ಮಧ್ಯಪ್ರದೇಶದಲ್ಲಿ ಭಾರತೀಯ ಆದಿವಾಸಿ ಪಕ್ಷವು ತನ್ನ ಮೊದಲ ಜಯವನ್ನು ದಾಖಲಿಸಿದೆ. ರಾಜ್ಯದ ರತ್ಲಾಮ್ ಜಿಲ್ಲೆಯ ಸೈಲಾನಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಇದೇ ಮೊದಲ ಬಾರಿಗೆ ಖಾತೆ ತೆರೆದಿದೆ.
ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಸೈಲಾನಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕಮಲೇಶ್ವರ್ ದೊಡಿಯಾರ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹರ್ಷ್ ವಿಜಯ್ ಗೆಹ್ಲೋಟ್ ವಿರುದ್ಧ 4,618 ಮತಗಳ ಅಂತರದಿಂದ ಗೆದ್ದಿದ್ದಾರೆ.
ರಾಜಸ್ಥಾನದಲ್ಲಿ ಪ್ರಧಾನ ಕಛೇರಿ ಹೊಂದಿರುವ ಭಾರತ್ ಆದಿವಾಸಿ ಪಕ್ಷವು ಮಧ್ಯಪ್ರದೇಶದಲ್ಲಿ ನಡೆದ ಯಾವುದೇ ಚುನಾವಣೆಯಲ್ಲಿ ಗೆಲುವು ಸಾಧಿಸಿರಲಿಲ್ಲ. ಇದೀಗ, ಮೊದಲ ಬಾರಿಗೆ ಗೆದ್ದಿದೆ.