ಮಹಾ ಡಿಸಿಎಂ ಅಜಿತ್ ಪವಾರ್‌ಗೆ ಲಾಟರಿ; ತೆರಿಗೆ ಇಲಾಖೆ ಜಪ್ತಿ ಮಾಡಿದ್ದ 1,000 ಕೋಟಿ ರೂ. ಆಸ್ತಿ ವಾಪಸ್!

Date:

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ‘ಬಂಪರ್ ಲಾಟರಿ’ ಸಿಕ್ಕಿದೆ. 2021ರಲ್ಲಿ ಬೇನಾಮಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಅಜಿತ್ ಪವಾರ್ ಕುಟುಂಬದಿಂದ ವಶಪಡಿಸಿಕೊಂಡಿದ್ದ 1,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ತೆರಿಗೆ ಇಲಾಖೆ ವಾಪಸ್‌ ಕೊಟ್ಟಿದೆ.

- Advertisement -

‘ಬೇನಾಮಿ ಆಸ್ತಿ ತಡೆ ಮೇಲ್ಮನವಿ ನ್ಯಾಯಮಂಡಳಿ’ಯು ಅಜಿತ್ ಪವಾರ್ ಮತ್ತು ಅವರ ಕುಟುಂಬದ ವಿರುದ್ಧ ದಾಖಲಾಗಿದ್ದ ಬೇನಾಮಿ ಆಸ್ತಿ ಮಾಲೀಕತ್ವ ಪ್ರಕರಣವನ್ನು ವಜಾಗೊಳಿಸಿದೆ. ಅಜಿತ್ ಕುಟುಂಬವನ್ನು ಆರೋಪ ಮುಕ್ತಗೊಳಿಸಿದೆ. ಈ ಬಳಿಕ, ಅವರಿಂದ ವಶಪಡಿಸಿಕೊಳ್ಳಲಾಗಿದ್ದ ಆಸ್ತಿಯನ್ನು ತೆರಿಗೆ ಇಲಾಖೆ ವಾಪಸ್‌ ಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗಮನಾರ್ಹ ವಿಚಾರವೆಂದರೆ, ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಹಾಗೂ ಶಿವಸೇನೆಯ ಏಕನಾಥ್ ಶಿಂದೆ ಮತ್ತು ಎನ್‌ಸಿಪಿಯ ಅಜಿತ್‌ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ಬಳಿಕ ಈ ತೀರ್ಪು ಬಂದಿದೆ.

2021ರಲ್ಲಿ ಅಜಿತ್ ಪವಾರ್ ಅವರು ಕಾಂಗ್ರೆಸ್‌ ನೇತೃತ್ವದ ಮಹಾ ವಿಕಾಸ್‌ ಅಘಾಡಿ (ಎಂವಿಎ) ಸರ್ಕಾರದಲ್ಲಿ ಸಚಿವರಾಗಿದ್ದರು. ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರ ಎನ್‌ಸಿಪಿಯಲ್ಲಿ ಇದ್ದರು. ಆ ವೇಳೆ, ಅಜಿತ್ ಪವಾರ್ ಮತ್ತು ಅವರ ಪತ್ನಿ ಸುನೇತ್ರಾ ಪವಾರ್, ಮಗ ಪಾರ್ಥ ಪವಾರ್ ಅವರು ಬೇನಾಪಿ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಮೇಲೆ 2021ರ ಅಕ್ಟೋಬರ್ 7ರಂದು ಅಜಿತ್ ಅವರಿಗೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಸತಾರಾದಲ್ಲಿನ ಸಕ್ಕರೆ ಕಾರ್ಖಾನೆ, ದೆಹಲಿಯ ಫ್ಲಾಟ್, ಗೋವಾದ ರೆಸಾರ್ಟ್ ಸೇರಿದಂತೆ ಹಲವು ಆಸ್ತಿಗಳನ್ನು ಜಪ್ತಿ ಮಾಡಿತ್ತು.

