ಲೋಕಸಭೆ ಚುನಾವಣೆ | ರಾಜ್ಯದಲ್ಲಿ ಸ್ಪರ್ಧೆಗೆ ಕಾಂಗ್ರೆಸ್‌ ಹಿರಿಯರು, ಸಚಿವರ ಹಿಂದೇಟು

Date:

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಭಾರೀ ಕಸರತ್ತು ನಡೆಸುತ್ತಿದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಸೀಟುಗಳನ್ನು ಗೆಲ್ಲಲು ತಂತ್ರ ಎಣೆಯುತ್ತಿದೆ. ಹಲವೆಡೆ ಟಿಕೆಟ್ ಆಕಾಂಕ್ಷಿಗಳು ತಮಗೇ ಟಿಕೆಟ್‌ ಬೇಕೆಂದು ನಾಯಕರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಕೆಲವೆಡೆ, ಸಚಿವರನ್ನೇ ಕಣಕ್ಕಿಳಿಸಲು ಕೈ ನಾಯಕರು ಚಿಂತಿಸುತ್ತಿದ್ದಾರೆ. ಆದರೆ, ಚುನಾವಣೆಯಲ್ಲಿ ಕಣಕ್ಕಿಳಿಯಲು ಸಚಿವರು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೆ, ಹಿರಿಯ ನಾಯಕರೂ ಕೂಡ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.

ಸಚಿವರ ಹಿಂದೇಟಿನಿಂದಾಗಿ ಕೆಲವು ಕ್ಷೇತ್ರಗಳಲ್ಲಿ ಸಮರ್ಥ ಮತ್ತು ಗೆಲ್ಲುವ ಅಭ್ಯರ್ಥಿಗಳನ್ನು ಹುಡುಕಲು ಕಾಂಗ್ರೆಸ್‌ ಹರಸಾಹಸ ಪಡುತ್ತಿದೆ. ಹಲವೆಡೆ ಹೊಸಬರನ್ನು ಕಣಕ್ಕಿಳಿಸುವ ಮೂಲಕ ಪ್ರಯೋಗ ನಡೆಸುವ ಸಾಹಸಕ್ಕೂ ಮುಂದಾಗಬಹುದು ಎಂದು ಹೇಳಲಾಗುತ್ತಿದೆ.

ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿರುವ ಮಾಜಿ ಸಚಿವ ಪ್ರಕಾಶ ಹುಕ್ಕೇರಿ, ‘ನಾನು ಹೈಕಮಾಂಡ್‌ ಒದೆಯುವ ಫುಟ್‌ಬಾಲ್‌ ಅಲ್ಲ’ ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹುಕ್ಕೇರಿ ಅವರು 2014ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದರು. ಆದರೆ, 2019ರಲ್ಲಿ ಸೋಲುಂಡರು. ಈ ಬಾರಿ, “ಚುನಾವಣೆಗೆ ಸ್ಪರ್ಧಿಸುವಂತೆ ಹೈಕಮಾಂಡ್‌ ಒತ್ತಾಯಿಸಿದರೂ, ಅವರು ಯಾವುದೇ ರಿಸ್ಕ್‌ ತೆಗೆದುಕೊಳ್ಳುವುದಿಲ್ಲ” ಎಂದು ಕಾಂಗ್ರೆಸ್‌ ಮುಖಂಡರೊಬ್ಬರು ಹೇಳಿದ್ದಾರೆ.

ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ ಮಹದೇವಪ್ಪ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಶನಿವಾರ ಹೇಳಿದ್ದಾರೆ. “10 ವರ್ಷಗಳ ಹಿಂದೆ ಸ್ಪರ್ಧೆಗೆ ಅವಕಾಶ ನೀಡಿದ್ದರೆ, ನಾನು ತಂಬಾ ಸಂತೋಷಪಡುತ್ತಿದೆ. ಆದರೆ, ಈಗ ನನಗೆ ಆ ಅವಕಾಶ ಬೇಡ. ನಾನು ಟಿಕೆಟ್‌ ಆಕಾಂಕ್ಷಿಯಲ್ಲ. ಎಂದಿಗೂ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ, ಯಾರೇ ಅಭ್ಯರ್ಥಿಯಾದರೂ, ಅವರ ಗೆಲುವಿಗೆ ಶ್ರಮಿಸುತ್ತೇನೆ. ನನ್ನ ಮಗ ಸುನೀಲ್ ಬೋಸ್ ಅವರ ಹೆಸರು 3-4 ಬಾರಿ ಪ್ರಸ್ತಾಪವಾಗಿದೆ. ಆತನ ಸ್ಪರ್ಧೆ ಬಗ್ಗೆ ಪಕ್ಷದ ಕಾರ್ಯಕರ್ತರು ಮತ್ತು ಶಾಸಕರು ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ” ಎಂದು ಅವರು ಹೇಳಿದ್ದಾರೆ.

ಮೂಲಗಳ ಪ್ರಕಾರ, ಮಹದೇವಪ್ಪ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ಷರತ್ತಿನ ಮೇಲೆ ಅವರನ್ನು ಸಚಿವರನ್ನಾಗಿ ಮಾಡಿತ್ತು. ಸಿದ್ದರಾಮಯ್ಯ ಸಮ್ಮುಖದಲ್ಲೇ ಷರತ್ತು ವಿಧಿಸಲಾಗಿತ್ತು. ಆದರೆ, ಈಗ ಅವರು ಸ್ಪರ್ಧೆಗೆ ಹಿಂದೆ ಸರಿದಿದ್ದಾರೆ.

ದಾವಣಗೆರೆ ಕ್ಷೇತ್ರಕ್ಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಹೆಸರನ್ನು ಹೈಕಮಾಂಡ್ ಪ್ರಸ್ತಾಪಿಸಿದೆ. ಆದರೆ, ಅವರು ತಮ್ಮ ಕುಟುಂಬದ ಸದಸ್ಯರೊಬ್ಬರನ್ನು ಕಣಕ್ಕಿಳಿಸುವುದಾಗಿ ಸೂಚನೆ ನೀಡಿದ್ದಾರೆ. ಆದರೆ, ಈಗ ಆ ಕ್ಷೇತ್ರಕ್ಕೆ ಹೊಸಬರನ್ನು ಕಣಕ್ಕಿಳಿಸಲು ಹೈಕಮಾಂಡ್ ಯೋಜಿಸಿದೆ. ಕುರುಬ ಸಮುದಾಯದ ಬಿ.ಜಿ ವಿನಯ್ ಕುಮಾರ್ ಅವರು ಟಿಕೆಟ್‌ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ.

ರಾಯಚೂರಿನಲ್ಲಿ ಸೇವೆ ಸಲ್ಲಿಸಿದ್ದ ಐಎಎಸ್‌ ಅಧಿಕಾರಿ ಜಿ ಕುಮಾರ್‌ ನಾಯ್ಕ್‌ ಅವರನ್ನು ರಾಯಚೂರಿನಲ್ಲಿಯೇ ಕಣಕ್ಕಿಳಿಸುವ ಸಾಧ್ಯತೆಗಳಿವೆ. ಕೋಲಾರದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ಕೋಲಾರದಲ್ಲಿ ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿದೆ. ಆದರೆ, ಕೂಡ ಪಕ್ಷದೊಳಗೇ ವಿರೋಧಗಳಿದ್ದು, ಅವರು ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ, ಕೋಲಾರದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಂ ನಾರಾಯಣಸ್ವಾಮಿ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಇನ್ನು, ಸಚಿವರಾದ ಸತೀಶ್ ಜಾರಕಿಹೊಳಿ, ಬಿ ನಾಗೇಂದ್ರ ಮತ್ತು ಈಶ್ವರ ಖಂಡ್ರೆ ಅವರು ಕ್ರಮವಾಗಿ ಬೆಳಗಾವಿ, ಬಳ್ಳಾರಿ ಹಾಗೂ ಬೀದರ್ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ಚಿತ್ರದುರ್ಗಕ್ಕೆ ಮಾಜಿ ಸಚಿವ ಹೆಚ್ ಆಂಜನೇಯ ಹೆಸರು ಪ್ರಸ್ತಾಪವಾಗಿದೆ. ಅದರೆ, ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್ ಚಂದ್ರಪ್ಪ ಅವರಿಗೆ ಕ್ಷೇತ್ರ ಬಿಟ್ಟುಕೊಡಲು ಸಿದ್ಧರಾಗಿದ್ದಾರೆ.

