ಮಧ್ಯಪ್ರದೇಶ | ಸತತ ಏಳು ಬಾರಿ ಒಂದೇ ಕ್ಷೇತ್ರದಲ್ಲಿ ಗೆದ್ದಿದ್ದ ವಿಪಕ್ಷ ನಾಯಕನಿಗೆ ಹಿನ್ನಡೆ!

Date:

ಮಧ್ಯಪ್ರದೇಶ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಜಿತು ಪಟ್ಟಾರಿ ಅವರು ರೌ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಮಧು ವರ್ಮಾ ಅವರು ಜಿತು ಪಟ್ಟಾರಿ ಅವರನ್ನು ಹಿಂದಿಕ್ಕಿ, ಮುನ್ನಡೆ ಸಾಧಿಸಿದ್ದಾರೆ.

- Advertisement -

ಪಟ್ವಾರಿ ಅವರು ಈ ಹಿಂದೆ ಕಮಲ್ ನಾಥ್ ಸರ್ಕಾರದಲ್ಲಿ ಉನ್ನತ ಶಿಕ್ಷಣ, ಯುವಜನ ಮತ್ತು ಕ್ರೀಡಾ ವ್ಯವಹಾರಗಳ ಸಚಿವರೂ ಆಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇನ್ನು, ವಿರೋಧ ಪಕ್ಷದ ನಾಯಕರಾಗಿದ್ದ ಕಾಂಗ್ರೆಸ್‌ ನಾಯಕ ಡಾ. ಗೋವಿಂದ್‌ ಸಿಂಗ್‌ ಕೂಡ ಲಾಹಾರ್ ಕ್ಷೇತ್ರದಲ್ಲಿ ಹಿನ್ನಡೆಯಲ್ಲಿದ್ದಾರೆ. ಅಲ್ಲಿ, ಬಿಜೆಪಿಯ ಅಂಬ್ರಿಶ್ ಶರ್ಮಾ ಅವರು ಮುನ್ನಡೆ ಸಾಧಿಸಿದ್ದಾರೆ.

ಸಿಂಗ್ ಅವರು ಲಹಾರ್ ಕ್ಷೇತ್ರದಿಂದ ಹಾಲಿ ಶಾಸಕರಾಗಿದ್ದಾರೆ. ಅವರು 1990ರಿಂದ ಇಲ್ಲಿಯವರೆಗೆ ಸತತ ಏಳು ಬಾರಿ ಗೆಲುವು ಸಾಧಿಸಿದ್ದಾರೆ. ಆದರೆ, ಈಗ ಹಿನ್ನೆಡೆ ಅನುಭವಿಸಿದ್ದಾರೆ.

ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಪ್ರಹ್ಲಾದ್ ಪಟೇಲ್ ಮತ್ತು ನರೇಂದ್ರ ಸಿಂಗ್ ತೋಮರ್ ಕ್ರಮವಾಗಿ ಬುಧ್ನಿ, ನರಸಿಂಗ್‌ಪುರ ಮತ್ತು ದಿಮಾನಿ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಬಿಜೆಪಿ 149 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಮತ್ತೊಂದೆಡೆ ಕಾಂಗ್ರೆಸ್ ಕೇವಲ 62 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಚಿಂದ್ವಾರಾ ಕ್ಷೇತ್ರದಲ್ಲಿ ಕಮಲನಾಥ್ ಮುನ್ನಡೆ ಸಾಧಿಸಿದ್ದಾರೆ.

“ಡಬಲ್ ಇಂಜಿನ್ ಸರ್ಕಾರವು ಕೇಂದ್ರ ಸರ್ಕಾರದ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸಿದೆ. ಜೊತೆಗೆ, ರಾಜ್ಯ ಸರ್ಕಾರದ ಯೋಜನೆಗಳು ಜನರನ್ನು ತಲುಪಿವೆ. ಎಲ್ಲ ಕಡೆಯೂ ನಮ್ಮ ಮೇಲಿನ ಜನರ ಪ್ರೀತಿ ಕಾಣುತ್ತಿದೆ. ಬಿಜೆಪಿಗೆ ಆರಾಮವಾಗಿ ಬಹುಮತ ಪಡೆಯುತ್ತದೆ: ಎಂದು ಚೌಹಾಣ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...