ಲೋಕಾಯುಕ್ತ ದಾಳಿ, ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ಸ್‌ಪೆಕ್ಟರ್‌ ಪರಾರಿ

Date:

ಲೋಕಾಯುಕ್ತ ದಾಳಿ ವಿಚಾರ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್ ಮನೆಯಲ್ಲೇ ಇಲಾಖೆಯ ಜೀಪ್ ಬಿಟ್ಟು ಪರಾರಿಯಾಗಿದ್ದಾರೆ.

- Advertisement -

ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್‌ರಿಂದ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದ್ದು,ಈ ಸಂಬಂಧ ಲೋಕಾಯುಕ್ತ ದಾಳಿ ಸುಳಿವು ದೊರೆತ ಕುಮಾರ್ ಪರಾರಿಯಾಗಿದ್ದು,ಅವರ ಪತ್ತೆಗೆ ಶೋಧ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸುಳ್ಳು ಕೇಸ್ ಹಾಕಿ ಚೆನ್ನೇಗೌಡರ 4 ಕೋಟಿ ರೂ. ಮೌಲ್ಯದ ಮನೆಯನ್ನು ತಮ್ಮ ಸಂಬಂಧಿಕರಿಗೆ ಕಡಿಮೆ ಬೆಲೆಗೆ ನೋಂದಣಿ ಮಾಡಿಕೊಡುವಂತೆ ಇನ್ಸ್‌ಪೆಕ್ಟರ್‌ ಕುಮಾರ್ ಕಿರುಕುಳ ನೀಡುತ್ತಿದ್ದರು. ಚೆನ್ನೇಗೌಡ ಪತ್ನಿ ಸರ್ಕಾರಿ ಉದ್ಯೋಗದಲ್ಲಿದ್ದು, ದಂಪತಿಗೆ ಇನ್ಸ್‌ಪೆಕ್ಟರ್‌ ಕಿರುಕುಳ ಕೊಟ್ಟಿದ್ದರು ಎನ್ನುವ ಆರೋಪವಿದೆ.

ಈ ಹಿಂದೆ ದಾಖಲಾಗಿದ್ದ ಪ್ರಕರಣದ ಸಂಬಂಧ ಬಿ ರಿಪೋರ್ಟ್‌ಗೆ ಹಾಕುತ್ತೇನೆ. ಮನೆಯನ್ನು ಬರೆದುಕೊಡಿ ಎಂದು ಇನ್ಸ್‌ಪೆಕ್ಟರ್‌ ಕುಮಾರ್ ಅವರು ಚೆನ್ನೇಗೌಡ ಅವರ ಮನೆಗೆ ಕೆಲ ಪುಂಡರನ್ನು ನುಗ್ಗಿಸಿ ದಾಂಧಲೆ ಮಾಡಿಸಿದ್ದರು. ಪುಂಡರ ದಾಂಧಲೆಯನ್ನು ಚೆನ್ನೇಗೌಡ ಅವರು ವಿಡಿಯೋ ಮಾಡಿಕೊಂಡಿದ್ದರು.

ಇನ್ಸ್‌ಪೆಕ್ಟರ್‌ ಕುಮಾರ್ ಸಂಬಂಧಿಯೊಬ್ಬರಿಗೆ ಕಡಿಮೆ ಬೆಲೆಗೆ ಮನೆ ಕೊಡಿಸಲು ಸಂಚು ಮಾಡಿ 4 ಕೋಟಿ ಮೌಲ್ಯದ ಮನೆಯನ್ನು 60 ಲಕ್ಷ ರೂ.ಗೆ ಮಾರಾಟ ಮಾಡುವಂತೆ ಚೆನ್ನೇಗೌಡ ದಂಪತಿಗೆ ಕಿರುಕುಳ ನೀಡುತ್ತಿದ್ದರು. ಅಲ್ಲದೇ ಮನೆ ನೋಡಿಕೊಂಡು ಬರಲು ಠಾಣೆಯ ಹೆಡ್ ಕಾನ್ಸ್‌ಟೇಬಲ್ ಉಮೇಶ್ ಅವರ ಜೊತೆ ಸಂಬಂಧಿಕರನ್ನು ಕಳುಹಿಸಿದ್ದರು.ಇನ್ಸ್‌ಪೆಕ್ಟರ್‌ ಸೂಚನೆಯಂತೆ ಇಬ್ಬರು ವ್ಯಕ್ತಿಗಳೊಂದಿಗೆ ಮನೆ ನೋಡಬೇಕೆಂದು ಹೆಡ್ ಕಾನ್ಸ್‌ಟೇಬಲ್ ಉಮೇಶ್ ಅವರು ಚೆನ್ನೇಗೌಡ ಅವರ ಮನೆಗೆ ನುಗ್ಗಿದ್ದರು.

ಮಾ. 18ರಂದು ಸಮಯ 3:25 ನಿಮಿಷಕ್ಕೆ ಕೆಂಪು ಬಣ್ಣದ ಕೆಎ 42 ಪಿ 0919 ನೋಂದಣಿಯ ಬ್ರೀಝಾ ಕಾರಿನಲ್ಲಿ ಮನೆಗೆ ಬಂದಿದ್ದರು. ಈ ಬಗ್ಗೆ ಪ್ರಶ್ನಿಸಿದ ಚೆನ್ನೇಗೌಡ ಅವರು ವಿಡಿಯೋ ಸಹ ಮಾಡಿದ್ದರು. ಈ ವೇಳೆ ಠಾಣೆಯಿಂದ ಕಾರು ಸಮೇತ ಕರೆದುಕೊಂಡು ಬರುವುದಾಗಿ ಹೇಳಿ ಹೆಡ್ ಕಾನ್ಸ್ ಟೇಬಲ್ ಉಮೇಶ್ ಅವರು ಅಲ್ಲಿಂದ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.

ಮತ್ತೊಂದಡೆ ನಾಗರಭಾವಿಯ ಖಾಸಗಿ ಹೊಟೇಲ್‌ನಲ್ಲಿ ಡೀಲ್ ಮಾಡುತ್ತಿದ್ದ ಇಬ್ಬರು ಪೊಲೀಸ್ ಪೇದೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಹೆಡ್ ಕಾನ್ಸ್‌ಟೇಬಲ್ ಉಮೇಶ್, ಅನಂತ್ ಲೋಕಾ ಬಲೆಗೆ ಬಿದ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...