ಮಧ್ಯಪ್ರದೇಶ | ದಲಿತ ಪ್ರಾಬಲ್ಯದ ಗಾಮಕ್ಕೆ ಬೆಂಕಿ ಹಚ್ಚಿದ ದುರುಳರು

Date:

ಮಧ್ಯಪ್ರದೇಶದ ವಿಜಯಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಬೆನ್ನಲ್ಲೇ ಹಿಂಸಾಚಾರ ನಡೆದಿದೆ. ದುರುಳರು ದಲಿತರ ಪ್ರಾಬಲ್ಯವಿರುವ ಗ್ರಾಮಕ್ಕೆ ಬೆಂಕಿ ಹಚ್ಚಿದ್ದಾರೆ. ಬುಧವಾರ ತಡರಾತ್ರಿ ಮತದಾನ ಮುಗಿದ ಬಳಿಕ ಗೊಹ್ತಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

- Advertisement -

ದುಷ್ಕರ್ಮಿಗಳು ಗ್ರಾಮದಲ್ಲಿ ಗಲಾಟೆ ಸೃಷ್ಟಿಸಿ, ಕಲ್ಲು ತೂರಾಟ ನಡೆಸಿ ಆಸ್ತಿ ಪಾಸ್ತಿಗಳನ್ನು ಧ್ವಂಸ ಮಾಡಿದ್ದಾರೆ. ಭಯಭೀತರಾದ ಅನೇಕ ಗ್ರಾಮಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಶ್ರಯ ಪಡೆದಿದ್ದಾರೆ. ಇನ್ನು ಪರಿಸ್ಥಿತಿ ಈ ಹಂತಕ್ಕೆ ತಲುಪಿದರೂ ಕೂಡಾ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ವಿಜಯಪುರ ಪೊಲೀಸ್ ಠಾಣೆ ಪ್ರಭಾರಿ ಪಪ್ಪು ಸಿಂಗ್ ಯಾದವ್, “ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಹತೋಟಿಗೆ ತಂದಿವೆ. ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ಬಳಿಕ ಹಿಂಸಾಚಾರ ನಡೆದಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಜಾತಿ ದೌರ್ಜನ್ಯ | ದಲಿತ ವ್ಯಕ್ತಿ ಕುರ್ಚಿಯಲ್ಲಿ ಕುಳಿತಿದ್ದಕ್ಕೆ ಬ್ರಾಹ್ಮಣನ ದಾಂಧಲೆ

ವಿಜಯಪುರದಲ್ಲಿ ಬುಧವಾರ ಹಿಂಸಾಚಾರ, ಪ್ರತಿಭಟನೆ, ಮತಗಟ್ಟೆ ವಶಪಡಿಸಿಕೊಂಡ ಆರೋಪದ ನಡುವೆಯೇ ಉಪಚುನಾವಣೆ ನಡೆದಿದೆ. ಮತದಾನ ಮಾಡುವ ನಿರಾಕರಿಸಲಾಗಿದೆ ಎಂಬ ಆರೋಪದಲ್ಲಿ ಬುಧವಾರ ರಾತ್ರಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು, ಹಿಂಸಾಚಾರ ನಡೆದಿದೆ. ಮೂವರು ಗಾಯಗೊಂಡಿದ್ದಾರೆ.

ವಿಜಯಪುರದಲ್ಲಿ ಉಪಚುನಾವಣೆಗೆ ಎರಡು ದಿನಗಳ ಮೊದಲು ಹಿಂಸಾಚಾರ ಪ್ರಾರಂಭವಾಗಿದೆ. ಗುಂಪೊಂದು ಗ್ರಾಮಸ್ಥರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಮೂವರು ಗಾಯಗೊಂಡಿದ್ದಾರೆ. ಬಿಜೆಪಿ- ಕಾಂಗ್ರೆಸ್‌ನ ಹೊಡೆದಾಟಕ್ಕೆ ದಲಿತರು ನಷ್ಟ ಅನುಭವಿಸುವಂತಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ವಿಜಯಪುರ ವಿಧಾನಸಭಾ ಕ್ಷೇತ್ರದ ಶಾಸಕ ರಾಮನಿವಾಸ್ ರಾವತ್ ಕಾಂಗ್ರೆಸ್‌ಗೆ ಮತ್ತು ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿದ ಹಿನ್ನೆಲೆ ಈ ಕ್ಷೇತ್ರದಲ್ಲಿ ವಿಧಾನಸಭಾ ಉಪಚುನಾವಣೆ ನಡೆದಿದೆ. ಕಾಂಗ್ರೆಸ್ ತೊರೆದ ರಾಮನಿವಾಸ್ ರಾವತ್ ನಂತರ ಬಿಜೆಪಿಗೆ ಸೇರಿದ್ದು ಸದ್ಯ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸಂಪುಟದಲ್ಲಿ ರಾಜ್ಯ ಅರಣ್ಯ ಸಚಿವರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...