ಕಮಿಷನ್‌ ಆರೋಪ: ಪ್ರಿಯಾಂಕಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ ಬಿಜೆಪಿ

Date:

ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಶೇ.50 ಕಮಿಷನ್‌ ಆರೋಪ ಮಾಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹಾಗೂ ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ‘ಎಕ್ಸ್’ (ಟ್ವಿಟರ್‌) ಖಾತೆಗಳ “ನಿರ್ವಹಿಸುವವರ” ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಇಂದೋರ್ ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆ ಆಗಿರುವ ಎಕ್ಸ್‌ನಲ್ಲಿ ಜ್ಞಾನೇಂದ್ರ ಅವಸ್ಥಿ ಎಂಬ ವ್ಯಕ್ತಿಯ ಹೆಸರನ್ನು ಹೊಂದಿರುವ ನಕಲಿ ಪತ್ರವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ಕಾನೂನು ಘಟಕ ಸಂಚಾಲಕ ನಿಮೇಶ್ ಪಾಠಕ್ ದೂರು ನೀಡಿರುವುದಾಗಿ ಇಂದೋರ್ ಪೊಲೀಸ್ ಕಮಿಷನರ್ ಶನಿವಾರ ತಡರಾತ್ರಿ ಹೇಳಿದ್ದಾರೆ. ಪತ್ರದಲ್ಲಿ ಶೇ 50 ಕಮಿಷನ್ ನೀಡುವಂತೆ ರಾಜ್ಯದ ಗುತ್ತಿಗೆದಾರರಿಗೆ ಕೇಳಲಾಗುತ್ತಿದೆ ಎಂದು ಉಲ್ಲೇಖಿಸಲಾಗಿದೆ.

ಶುಕ್ರವಾರ ಪ್ರಿಯಾಂಕಾ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು ಅದರಲ್ಲಿ, ಮಧ್ಯಪ್ರದೇಶದ ಗುತ್ತಿಗೆದಾರರ ಒಕ್ಕೂಟ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದೆ. ಅವರು ಶೇ. 50 ಕಮಿಷನ್ ಪಾವತಿಸಿದ ನಂತರವೇ ಅವರ ಹಣ ಬಿಡುಗಡೆಯಾಗುತ್ತದೆ ಎಂದು ದೂರಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಐಪಿಸಿ, ಸಿಆರ್‌ಪಿಸಿ ಬದಲು 3 ಹೊಸ ಕ್ರಿಮಿನಲ್ ಕಾನೂನುಗಳು: ಲೋಕಸಭೆಯಲ್ಲಿ ವಿಧೇಯಕಗಳ ಮಂಡನೆ

ಕರ್ನಾಟಕದ ಭ್ರಷ್ಟ ಬಿಜೆಪಿ ಸರ್ಕಾರ ಶೇ. 40 ಕಮಿಷನ್ ಸಂಗ್ರಹಿಸುತ್ತಿತ್ತು. ಮಧ್ಯಪ್ರದೇಶದಲ್ಲಿ ಬಿಜೆಪಿಯ ಭ್ರಷ್ಟಾಚಾರ ತನ್ನದೇ ದಾಖಲೆಯನ್ನು ಮುರಿದಿದೆ. ಕರ್ನಾಟಕದ ಜನರು ಶೇ 40 ಕಮಿಷನ್ ಸರ್ಕಾರವನ್ನು ಕಿತ್ತೊಗೆದಿದ್ದಾರೆ. ಈಗ ಮಧ್ಯಪ್ರದೇಶದ ಜನರು ಶೇ. 50 ಕಮಿಷನ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದ್ದರು.

ಕಮಲ್ ನಾಥ್ ಮತ್ತು ಅರುಣ್ ಯಾದವ್ ಕೂಡ ಇದೇ ರೀತಿಯ ಪೋಸ್ಟ್ ಮಾಡಿದ್ದರು.

ನಗರದ ಸಂಯೋಗಿತಗಂಜ್ ಪೊಲೀಸ್ ಠಾಣೆಯಲ್ಲಿ ಅವಸ್ಥಿ ಹಾಗೂ ವಾದ್ರಾ, ನಾಥ್ ಮತ್ತು ಅರುಣ್ ಯಾದವ್ ಅವರ ‘ಎಕ್ಸ್’ ಖಾತೆಗಳ “ನಿರ್ವಹಿಸುವವರ” ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪಾಠಕ್ ಅವರ ದೂರಿನ ಮೇರೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಠಕ್ ಅವರ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 420 (ವಂಚನೆ) ಮತ್ತು 469 (ಪ್ರತಿಷ್ಠೆಗೆ ಹಾನಿ ಮಾಡುವ ಉದ್ದೇಶದಿಂದ ಸುಳ್ಳು ಆರೋಪ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ| ಹೆಚ್ಚುತ್ತಿದೆ ಚಾರ್ ಧಾಮ್ ಯಾತ್ರಾರ್ಥಿಗಳ ಸಾವಿನ ಸಂಖ್ಯೆ; 116 ಮಂದಿ ಮೃತ್ಯು

ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರಿಕರ ಸಾವಿನ ಸಂಖ್ಯೆಯು ಹೆಚ್ಚಳವಾಗುತ್ತಿದ್ದು, ಬುಧವಾರ ಮತ್ತೆ...

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಯಾವುದೇ ಪುರಾವೆಯಿಲ್ಲ: ಧರ್ಮೇಂದ್ರ ಪ್ರಧಾನ್

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳನ್ನು ಅಲ್ಲಗಳೆದಿರುವ...

ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ ಐಸ್‌ಕ್ರೀಂ ಒಳಗೆ ಮನುಷ್ಯನ ಬೆರಳು ಪತ್ತೆಯಾಗಿರುವ...

ನೀಟ್ ಫಲಿತಾಂಶ ವಿವಾದ: 1563 ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಸುಪ್ರೀಂಗೆ ತಿಳಿಸಿದ ಕೇಂದ್ರ

ಈ ವರ್ಷದ ನೀಟ್‌ ಯುಜಿ ಪ್ರವೇಶ ಪರೀಕ್ಷೆಯಲ್ಲಿ 1563 ಅಭ್ಯರ್ಥಿಗಳು ಪಡೆದುಕೊಂಡಿದ್ದ...