10 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಅಧಿಕಾರಿಗಳ ಆಸ್ತಿ ವಿವರ ಬಿಡುಗಡೆ

Date:

ಅಕ್ರಮ ಆಸ್ತಿ ಆರೋಪದ ಮೇಲೆ ಹತ್ತು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 41 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಏಕ ಕಾಲಕ್ಕೆ ದಾಳಿ ನಡೆಸಿ, ಅಪಾರ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ತುಮಕೂರು, ಮಂಡ್ಯ, ಚಿಕ್ಕಮಗಳೂರು, ಮೈಸೂರು, ಕೊಪ್ಪಳ, ವಿಜಯನಗರ, ಬಳ್ಳಾರಿ, ಹಾಸನ, ಚಾಮರಾಜನಗರ ಮತ್ತು ಮಂಗಳೂರು ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 10 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಕ್ರಮ ಆಸ್ತಿ ಹೊಂದಿರುವ ಬಗ್ಗೆ 10 ಪ್ರಕರಣಗಳು ದಾಖಲಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ದಾಳಿಗೊಳಗಾದ ಅಧಿಕಾರಿಗಳು ಮತ್ತು ಆಸ್ತಿ ವಿವರ

1- ಎ. ಹನುಮಂತರಾಯಪ್ಪ, ಜೂನಿಯರ್ ಇಂಜಿನಿಯರ್ ಪ್ರಭಾರ, ಸಿವಿಲ್, ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ, ಕೆಆರ್‌ಐಡಿಎಲ್ ಉಪ ವಿಭಾಗ, ಮಧುಗಿರಿ, ತುಮಕೂರು ಜಿಲ್ಲೆ.

– ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು ಆರು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ದಾಳಿ ಸಮಯದಲ್ಲಿ ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ವಾಸದ ಮನೆಗಳು, ಕೃಷಿ ಜಮೀನು- ಎಲ್ಲಾ ಸೇರಿ ಒಟ್ಟು 2.30.00.000/-

– ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 40,000/- ನಗದು. ರೂ.8.50,000/- ಬೆಲೆ ಬಾಳುವ ಚಿನ್ನಾಭರಣಗಳು, 14.80,000/- ರೂ ಬೆಲೆ ಬಾಳುವ ವಾಹನಗಳು. 2,00,000/- ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು. ಎಲ್ಲ ಸೇರಿ ಒಟ್ಟು ಮೌಲ್ಯ 25,30,000/- ಒಟ್ಟು ಮೌಲ್ಯ 2,55,30,000/-

2- ಹರ್ಷ ಹೆಚ್. ಆರ್, ಇ.ಇ, ಲೋಕೋಪಯೋಗಿ ಇಲಾಖೆ, ಮಂಡ್ಯ ಜಿಲ್ಲೆ.

– ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಶೋಧನಾ ಕಾರ್ಯ ನಡೆಸಲಾಗಿದೆ. ಶೋಧನಾ ಸಮಯದಲ್ಲಿ ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನಗಳು. 2 ವಾಸದ ಮನೆಗಳು, 15-30 ಎಕರೆ ಕೃಷಿ ಜಮೀನು, ಎಲ್ಲ ಸೇರಿ ಒಟ್ಟು ಮೌಲ್ಯ ರೂ. 1,68.19.000/-

– ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1.50.000/- ನಗದು. ರೂ. 10.00.000/- ಬೆಲೆ ಬಾಳುವ ಚಿನ್ನಾಭರಣಗಳು, ರೂ 55.00.000/- ಬೆಲೆಬಾಳುವ ವಾಹನಗಳು, ರೂ 2.15.50.336/- ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ 2.82.00,336/- ಒಟ್ಟು ಮೌಲ್ಯ 4,50,19,336/-

3- ಬಿ. ರವಿ, ಸಹಾಯಕ ಪ್ರಾಧ್ಯಾಪಕರು ಮತ್ತು ನಿರ್ದೇಶಕರು, ಪಿ.ಜಿ. ಕೇಂದ್ರ, ಕೃಷ್ಣದೇವರಾಯ ವಿಶ್ವವಿದ್ಯಾಲಯ, ನಂದಿಹಳ್ಳಿ, ಬಳ್ಳಾರಿ ಜಿಲ್ಲೆ.

– ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 3 ಸ್ಥಳಗಳಲ್ಲಿ ಶೋಧನಾ ಕಾರ್ಯ ನಡೆಸಲಾಗಿದೆ. ದಾಳಿ ವೇಳೆ ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 7 ನಿವೇಶನಗಳು, 2 ವಾಸದ ಮನೆಗಳು, ಎಲ್ಲ ಸೇರಿ 1,57.10,000/-

– ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 59.800/- ನಗದು. ರೂ. 9.12,600/- ಬೆಲೆ ಬಾಳುವ ಚಿನ್ನಾಭರಣಗಳು, ರೂ 23.30,000/- ಬೆಲೆಬಾಳುವ ವಾಹನಗಳು. ರೂ 26.00,000/- ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು 59.02,400/- ಒಟ್ಟು ಮೌಲ್ಯ 2 2.16.12.400/-

4-‌ ಆರ್ ಆರ್‌ ಭಾಸ್ಕರ್‌, ಗದಗ ವಿದ್ಯುತ್ ಶಕ್ತಿ ನಿಗಮ.

-ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 8 ನಿವೇಶನಗಳು, 3 ವಾಸದ ಮನೆಗಳು, 2 ಎಕರೆ ಕೃಷಿ ಜಮೀನು. ಎಲ್ಲ ಸೇರಿ ಒಟ್ಟು ಮೌಲ್ಯ ರೂ. 1.40.35,000/-

-ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 76.550/- ನಗದು. ರೂ. 20,00,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ 12,10,000/- ಬೆಲೆಬಾಳುವ ವಾಹನಗಳು, ರೂ 1,63,246/- ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. ಎಲ್ಲ ಸೇರಿ 34.49.796/- ಒಟ್ಟು ಮೌಲ್ಯ 1,74.84.796/-

5- ಪಿ. ರವಿ ಕುಮಾರ್, ಎ.ಇ.ಇ. ಲೋಕೋಪಯೋಗಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ, ಪ್ರಧಾನ ಕಛೇರಿ, ಹುಣಸೂರು ಉಪ ವಿಭಾಗ, ಮೈಸೂರು ಜಿಲ್ಲೆ

– ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 3 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1 ನಿವೇಶನ. 1 ವಾಸದ ಮನೆ. 1 ವಾಣಿಜ್ಯ ಸಂಕೀರ್ಣ, 5.9 ಎಕರೆ ಆಸ್ತಿ ಮಾರ್ಟ್‌ ಗೇಜ್, 4 ಎಕರೆ ಕೃಷಿ ಜಮೀನು. ಎಲ್ಲ ಸೇರಿ ಒಟ್ಟು 2. 1.78.60.000/-

– ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 560/- ನಗದು. ರೂ.13.30.500/- ಬೆಲೆ ಬಾಳುವ ಚಿನ್ನಾಭರಣಗಳು, ರೂ 4,00,000/- ಬೆಲೆಬಾಳುವ ವಾಹನಗಳು. ರೂ 11.55.400/- ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. ಎಲ್ಲ ಸೇರಿ ಒಟ್ಟು 28.86,460/- ಒಟ್ಟು ಮೌಲ್ಯ 2.07.46.460/-

6- ನೇತ್ರಾವತಿ ಕೆ. ಆರ್. ವಾಣಿಜ್ಯ ತೆರಿಗೆ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರ ಕಚೇರಿ, ವಾಣಿಜ್ಯ ತೆರಿಗೆ ಇಲಾಖೆ, ಚಿಕ್ಕಮಗಳೂರು ಜಿಲ್ಲೆ.

– ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 2 ಸ್ಥಳಗಳಲ್ಲಿ ಶೋಧನಾ ಕಾರ್ಯ ನಡೆದಿದ್ದು, ಶೋಧನಾ ಸಮಯದಲ್ಲಿ ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 5 ನಿವೇಶನಗಳು. 1 ವಾಸದ ಮನೆ. ಎಲ್ಲಾ ಸೇರಿ ಒಟ್ಟು ಮೌಲ್ಯ 1.18.50,000/-

– ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 4.58,000/- ನಗದು. ರೂ. 7.77.360/- ಬೆಲೆ ಬಾಳುವ ಚಿನ್ನಾಭರಣಗಳು, ರೂ 10,00,000/- ಬೆಲೆಬಾಳುವ ವಾಹನಗಳು, ರೂ 16,40.640/- ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. ಎಲ್ಲ ಸೇರಿ ಒಟ್ಟು ಮೌಲ್ಯ 77.98,000/- ಒಟ್ಟು ಮೌಲ್ಯ 1.98.48.000/-

7- ರೇಣುಕಮ್ಮ, ವಲಯ ಅರಣ್ಯಾಧಿಕಾರಿ, ಹೂವಿನ ಹಡಗಲಿ ವಲಯ, ಅರಣ್ಯ ಇಲಾಖೆ, ವಿಜಯನಗರ ಜಿಲ್ಲೆ.

– ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ನಡೆದಿದ್ದು, ಶೋಧನಾ ಸಮಯದಲ್ಲಿ ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ನಿವೇಶನಗಳು, 2 ವಾಸದ ಮನೆಗಳು, 11 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1.91.48,000/-

– ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 2.09,000/- ನಗದು, ರೂ. 32,00,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ 29.00.000/- ಬೆಲೆಬಾಳುವ ವಾಹನಗಳು, ರೂ 23.08.265/- ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು ಸೇರಿ ಒಟ್ಟು 86.17.265/- ಒಟ್ಟು ಮೌಲ್ಯ 2.77.65.265/-

8- ಎಂ. ಎನ್ ಯಜೇಂದ್ರ, ಎ.ಇ.ಇ. ಮೈಸೂರು ಅಭಿವೃದ್ಧಿ ಪ್ರಾಧಿಕಾರ, ಮೈಸೂರು.

– ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ನಡೆದಿದ್ದು, ಶೋಧನಾ ಸಮಯದಲ್ಲಿ ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 4 ನಿವೇಶನಗಳು. 1 ವಾಸದ ಮನೆ. 2 ಎಕರೆ
ಕೃಷಿ ಜಮೀನು. ಎಲ್ಲ ಸೇರಿ ಒಟ್ಟು ಮೌಲ್ಯ ರೂ. 66,00,000/-

– ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 86.000/- ನಗದು. ರೂ. 31,26,900/- ಬೆಲೆ ಬಾಳುವ ಚಿನ್ನಾಭರಣಗಳು, ರೂ 8,00,000/- ಬೆಲೆಬಾಳುವ ವಾಹನಗಳು. ಎಲ್ಲ ಸೇರಿ ಒಟ್ಟು ಮೌಲ್ಯ 40.12.900/- ಒಟ್ಟು ಮೌಲ್ಯ 1.06.12.900/-

9- ಶಾಂತಕುಮರ ಹೆಚ್. ಎಂ. ಇ.ಇ(ವಿ), ಎಂ. ಆರ್. ಟಿ ವಿಭಾಗ, ಮೆಸ್ಕಾಂ, ಅತ್ತಾವರ, ಮಂಗಳೂರು ಜಿಲ್ಲೆ.

– ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 3 ಸ್ಥಳಗಳಲ್ಲಿ ಶೋಧನಾ ಕಾರ್ಯ ನಡೆದಿದ್ದು, ಈ ವೇಳೆ ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನಗಳು, 2 ವಾಸದ ಮನೆಗಳು, ಎಲ್ಲಾ ಸೇರಿ 1,27.80.000/-

– ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 28,24,280/- ಬೆಲೆ ಬಾಳುವ ಚಿನ್ನಾಭರಣಗಳು, ರೂ 9.60,000/- ಬೆಲೆಬಾಳುವ ವಾಹನಗಳು, ರೂ4.00,000/- ಬೆಲೆ ಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು, ರೂ. 74.77.000/- ಬ್ಯಾಂಕ್ ಉಳಿತಾಯ. ಎಲ್ಲಾ ಸೇರಿ ಒಟ್ಟು ಮೌಲ್ಯ 1,16,61,280/- ಒಟ್ಟು ಮೌಲ್ಯ 2,44.41.280/-

10 – ಜಗನ್ನಾಥ ಜಿ. ಪಿ. ಆಹಾರ ನಿರೀಕ್ಷಕರು, ಹಾಸನ ತಾಲ್ಲೂಕು, ಹಾಸನ ಜಿಲ್ಲೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ನಡೆದಿದ್ದು, ಶೋಧನಾ ಸಮಯದಲ್ಲಿ ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 7 ನಿವೇಶನಗಳು. 1 ವಾಸದ ಮನೆ. ಎಲ್ಲಾ ಸೇರಿ
1,68,83,000/-

ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 89.000/- ನಗದು. 14.38.000/- ಬೆಲೆ ಬಾಳುವ ಚಿನ್ನಾಭರಣಗಳು, ರೂ6.20,000/- ಬೆಲೆಬಾಳುವ ವಾಹನಗಳು ಎಲ್ಲ ಸೇರಿ 21.47.000/-
1.90.30,000/- ಆಸ್ತಿ ಹೊಂದಿರುವುದು ಕಂಡುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ...

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು...

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...