ಮಧ್ಯಪ್ರದೇಶದ ಜನರಿಗೆ ಪ್ರಧಾನಿ ಮೋದಿ ಮೇಲೆ ಅಪಾರ ನಂಬಿಕೆ ಇದೆ. ಚುನಾವಣಾ ಗೆಲುವು ಮೋದಿ ಅವರಿಗೆ ಸಲ್ಲುತ್ತದೆ ಎಂದು ಮಧ್ಯಪ್ರದೇಶದ ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
‘‘ಡಬಲ್ ಇಂಜಿನ್ ಸರ್ಕಾರ,ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಕೆಲಸಗಳನ್ನು ರಾಜ್ಯದ ಜನರಿಗೆ ತಲುಪಿಸಿದ್ದೇವೆ. ರಾಜ್ಯದಲ್ಲಿಯೂ ಜಾರಿಗೆ ತಂದ ಯೋಜನೆಗಳು ಜನರ ಹೃದಯ ಮುಟ್ಟಿವೆ” ಎಂದು ಅವರು ಹೇಳಿದ್ದಾರೆ.
“ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ವಿವಿಧ ಬಿಜೆಪಿ ನಾಯಕರು ಕೊಡುಗೆ ನೀಡಿದ್ದಾರೆ ಎಂದು ಚೌಹಾಣ್ ಹೇಳಿದ್ದಾರೆ.
ಬಿಜೆಪಿ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, “ಇದು ಡಬಲ್ ಇಂಜಿನ್ ಸರ್ಕಾರದ ಮ್ಯಾಜಿಕ್” ಎಂದಿದ್ದಾರೆ.
“ಇದು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ, ಪ್ರಧಾನಿ ಮೋದಿ ನಾಯಕತ್ವ, ಅಮಿತ್ ಶಾ ಮತ್ತು ಜೆಪಿ ನಡ್ಡಾ, ಮುಖ್ಯಮಂತ್ರಿ ಚೌಹಾಣ್ ಅವರ ಸಂಕಲ್ಪ ಹಾಗೂ ಮಧ್ಯಪ್ರದೇಶದ ಸಾರ್ವಜನಿಕರ ಮೇಲಿನ ಸಮರ್ಪಣೆಯ ಮ್ಯಾಜಿಕ್,” ಎಂದು ಅವರು ಹೇಳಿದ್ದಾರೆ.
ಮಧ್ಯಪ್ರದೇಶ 230 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 161 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.