ಈಶ್ವರಪ್ಪ ಪುತ್ರನನ್ನು ಎಂಎಲ್‌ಸಿ ಮಾಡುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ: ಬಿ ಎಸ್ ಯಡಿಯೂರಪ್ಪ

Date:

ತಮ್ಮ ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ನೀಡದಿರುವ ವಿಚಾರಕ್ಕೆ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿಯೇ ಅಸಮಾಧಾನಗೊಂಡಿದ್ದಾರೆ. ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದ ಈಶ್ವರಪ್ಪ, “ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನನಗೆ ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಲಿಲ್ಲ” ಎಂದು ವಾಗ್ದಾಳಿ ನಡೆಸಿದ್ದರು.

- Advertisement -

ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್ ನೀಡದಿರುವ ಬಗ್ಗೆ ಬೆಂಗಳೂರಲ್ಲಿ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, “ನಾನು ಈಶ್ವರಪ್ಪ ಅವರ ಜೊತೆ ಮಾತನಾಡುತ್ತೇನೆ. ಈಶ್ವರಪ್ಪ ಪುತ್ರನನ್ನು ವಿಧಾನ ಪರಿಷತ್ ಸದಸ್ಯ ಮಾಡುವ ಬಗ್ಗೆ ಹೈಕಮಾಂಡ್ ಚಿಂತನೆ ಮಾಡಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇದನ್ನು ಓದಿದ್ದೀರಾ? ರಾಜಕೀಯ ಬಿಟ್ಟು ಕೇಂದ್ರದಿಂದ ಮೇಕೆದಾಟು ಯೋಜನೆಗೆ ಬಿಜೆಪಿ ಅನುಮತಿ ಕೊಡಿಸಲಿ: ಡಿ ಕೆ ಶಿವಕುಮಾರ್

ಲೋಕಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್ ತನ್ನ ಎರಡನೇ ಪಟ್ಟಿಯನ್ನು ನಿನ್ನೆ ರಿಲೀಸ್ ಮಾಡಿದೆ. ಬಿಜೆಪಿಯ ಈ ಪಟ್ಟಿಯಲ್ಲಿ ಹಾವೇರಿಯಿಂದ ಈಶ್ವರಪ್ಪ ಪುತ್ರ ಕಾಂತೇಶ್​ ಹೆಸರು ಇರಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಬದಲಾದ ನಿರ್ಧಾರದಿಂದಾಗಿ ಬಿಜೆಪಿ ಹೈಕಮಾಂಡ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮಣೆ ಹಾಕಿದೆ. ಇದು ಈಶ್ವರಪ್ಪ ಅವರ ಆಕ್ರೋಶಕ್ಕೆ ಕಾರಣವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ ಅಮ್ಮ’

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ...

ಹವಾಮಾನ | ರಾಜ್ಯದ ಹಲವೆಡೆ ಒಣಹವೆ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಇಂದು ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಕೆಲವೆಡೆ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...