ಮಹಾ ಪರಿನಿಬ್ಬಾಣ ದಿನ | ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಅಂಬೇಡ್ಕರ್: ಸಿಎಂ ಸಿದ್ದರಾಮಯ್ಯ

Date:

Advertisements

ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಡಿ.6)ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಸಂವಿಧಾನಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ 68ನೇ ಮಹಾ ಪರಿನಿಬ್ಬಾಣ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗ ಮುಂದೆ ಇರುವ ಭಾರತ ರತ್ನ ಬಾಬಾ ಸಾಹೇಬ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಪುಷ್ಪಾರ್ಚನೆ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಆ ದಿನವನ್ನೇ ಪರಿನಿರ್ವಾಣ ದಿನಾಚರಣೆ” ಎಂದು ಆಚರಿಸಲಾಗುತ್ತದೆ ಎಂದರು.

Advertisements

ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ

“ಅಂಬೇಡ್ಕರ್ ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ . ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಈ ದೇಶದ ಜನರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಬೀದಿ ಬಡಿದಾಟದ ಬಗ್ಗೆ ಆರ್‌ಎಸ್‌ಎಸ್‌ ಏಕೆ ಮಾತನಾಡುತ್ತಿಲ್ಲ?

ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು

“ಕೇವಲ ದಲಿತರಿಗೆ ಎಲ್ಲರಿಗೂ ಸಾಮಾಜಿಕ ಅವಕಾಶಗಳನ್ನು ದೊರಕಿಸಲು ಅವರು ಶ್ರಮಿಸಿದರು.ಅವಕಾಶ ವಂಚಿತರು, ಶೋಷಣೆ, ಅನ್ಯಾಯಕ್ಕೆ, ಅವಮಾನಕ್ಕೆ, ದೌರ್ಜನ್ಯಕ್ಕೆ ಒಳಪಟ್ಟ ಎಲ್ಲಾ ಜನರ ಪರವಾಗಿ ಕೆಲಸ ಅವರು ಮಾಡಿದ್ದರು. ಸಮಾಜದಲ್ಲಿ ಸಮಾನತೆ ಬಯಸಿ ಅದನ್ನೇ ನಿರ್ಮಿಸಲು ಬಹಳ ಸ್ಪಷ್ಟವಾಗಿ ಹೇಳಿದ್ದರು. ಸಂವಿಧಾನದ ಧ್ಯೇಯೋದ್ದೇಶಗಳೂ ಅದನ್ನೇ ಹೇಳುತ್ತದೆ. ಸಂವಿಧಾನದಿಂದ ಅನುಕೂಲ ಪಡೆದವರು ಅವರ ಸೋದರ ಜನಾಂಗಗಳಿಗೆ ಸಹಾಯ ಮಾಡಬೇಕು. ಎಲ್ಲರೂ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕೆಂದು ಬಯಸಿದ್ದರು” ಎಂದರು.

ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು

“ಬಹಳ ಜನ ಸಂವಿಧಾನವನ್ನು ವಿರೋಧಿಸುತ್ತಾರೆ.ಭಾರತ ಬಹುಸಂಸ್ಕೃತಿಯ, ಬಹುತ್ವದ ದೇಶ. ಅನೇಕ ಜಾತಿ, ಧರ್ಮಗಳಿವೆ. ಅನೇಕ ಭಾಷೆಗಳೂ ಇವೆ. ಇದಕ್ಕೆ ಯೋಗ್ಯವಾದ ಸಂವಿಧಾನವನ್ನು ಕೊಟ್ಟವರು ಅಂಬೇಡ್ಕರ್. ಎಲ್ಲಾ ಧರ್ಮಗಳೂ, ಜಾರಿಗಳೂ ಸಮಾನವಾದುದು. ಮಾನವ ಧರ್ಮಕ್ಕೆ ಒತ್ತು ನೀಡಿದ್ದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು. ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು. ಇದನ್ನು ಅಂಬೇಡ್ಕರ್ ಅವರು ತಮ್ಮ ಬದುಕಿನಲ್ಲಿ ಸಾರಿದ್ದರು.
ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ ಸಾಯುವುದಿಲ್ಲ ಎಂದು ತಮ್ಮ ಕಡೇ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಸ್ವೀಕಾರ ಮಾಡಿದ ನಂತರ ಬಹಳ ದಿನಗಳ ಕಾಲ ಉಳಿಯಲಿಲ್ಲ . ಅವರು ಕೊಟ್ಟ ಸಂವಿಧಾನದ ಪ್ರಕಾರ ಮತ್ತು ಅವರ ಹೋರಾಟದ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವುದೇ ಅವರಿಗೆ ನಾವು ಸಲ್ಲಿಸುವ ಗೌರವ ಎಂದರು. ಅದೇ ರೀತಿಯಲ್ಲಿ ಸಂವಿಧಾನ , ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ” ಎಂದು ತಿಳಿಸಿದರು.

ಬಳ್ಳಾರಿಯಲ್ಲಿ ಬಾಣಂತಿ ಸಾವು: ಪರಿಶೀಲನೆ

ಬಳ್ಳಾರಿಯಲ್ಲಿ ಮತ್ತೊಂದು ಬಾಣಂತಿಯ ಸಾವಿಗಿರುವ ಬಗ್ಗೆ ಮಾತನಾಡಿ, “ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಡ್ರಗ್ಸ್ ಕಂಟ್ರೋಲರ್ ಅವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಸಾವು ಏಕೆ ಸಂಭವಿಸಿದೆ ಎಂದು ಪರಿಶೀಲಿಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X