ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಸಂಬಂಧ ಬೆಸ್ಕಾಂ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರ ಮನೆ ಮತ್ತು ಇತರೆಡೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಬೆಂಗಳೂರು ಸೇರಿ ರಾಜ್ಯದ ಆರು ಜಿಲ್ಲೆಯಲ್ಲಿ ಅಕ್ರಮ ಆಸ್ತಿ ಹೊಂದಿ ಅಧಿಕಾರಿಗಳಿ ಲೋಕಾಯುಕ್ತ ಶಾಕ್ ಕೊಟ್ಟಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರುಗಿ, ರಾಯಚೂರು, ಚಿತ್ರದುರ್ಗದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಹಲವು ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಈಸ್ಟ್ ಸರ್ಕಲ್ ಬೆಸ್ಕಾಂನ ಸೂಪರಿಂಟೆಂಡೆಂಟ್ ಎಂಜಿನಿಯರ್ (ಎಲೆಕ್ಟಿಕಲ್) ಲೋಕೇಶ್ ಬಾಬು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಸಂತಪುರ ವಾರ್ಡ್ ಸಂಖ್ಯೆ 197 ರ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಬಿಬಿಎಂಪಿಯ ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ. ಸುನೀಲ್ ಕುಮಾರ್ ಅವರ ಮನೆ ಮೇಲೆ ದಾಳಿ ನಡೆದಿದೆ.
ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತ ಆರ್.ಪಿ. ಜಾಧವ ಮನೆ, ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿ ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮನೆ ಮೇಲೂ ದಾಳಿ ನಡೆದಿದೆ.
ಯಾವೆಲ್ಲ ಅಧಿಕಾರಿಗಳ ಮನೆ ಮೇಲೆ ದಾಳಿ
- ಲೋಕೇಶ್ ಬಾಬು, ಬೆಸ್ಕಾಂ ಇಂಜಿಯರ್, ಬೆಂಗಳೂರಿನ ಬಣಸವಾಡಿ ನಿವಾಸಿ.
- ಸುರೇಶ್ ಬಾಬು ಕಂದಾಯ ಇಲಾಖೆ ಇನ್ಸ್ಪೆಕ್ಟರ್ ಬೆಂಗಳೂರು ನಿವಾಸ.
- ಕೃಷ್ಣಪ್ಪ ಬಿಬಿಎಂಪಿ ತೆರಿಗೆ ಇನ್ಸ್ಪೆಕ್ಟರ್, ಬೆಂಗಳೂರು ನಿವಾಸ.
- ಸುನೀಲ್ ಕುಮಾರ್ ಜಿಲ್ಲಾ ಆರೋಗ್ಯಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ.
- ನಂಜುಡಯ್ಯ, ಶಸಸ್ತ್ರ ಡಿವೈಎಸ್ಪಿ, ಚನ್ನಪಟ್ಟಣ ಪೊಲೀಸ್ ತರಬೇತಿ ಶಾಲೆ.
- ಲಕ್ಷ್ಮಣ್ ಎಸ್ಡಿಎ, ಗದಗ.
- ರಾಮಪ್ಪ, ಕಲಬುರುಗಿ ಮಹಾನಗರ ಪಾಲಿಕೆ ಇಂಜಿನಿಯರ್.
- ರಮೇಶ್, ಅಬಾಕಾರಿ ಇನ್ಸ್ ಪೆಕ್ಟರ್ ರಾಯಚೂರು.
- ಸುರೇಶ್ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ.
- ಸುನೀಲ್ ಬಿಹೆಚ್ಒ, ಬೆಂಗಳೂರು ಗ್ರಾಮಾಂತರ.
ಚಿತ್ರದುರ್ಗದಲ್ಲೂ ಲೋಕಾಯುಕ್ತ ದಾಳಿ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಅರಣ್ಯ ಇಲಾಖೆ ACF ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿಠಲ್ ನಗರದಲ್ಲಿರುವ ಹಿರಿಯೂರು ಉಪ ವಿಭಾಗದ ACF ಸುರೇಶ್ ಮನೆ ಸೇರಿ 4 ಕಡೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಚಳ್ಳಕೆರೆ ನಿವಾಸ, ಹೊಸ ಬ್ಯಾಡರಹಟ್ಟಿ ಮನೆ, ಬೆಂಗಳೂರು ನಿವಾಸ, ಹಿರಿಯೂರು ಕಚೇರಿ ಮೇಲೆ ದಾಳಿ ಮಾಡಿ ನಾಲ್ಕು ಕಡೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.