ಮಹಾರಾಷ್ಟ್ರ | ಎನ್‌ಸಿಪಿ, ಶಿವಸೇನೆ ಒಡಕಿನ ಬೆನ್ನಲ್ಲೇ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ

Date:

ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳು ಹಾಗೂ ಶಿವಸೇನೆ, ಎನ್‌ಸಿಪಿ ಒಡಕಿನ ಬೆನ್ನಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ಜುಲೈ 11) ರಾಜ್ಯ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಡೆಸುತ್ತಿರುವ ಮಹಾರಾಷ್ಟ್ರ ಪ್ರಮುಖ ನಾಯಕರ ಸಭೆಯಲ್ಲಿ ರಾಹುಲ್ ಗಾಂಧಿ ಕೂಡ ಭಾಗವಹಿಸಿದ್ದಾರೆ.

ತಮ್ಮ ಶಾಸಕರನ್ನು ಉಳಿಸಿಕೊಳ್ಳಲು ಮಹತ್ವದ ಸಭೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಆದರೆ ಸಭೆಯಲ್ಲಿ ರಾಜ್ಯದ ರಾಜಕೀಯ ಪರಿಸ್ಥಿತಿ, ಮುಂಬರುವ ಲೋಕಸಭೆ ಚುನಾವಣೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆಗಳ ಸಿದ್ಧತೆಗಳ ಕುರಿತು ಚರ್ಚಿಸಲಾಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಎಚ್ ಕೆ ಪಾಟೀಲ್, ಆಶಿಶ್ ದುವಾ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ, ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವ್ಹಾಣ್, ಪೃಥ್ವಿರಾಜ್ ಚವ್ಹಾಣ್, ಸುಶೀಲ್ ಕುಮಾರ್ ಶಿಂಧೆ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದಾರೆ.

ಶಿವಸೇನೆ, ಎನ್‌ಸಿಪಿಯಲ್ಲಿ ಭಿನ್ನಾಭಿಪ್ರಾಯ ಉಂಟಾದ ಬಳಿಕ ಇದೀಗ ಕಾಂಗ್ರೆಸಿನಲ್ಲೂ ಬಂಡಾಯ ಶುರುವಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಅದಲ್ಲದೆ ಹಲವು ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ.

ಸದ್ಯ ಮಹಾರಾಷ್ಟ್ರ ವಿಧಾನಸಭೆಯಲ್ಲಿ 45 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಅತಿ ದೊಡ್ಡ ವಿರೋಧ ಪಕ್ಷವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಆದೇಶಕ್ಕೆ ಮಣಿದು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌...

ಜೈಲಿನಲ್ಲಿ ದೆಹಲಿ ಸಿಎಂ; ಎಎಪಿ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಪತ್ನಿಗೆ ಪ್ರಮುಖ ಪಾತ್ರ

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದು ಈಗ...