ಲೋಕಾಯುಕ್ತ ವಿಚಾರಣೆ | ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

Date:

ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು (ನ.6) ಮುಡಾ ಪ್ರಕರಣ ಸಂಬಂಧಿಸಿ ಮೈಸೂರು ಲೋಕಾಯುಕ್ತ ವಿಚಾರಣೆ ಎದುರಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿ, “ಲೋಕಾಯುಕ್ತ ವಿಚಾರಣೆಗೆ ಇಂದು ಹಾಜರಾಗಿದ್ದು, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಿಜೆಪಿಯವರು ಗೋಬ್ಯಾಕ್ ಸಿಎಂ ಎಂಬ ಪ್ರತಿಭಟನೆ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ, ರಾಜ್ಯಪಾಲರ ಆದೇಶದಂತೆ ಲೋಕಾಯುಕ್ತ ವಿಚಾರಣೆಯನ್ನು ನಡೆಸಲಾಗಿದೆ. ಬಿಜೆಪಿಯವರು ವಿಚಾರಣೆಯ ವಿರುದ್ಧವಾಗಿದ್ದಾರೆ ಎಂಬ ಅರ್ಥವಲ್ಲವೇ? ಇದರಿಂದ ಈ ಆರೋಪ ಸುಳ್ಳು ಎಂದು ಸ್ಪಷ್ಟವಾಗುತ್ತದೆ” ಎಂದು ಹೇಳಿದರು.

ವಿಚಾರಣೆ ನಡೆಸುವ ಲೋಕಾಯುಕ್ತದ ಮೇಲೆ ನಂಬಿಕೆಯಿಲ್ಲ, ತನಿಖೆಯನ್ನು ಸಿಬಿಐನವರು ನಡೆಸಬೇಕೆಂಬ ಬಿಜೆಪಿಯವರ ಬೇಡಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ, “ಕೇಂದ್ರ ಸರ್ಕಾರದಲ್ಲಿ ಸಿಬಿಐ ಇದೆ. ಬಿಜೆಪಿಯವರು ಇದುವರೆಗೆ ಯಾವುದಾದರೂ ಹಗರಣವನ್ನು ಸಿಬಿಐಗೆ ವಹಿಸಿದ್ದಾರೆಯೇ” ಎಂದು ಪ್ರಶ್ನಿಸಿದರು.

“ಸಿಬಿಐದಂತೆ ಲೋಕಾಯುಕ್ತ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾಯುಕ್ತದ ನಂಬಿಕೆಯಿಲ್ಲದ ಬಿಜೆಪಿಯವರಿಗೆ ಕಾನೂನಿನ ಬಗ್ಗೆ ಗೌರವವಿಲ್ಲ. ಬಿಜೆಪಿಯವರು ಯಾವುದೇ ಪ್ರಕರಣವನ್ನು ಇದುವರೆಗೆ ಸಿಬಿಐಗೆ ನೀಡಿಲ್ಲ. ರಾಜ್ಯಪಾಲರು ಕೂಡ ಲೋಕಾಯುಕ್ತದಲ್ಲಿಯೇ ತನಿಖೆಯಾಗಬೇಕೆಂದು ಸೂಚಿಸಿದ್ದು, ಅದರಂತೆ ವಿಚಾರಣೆ ನಡೆಯುತ್ತಿದೆ” ಎಂದರು.

ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರ

ಮುಡಾದಿಂದ ಹಂಚಿಕೆಯಾದ 14 ನಿವೇಶನಗಳು ಕಾನೂನುಬದ್ಧವಾಗಿತ್ತೇ, ಅವುಗಳನ್ನು ವಾಪಸ್ಸು ನೀಡಲಾಯಿತೇಕೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ನಿವೇಶನ ಹಂಚಿಕೆ ಕಾನೂನೂಬದ್ಧವಾಗಿಯೇ ಆಗಿದೆ. ಬಿಜೆಪಿ ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ವಿಚಾರಣೆಯಲ್ಲಿ ಇಂದು ಉತ್ತರವನ್ನು ನೀಡಿದ್ದು, ತನಿಖೆಯನ್ನು ಕಾನೂನು ರೀತಿ ಮುಂದುವರಿಸಲಿದ್ದಾರೆ. ನನ್ನ ಮೇಲೆ ಬಂದ ಸುಳ್ಳು ಆರೋಪಗಳ ಮಾಡಲಾಗಿದ್ದರಿಂದ ನನ್ನ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿದರೆ ಹೊರತು, ತಪ್ಪು ಮಾಡಿದ್ದಕ್ಕಾಗಿ ನಿವೇಶನಗಳನ್ನು ವಾಪಸ್ಸು ನೀಡಲಾಗಿಲ್ಲ” ಎಂದು ಸ್ಪಷ್ಟಪಡಿಸಿದರು.

“ಈ ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನನ್ನ ಬಳಿಯಿಲ್ಲ ಹಾಗೂ ನನ್ನಿಂದ ಯಾವುದೇ ದಾಖಲೆ ಕೇಳಲಾಗಿಲ್ಲ. ನ್ಯಾಯಾಲಯದಲ್ಲಿ ತೀರ್ಮಾನವಾಗುವವರೆಗೆ ನನ್ನ ರಾಜಕೀಯ ಜೀವನಕ್ಕೆ ಯಾವುದೇ ಕಪ್ಪು ಮಸಿ ಇಲ್ಲ. ನನ್ನ ಮೇಲೆ ಮಾಡಲಾಗಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...