ಮಹಾರಾಷ್ಟ್ರ | ಸಂಪುಟ ಪುನಾರಚನೆ: ಅಜಿತ್‌ ಪವಾರ್‌ ಬಣಕ್ಕೆ ಹಣಕಾಸು ಸೇರಿ ಪ್ರಮುಖ ಖಾತೆ

Date:

ಎನ್‌ಸಿಪಿ ಬಂಡಾಯ ಶಾಸಕರು ಮಹಾರಾಷ್ಟ್ರ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ ನಂತರ ಸಂಪುಟ ಪುನಾರಚನೆ ಮಾಡಲಾಗಿದೆ. ಡಿಸಿಎಂ ಅಜಿತ್‌ ಪವಾರ್‌ ಅವರಿಗೆ ಹಣಕಾಸು ಮತ್ತು ಯೋಜನೆ ಹಾಗೂ ಛಗನ್‌ ಭುಜಬುಲ್‌ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ನೀಡಲಾಗಿದೆ.

- Advertisement -

ಮಹಾರಾಷ್ಟ್ರ ಸಿಎಂ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಬಣದ ಶಾಸಕ ಭರತ್ ಗೊಗವಾಲೆ ಹಾಗೂ ಪ್ರಹಾರ್‌ ಪಕ್ಷದ ಶಾಸಕ ಬಚ್ಚು ಕಡು ಅವರ ತೀವ್ರ ವಿರೋಧದ ನಡುವೆಯೂ ಅಜಿತ್‌ ಅವರಿಗೆ ಹಣಕಾಸು ಖಾತೆ ನೀಡಲಾಗಿದೆ. ಹಿಂದಿನ ಮಹಾ ಅಘಾಡಿ ಸರ್ಕಾರದಲ್ಲಿ ಅಜಿತ್‌ ಹಣಕಾಸು ಸಚಿವರಾಗಿದ್ದಾಗ ಶಿವಸೇನೆ ಶಾಸಕರ ಕ್ಷೇತ್ರಗಳಿಗೆ ಹಣ ಬಿಡುಗಡೆಗೆ ನಿರ್ಬಂಧ ವಿಧಿಸಿದ್ದರು ಎಂದು ಆರೋಪಿಸಿ ಈ ಶಾಸಕರು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇಂದಿನ ಸಂಪುಟ ಪುನಾರಚನೆಯಲ್ಲಿ ಎನ್‌ಸಿಪಿಯ ಅಜಿತ್ ಪವಾರ್ ಬಣಕ್ಕೆ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ ಸಹಕಾರ ಸಚಿವಾಲಯ, ಧನಂಜಯ್ ಮುಂಡೆಗೆ ಕೃಷಿ, ಅದಿತಿ ತತ್ಕರೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅನಿಲ್ ಪಾಟೀಲ್ ಅವರಿಗೆ ಪರಿಹಾರ ಮತ್ತು ಪುನರ್ವಸತಿ, ವಿಪತ್ತು ನಿರ್ವಹಣೆ ಖಾತೆ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಭಾರತದ ಐತಿಹಾಸಿಕ ‘ಚಂದ್ರಯಾನ 3’ ಯಶಸ್ವಿ ಉಡಾವಣೆ; 20 ವರ್ಷದ ಹಿಂದೆ ಆರಂಭವಾದ ಯೋಜನೆ ಸಾಗಿದ್ದು ಹೇಗೆ?

ಈ ಮೊದಲು ಸಹಕಾರ ಇಲಾಖೆ ಬಿಜೆಪಿಯ ಅತುಲ್ ಸೇವ್ ಹಾಗೂ ಕೃಷಿ ಖಾತೆ ಶಿವಸೇನೆಯ ಅಬ್ದುಲ್ ಸತ್ತಾರ್ ಅವರ ಬಳಿ ಇತ್ತು.

ಸಂಪುಟ ಪುನಾರಚನೆಯ ನಂತರವೂ ಸರ್ಕಾರದಲ್ಲಿ ಅಸಮಾಧಾನ ಇನ್ನೂ ಮುಂದುವರಿದಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಕ್ಷಣದ ವಿಸ್ತರಣೆ ಮಾಡಿದ್ದರೂ ಅಧಿಕಾರ ಹಂಚಿಕೆ ಮಾತ್ರ ಜುಲೈ 17 ರಂದು ಪ್ರಾರಂಭವಾಗುವ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ನಂತರ ನಡೆಯಬೇಕು ಎಂಬ ಅಭಿಪ್ರಾಯವನ್ನು ಬಿಜೆಪಿ ತೆಗೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...