ಆ ನಂತರ, 2022ರಲ್ಲಿ ಅಜಿತ್ ಪವಾರ್ ಅವರು ಶರದ್ ಪವಾರ್ ವಿರುದ್ಧವೇ ಬಂಡಾಯ ಎದ್ದು, ಎನ್‌ಸಿಪಿಯನ್ನು ವಿಭಜಿಸಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡರು. ಬಿಜೆಪಿ ಮತ್ತು ಶಿವಸೇನೆ (ಶಿಂದೆ ಬಣ)ದ ಜೊತೆ ಸೇರಿ ಮಹಾಯುತಿ ಸರ್ಕಾರ ರಚಿಸಿದರು. ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯೂ ಆದರು. ಆ ಬಳಿಕ, ಅಜಿತ್ ವಿರುದ್ದದ ಎಲ್ಲ ಪ್ರಕರಣಗಳಿಗೆ ತಡೆ ನೀಡಲಾಗಿತ್ತು. ಇದೀಗ, ಎರಡನೇ ಬಾರಿಗೆ ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾರೆ.

ಇದೆಲ್ಲದರ ನಡುವೆ, ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ನ್ಯಾಯಪೀಠವು ಅಜಿತ್ ಪವಾರ್ ಮತ್ತು ಅವರ ಕುಟುಂಬದ ವಿರುದ್ದದ ಆರೋಪಗಳನ್ನು ವಜಾಗೊಳಿಸಿದೆ. “ಅಜಿತ್ ಪವಾರ್ ಅಥವಾ ಅವರ ಕುಟುಂಬವು ಬೇನಾಮಿ ಆಸ್ತಿಗಳನ್ನು ಪಡೆಯಲು ಹಣವನ್ನು ವರ್ಗಾಯಿಸಿದೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ” ಎಂದು ನ್ಯಾಯಪೀಠ ಹೇಳಿದೆ.

“ಅಜಿತ್ ಪವಾರ್ ವಿರುದ್ಧದ ಆರೋಪಗಳಿಗೆ ಯಾವುದೇ ಕಾನೂನು ಮಾನ್ಯತೆ ಇಲ್ಲ. ಅವರ ಕುಟುಂಬವು ಯಾವುದೇ ತಪ್ಪು ಮಾಡಿಲ್ಲ. ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳುವ ವ್ಯವಹಾರಗಳನ್ನು ಬ್ಯಾಂಕಿಂಗ್ ವ್ಯವಸ್ಥೆ ಸೇರಿದಂತೆ ಕಾನೂನುಬದ್ಧ ಮಾರ್ಗಗಳ ಮೂಲಕ ಮಾಡಲಾಗಿದೆ” ಎಂದು ಅಜಿತ್ ಅವರ ವಕೀಲ ವಕೀಲ ಪ್ರಶಾಂತ್ ಪಾಟೀಲ್ ಹೇಳಿದ್ದಾರೆ.

ಅಂದರೆ, ನೀವು ದೇಶವನ್ನು ಲೂಟಿ ಹೊಡೆದರೂ, ಸಾರ್ವಜನಿಕವಾಗಿ ಲೂಟಿಕೋರರು ಎಂದು ಕುಖ್ಯಾತಿ ಗಳಿಸಿದರೂ, ಬಿಜೆಪಿ ಮತ್ತು ಮೋದಿ ಬೆಂಬಲಿಸಿದರೆ, ನೀವು ಸತ್ಯಸಂಧರಾಗಬಹುದು. ಬಿಜೆಪಿಯ ವಾಷಿಂಗ್ ಮಷೀನ್‌ನಲ್ಲಿ ನಿಮ್ಮೆಲ್ಲ ಕೊಳಕನ್ನು ತೊಳೆದುಕೊಳ್ಳಬಹುದು ಎಂಬುದಕ್ಕೆ ಮತ್ತೊಂದು ಹೊಸ ಉದಾಹರಣೆ- ಅಜಿತ್ ಪವಾರ್ ಪ್ರಕರಣ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...