ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಎಚ್​ ಡಿ ಕುಮಾರಸ್ವಾಮಿ

Date:

ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ, ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಅವರು, “ಆಹ್ವಾನ ಕೊಟ್ಟರೋ, ಇಲ್ಲವೋ ಅನ್ನುವುದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಎನ್​ಡಿಎ ಸಭೆಯಲ್ಲಿ ಭಾಗಿ ವಿಚಾರವಾಗಿ ಮಾತನಾಡಿದ ಅವರು, “ಇನ್ನೂ ದಿನಗಳಿವೆ ನೋಡೋಣ. ನಮಗೆ ಎಲ್ಲೂ ಆಹ್ವಾನ ಇಲ್ಲ. ನಾನು ಪಕ್ಷ ಸಂಘಟನೆ ಮಾಡಬೇಕು ಮಾಡುತ್ತೇನೆ. 42 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಇವರಿಗೆ ಚಿಂತೆ ಇಲ್ಲ, ಮಹಾಘಟಬಂಧನ್‌ ಮಾಡುತ್ತಿದ್ದಾರೆ. ಯಾರು ಮಾಡದೇ ಇರುವ ಸಾಧನೆ ಮಾಡಿದ್ದೇವೆ ಎಂದು ಬ್ಯಾನರ್‌ಗಳನ್ನು ಕಟ್ಟಿಕೊಂಡಿದ್ದಾರೆ. ಈ ಸಭೆಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ. ರೈತರು ಸಾಯುತ್ತಿರುವುದು ಇವರಿಗೆ ಲೆಕ್ಕ ಇಲ್ಲ” ಎಂದು ಕಿಡಿಕಾರಿದರು.

ಎರಡೂ ಬಣಗಳಿಗೆ ಪ್ರಾದೇಶಿಕ ಪಕ್ಷ ಅನಿವಾರ್ಯತೆ ಇದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನಾಡಿನ ಜನತೆ ತೀರ್ಮಾನ ತೆಗೆದುಕೊಂಡಿದ್ದಾರೆ. ಪ್ರತಿ ಚುನಾವಣೆಯಲ್ಲಿ ಒಂದೊಂದು ರೀತಿಯ ಬದಲಾವಣೆ ಆಗುತ್ತಿರುತ್ತದೆ. ನಮ್ಮ ಪಕ್ಷ ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬಂದಿರುವ ಪಕ್ಷ. ಈಗಲೇ ಚರ್ಚೆ ಮಾಡುವುದು ಪ್ರೀ ಮೆಚುರ್ಡು, ಇನ್ನು ಚುನಾವಣೆ ಎಂಟೋ ಒಂಬತ್ತೋ ತಿಂಗಳು ಇದೆ. ನೋಡೋಣ ಏನೇನಾಗುತ್ತೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಮುಂದಾದ ವಿಪಕ್ಷಗಳು; ಇಂದಿನಿಂದ ಎರಡು ದಿನ ಸಭೆ

ಜೆಡಿಎಸ್‌ಗೆ ಆಹ್ವಾನವಿಲ್ಲ

ಬೆಂಗಳೂರಿನ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಎರಡು ದಿನ ನಡೆಯುವ ದೇಶದ ಪ್ರತಿಪಕ್ಷಗಳ ನಾಯಕರ ಸಭೆಗೆ ಜೆಡಿಎಸ್‌ಗೆ ಅಧಿಕೃತ ಆಹ್ವಾನ ನೀಡಿರಲಿಲ್ಲ. ಮತ್ತೊಂದೆಡೆ ಎನ್​​ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಸೋಮವಾರ ಸಂಜೆ ಅಥವಾ ಮಂಗಳವಾರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಜುಲೈ 18 ರಂದು ದೆಹಲಿಯಲ್ಲಿ ಎನ್​ಡಿಎ ಸಭೆ ನಡೆಯಲಿದೆ. ಸಭೆಗೂ ಮುನ್ನ ಬಿಜೆಪಿ ಜೊತೆ ಎಚ್​ ಡಿ ಕುಮಾರಸ್ವಾಮಿ ಮಾತುಕತೆ ನಡೆಸಬಹುದು ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...