ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಜಾಮೀನು ನೀಡಿದ ಲಕ್ನೋ ನ್ಯಾಯಾಲಯ

Date:

ಸೇನಾ ಸಿಬ್ಬಂದಿ ಬಗ್ಗೆ ಹೇಳಿಕೆ ನೀಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಲಕ್ನೋ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.

- Advertisement -

2022ರಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಯೋಧರ ಬಗ್ಗೆ ರಾಹುಲ್ ಗಾಂಧಿ ಅವರು ನೀಡಿದ್ದ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು ಎಂದು ರಾಹುಲ್ ಗಾಂಧಿ ಪರ ವಕೀಲ ಪ್ರಾಂಶು ಅಗರ್ವಾಲ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಮೋದಿ ಉಪನಾಮ ಪ್ರಕರಣ; ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

ರಾಹುಲ್ ಗಾಂಧಿ ಅವರು ಹಾಜರಾದ ನಂತರ, ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ. ನ್ಯಾಯಾಲಯದ ನಿರ್ದೇಶನದಂತೆ ಗಾಂಧಿಯವರು ಜಾಮೀನು ಬಾಂಡ್ ಮತ್ತು ಶ್ಯೂರಿಟಿಗಳನ್ನು ಸಲ್ಲಿಸಿದ ನಂತರ ಜಾಮೀನು ನೀಡಲಾಯಿತು ಎಂದು ವಕೀಲರು ತಿಳಿಸಿದ್ದಾರೆ.

ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯನ್ನು ಪರಿಗಣಿಸಿದ ನಂತರ ರಾಹುಲ್ ಗಾಂಧಿ ಅವರನ್ನು ಆರೋಪಿಯನ್ನಾಗಿ ಸಮನ್ಸ್ ನೀಡಲಾಗಿದೆ. ಗಾಂಧಿಯವರು ಈ ಹಿಂದೆ ಪರಿಹಾರ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಹುಲ್ ಗಾಂಧಿ ಅವರು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಅಜಯ್ ರೈ ಮತ್ತು ಉಸ್ತುವಾರಿ ಅವಿನಾಶ್ ಪಾಂಡೆ ಅವರೊಂದಿಗೆ ನ್ಯಾಯಾಲಯಕ್ಕೆ ಹಾಜರಾದರು. ಈ ವೇಳೆ ನ್ಯಾಯಾಲಯದ ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು.

ಗಡಿ ರಸ್ತೆಗಳ ಸಂಸ್ಥೆಯ ನಿವೃತ್ತ ನಿರ್ದೇಶಕ (ಸೇನೆಯಲ್ಲಿ ಕರ್ನಲ್ ಹುದ್ದೆಗೆ ಸಮಾನ) ಉದಯ್ ಶಂಕರ್ ಶ್ರೀವಾಸ್ತವ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

2022ರ ಡಿಸೆಂಬರ್ 16ರಂದು ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ಭಾರತೀಯ ಸೇನೆ ಮತ್ತು ಚೀನಾ ಸೇನೆಯ ನಡುವಿನ ಘರ್ಷಣೆಯ ಬಗ್ಗೆ ಪ್ರಸ್ತಾಪಿಸಿದ್ದರು. “ಜನರು ಭಾರತ್ ಜೋಡೋ ಯಾತ್ರೆಯ ಬಗ್ಗೆ ಏನು ಕೇಳುತ್ತಾರೆ? ಆದರೆ ನಮ್ಮ ಯೋಧರನ್ನು ಚೀನಾ ಸೈನಿಕರು ಹೊಡೆದ ಬಗ್ಗೆ ಒಮ್ಮೆಯೂ ಕೇಳುವುದಿಲ್ಲ” ಎಂದು ಹೇಳಿದ್ದರು. ಈ ಹೇಳಿಕೆಯು ತಮ್ಮ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...