ಮಧ್ಯಪ್ರದೇಶ | ವಿಚಿತ್ರ ಪ್ರಮಾಣ ವಚನ ಸ್ವೀಕಾರ ಸಮಾರಂಭ; 15 ನಿಮಿಷದಲ್ಲಿ ಎರಡು ಬಾರಿ ಸಚಿವರಾದ ಶಾಸಕ!

Date:

ಮಧ್ಯಪ್ರದೇಶದಲ್ಲಿ ನಡೆದ ವಿಚಿತ್ರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಾಸಕರೊಬ್ಬರು 15 ನಿಮಿಷದಲ್ಲಿ ಎರಡು ಬಾರಿ ಸಚಿವರಾಗಿದ್ದಾರೆ.

ಇತ್ತೀಚೆಗೆ ಆಡಳಿತ ಪಕ್ಷಕ್ಕೆ ಸೇರ್ಪಡೆಯಾದ ಶಾಸಕ ರಾಮನಿವಾಸ್ ರಾವತ್ ಇಂದು (ಸೋಮವಾರ) ಬೆಳಿಗ್ಗೆ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸಂಪುಟಕ್ಕೆ ಸೇರ್ಪಡೆಗೊಂಡರು. ಆದರೆ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಅಸಾಮಾನ್ಯ ಘಟನೆಗೆ ಸಾಕ್ಷಿಯಾಗಿ ಸುದ್ದಿಯಾಗಿದೆ.

ಬೆಳಿಗ್ಗೆ 9 ಗಂಟೆಗೆ ರಾಜಭವನದಲ್ಲಿ ಮುಖ್ಯಮಂತ್ರಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ರಾಜ್ಯಪಾಲ ಮಂಗುಭಾಯ್ ಸಿ ಪಟೇಲ್ ಅವರು ರಾವತ್ ಅವರಿಗೆ ಸಚಿವರಾಗಿ ಪ್ರಮಾಣ ವಚನ ಬೋಧಿಸಲು ನಿರ್ಧರಿಸಲಾಗಿತ್ತು. ಬೆಳಿಗ್ಗೆ 9.03ರ ಹೊತ್ತಿಗೆ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದಾದ ಬಳಿಕ 15 ನಿಮಿಷಗಳ ನಂತರ ರಾವತ್ ಅವರಿಗೆ ಸಂಪುಟ ಸಚಿವರಾಗಿ ಎರಡನೇ ಪ್ರಮಾಣವಚನ ಬೋಧಿಸಲಾಗಿದೆ. ಎರಡು ಬಾರಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಕಾರ್ಯವಿಧಾನದ ಲೋಪಗಳ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ.

ಇದನ್ನು ಓದಿದ್ದೀರಾ?  ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹೇಮಂತ್ ಸೊರೇನ್

ಇನ್ನು ಕಾಂಗ್ರೆಸ್‌ನಿಂದ ಶಾಸಕರಾಗಿದ್ದಾಗಲೇ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ ಮೊದಲ ವ್ಯಕ್ತಿ ರಾಮನಿವಾಸ್ ರಾವತ್ ಆಗಿದ್ದಾರೆ. ಬಿಜೆಪಿಗೆ ಸೇರ್ಪಡೆಯಾದ ರಾಮನಿವಾಸ್ ರಾವತ್ ಇನ್ನೂ ಕೂಡಾ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಲ್ಲ. ಇಂದಿಗೂ ಕಾಂಗ್ರೆಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಮತ್ತು ವಿಜಯಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಆದರೆ ಬಿಜೆಪಿ ಸೇರಿ ಸಚಿವರಾಗಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಮಾಡುವಾಗ ರಾವತ್ ‘ಸಂಪುಟ ಸಚಿವ’ ಎಂದು ಹೇಳುವ ಬದಲಾಗಿ ತಪ್ಪಿ ‘ರಾಜ್ಯ ಸಚಿವ’ರೆಂದು ಹೇಳಿದ್ದಾರೆ. ಇದರಿಂದಾಗಿ ಎರಡು ಬಾರಿ ಪ್ರಮಾಣ ವಚನ ಸ್ವೀಕಾರ ಮಾಡಬೇಕಾಯಿತು ಎಂದು ವರದಿ ಉಲ್ಲೇಖಿಸಿದೆ.

ಆದರೆ ಮೊದಲು ತಪ್ಪಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸ್ಥಾನಕ್ಕೆ ರಾವತ್ ರಾಜೀನಾಮೆ ನೀಡದ ಕಾರಣ ಈಗ ರಾವತ್ ಸಂಪುಟ ಸಚಿವರೂ ಆಗಿದ್ದಾರೆ, ರಾಜ್ಯ ಸಚಿವರೂ ಆಗಿದ್ದಾರೆ. ಸಾಂಪ್ರಾದಾಯಿಕವಾಗಿ ಅವರು ಸಂಪುಟ ಸಚಿವ ಪ್ರಮಾಣ ವಚನ ಸ್ವೀಕಾರ ಮಾಡುವ ಮೊದಲು ತಾನು ತಪ್ಪಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯ ಸಚಿವ ಸ್ಥಾನಕ್ಕೆ ಔಪಚಾರಿಕವಾಗಿ ರಾಜೀನಾಮೆ ನೀಡಬೇಕಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1950ರ ಕೇಂದ್ರ ಬಜೆಟ್ ಸೋರಿಕೆ: ನಡೆದಿದ್ದೇನು, ಪರಿಣಾಮವೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸತತ ಏಳನೇ...

ನಾಲ್ಕು ಕೃಷಿ ಡಿಪ್ಲೊಮಾ ಕಾಲೇಜು ಪುನರಾರಂಭಕ್ಕೆ ಮರು ಅನುಮತಿ ನೀಡಿದ ಸರ್ಕಾರ

ಕಳೆದ ಸರ್ಕಾರದ ಅವದಿಯಲ್ಲಿ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು...

ವಾಲ್ಮೀಕಿ ನಿಗಮ ಅಕ್ರಮ | ಹಣ ಲೂಟಿ ಮಾಡಲು ನಕಲಿ ಹುದ್ದೆ ಸೃಷ್ಟಿ!

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ.ಗಳನ್ನು ಲೂಟಿ...

ಕೇದಾರನಾಥ ದೇಗುಲದಿಂದ 228 ಕೆಜಿ ಚಿನ್ನ ನಾಪತ್ತೆ: ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

"ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆಯಾಗಿದೆ, 228 ಕೆಜಿ ಚಿನ್ನದ ಹಗರಣ ನಡೆದಿದೆ. ಆದರೆ...