ಸತೀಶ್ ಜಾರಕಿಹೊಳಿ, ಮಹದೇವಪ್ಪ ಸೇರಿದಂತೆ ಕೆಲವು ಸಚಿವರು ರಾಷ್ಟ್ರ ರಾಜಕಾರಣಕ್ಕೆ ಬದಲಾಗಲು ಸಿದ್ಧರಿಲ್ಲ. ಅವರು ರಾಜ್ಯ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆ.

“ನಾವು ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಲು ಕಾತರದಿಂದ ಕಾಯುತ್ತಿದ್ದೇವೆ. ಅಭ್ಯರ್ಥಿ ಪಟ್ಟಿ ಬಿಡುಗಡೆ ಬಳಿಕ ನಾವು ಕ್ಷೇತ್ರಗಳಲ್ಲಿ ಕೆಲಸ ಮಾಡಲು ಪ್ರಾರಂಭಿಸುತ್ತೇವೆ” ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಲೋಕಸಭಾ ಚುನಾವಣೆ | ಯಾರಿಗೆ ತುಮಕೂರು; ಅಭ್ಯರ್ಥಿ ಯಾರು?

2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 25 ಸ್ಥಾನ ಗೆದ್ದರೆ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರ ಅಭ್ಯರ್ಥಿ ತಲಾ ಒಂದು ಸ್ಥಾನ ಗಳಿಸಿದ್ದರು.

ಆದರೆ, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ 66 ಮತ್ತು ಜೆಡಿಎಸ್‌ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾನನಷ್ಟ ಪ್ರಕರಣಗಳಲ್ಲಿ ಪಕ್ಷವನ್ನೂ ಆರೋಪಿಯಾಗಿ ಮಾಡಬಹುದು: ಕರ್ನಾಟಕ ಹೈಕೋರ್ಟ್

ಮಾನನಷ್ಟ ಮೊಕದ್ದಮೆಗಳಲ್ಲಿ ಒಬ್ಬ ವ್ಯಕ್ತಿ ಮಾತ್ರವಲ್ಲ, ರಾಜಕೀಯ ಪಕ್ಷಗಳಂತಹ ಸಂಸ್ಥೆಗಳು ಸೇರಿದಂತೆ...

ಬೆಂಗಳೂರು | ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

ಯುವನಿಧಿ ಯೋಜನೆ ಪ್ರಯೋಜನವನ್ನು ಪ್ರತಿ ತಿಂಗಳೂ ಪಡೆಯಬೇಕಿದ್ದರೆ, ಪ್ರತಿ ತಿಂಗಳು ಸ್ವಯಂ...

ನನ್ನ ವಿರುದ್ಧ ಪ್ರಾಯೋಜಿತ ಅಪಪ್ರಚಾರ ನಡೆಯುತ್ತಿದೆ: ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು-ಉಡುಪಿ ಜಿಲ್ಲೆಗಳಲ್ಲಿ ಅಲ್ಲಿನ ಸಂಸದೆ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ...

ಲೋಕಸಭಾ ಚುನಾವಣೆ | ರಾಯಚೂರಿನಲ್ಲಿ ರವಿ ಪಾಟೀಲಗೆ ಕಾಂಗ್ರೆಸ್‌ ಟಿಕೆಟ್?

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಚುನಾವಣಾ ಆಯೋಗ ಅಧಿಕೃತ...