ್ಚಾದ ಉಪಾಧ್ಯಕ್ಷ, ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್‌ ಅವರನ್ನು ಪಕ್ಷಕ್ಕೆ ಕರೆತರಲು ಮುಂದಾಗಿದೆ. ಸದ್ಯ, ಧೀರಜ್ ಕೂಡ ಬಿಜೆಪಿ ತೊರೆಯಲು ಸಜ್ಜಾಗಿದ್ದು, ಒಂದು ವಾರದೊಳಗೆ ಕಾಂಗ್ರೆಸ್‌ ಸೇರುತ್ತಾರೆಂದು ಹೇಳಲಾಗುತ್ತಿದೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ರಾಜವಂಸ್ಥರಿಗೆ ಬಿಜೆಪಿ ಮಣೆ ಹಾಕಿದ್ದು, ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಿದೆ. ಇದು ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವಾರು ಬಿಜೆಪಿಗರಿಗೆ ಅಸಮಾಧಾನ ಮೂಡಿಸಿದೆ. ಆದರೆ, ಪ್ರತಾಪ್ ಸಿಂಹ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸದೇ ಇದ್ದರೂ, ಪರೋಕ್ಷವಾಗಿ ಯದುವೀರ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನೂ ಹಲವರು ಬಿಜೆಪಿ ತೊರೆಯಲು ಸಜ್ಜಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ನಡುವೆ, ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿರುವ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್, ಈ ಬಾರಿಯ ಚುನಾವಣೆಯಲ್ಲಿ ಯಾರ ಪರವಾಗಿಯೂ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಅವರ ಬೆಂಬಲ ಪಡೆಯಲು ಕಾಂಗ್ರೆಸ್‌ ಮುಂದಾಗಿದ್ದು, ಅವರನ್ನು ಕಾಂಗ್ರೆಸ್‌ ನಾಯಕರು ಭೇಟಿ ಮಾಡಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಕೂಡ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಒಕ್ಕಲಿಗ ಸಮುದಾಯದ ಎಂ ಲಕ್ಷ್ಮಣ್‌ ಅವರನ್ನು ಕಣಕ್ಕಿಳಿಸಿರುವ ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ನ ಅವರನ್ನು ಪಕ್ಷಕ್ಕೆ ಕರೆತಂದಿದೆ. ಈಗಾಗಲೇ, ಯಡಿಯೂರಪ್ಪ ಅವರ ಆಪ್ತರಾಗಿದ್ದ ಮೈಸೂರು ಮೂಡಾದ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್, ಜೆಡಿಎಸ್‌ ಮುಖಂಡ ಕೆ.ವಿ ಮಲ್ಲೇಶ್, ಮೈಸೂರು ಪಾಲಿಕೆಯ ಮಾಜಿ ಮೇಯರ್ ಭೈರಪ್ಪ ಸೇರಿದಂತೆ ಹಲವರು ಕಾಂಗ್ರೆಸ್‌ ಸೇರಿದ್ದಾರೆ. ಈಗ, ಧೀರಜ್ ಪ್ರಸಾದ್ ಕೂಡ ಕಾಂಗ್ರೆಸ್‌ ಸೇರಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ | 30,602 ಮತಗಟ್ಟೆ; 4 ಲಕ್ಷ ಅಧಿಕಾರಿಗಳಿಂದ ಕರ್ತವ್ಯ: ಚುನಾವಣಾ ಆಯೋಗ

ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲ...

ಕಾಂಗ್ರೆಸ್ ಪರ ಪ್ರಚಾರ ಮಾಡದಂತೆ ಸಿಪಿಐಎಂ ಕಾರ್ಯಕರ್ತನಿಗೆ ಜೆಡಿಎಸ್ ಮುಖಂಡರ ಬೆದರಿಕೆ

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಬಾರದು ಎಂದು ಜೆಡಿಎಸ್ ಕಾರ್ಯಕರ್ತರು ಸಿಪಿಐಎಂ...

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...