ಮಹಾರಾಷ್ಟ್ರ ಚುನಾವಣೆ | ಆರ್‌ಎಸ್‌ಎಸ್‌ ವಿರೋಧ ಇದ್ದರೂ ಅಜಿತ್ ಜೊತೆ ಬಿಜೆಪಿ ಮೈತ್ರಿ

Date:

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದಕ್ಕೆ ಆರ್‌ಎಸ್‌ಎಸ್‌ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ತಿಳಿದುಬಂದಿದೆ. ಆದರೂ, ಅಜಿತ್ ಅವರ ಎನ್‌ಸಿಪಿ ಜೊತೆ ಮೈತ್ರಿಗೆ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.

- Advertisement -

ಮಹಾರಾಷ್ಟ್ರದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಎನ್‌ಸಿಪಿ (ಅಜಿತ್ ಬಣ)-ಶಿವಸೇನಾ (ಸಿಂಧೆ ಬಣ)ದ ಮಹಾಯುತಿ ಕಳಪೆ ಪ್ರದರ್ಶನ ನೀಡಿ, ಹೀನಾಯವಾಗಿ ಸೋಲುಂಡಿದೆ. ಮಹಾರಾಷ್ಟ್ರದ 48 ಸ್ಥಾನಗಳ ಪೈಕಿ ಕೇವಲ 17 ಸ್ಥಾನಗಳನ್ನು ಮಾತ್ರವೇ ಮಹಾಯುತಿ ಗೆದ್ದುಕೊಂಡಿದೆ. ಅದರಲ್ಲೂ, ಅಜಿತ್ ಅವರ ಎನ್‌ಸಿಪಿ ಕೊಡುಗೆ ಕೇವಲ ಒಂದು ಸ್ಥಾನ ಮಾತ್ರ. ಹೀಗಾಗಿ, ಅಜಿತ್ ಅವರೊಂದಿಗಿನ ಮೈತ್ರಿಯನ್ನು ಕಡಿತಗೊಳಿಸಲು ಆರ್‌ಎಸ್‌ಎಸ್‌ ಬಯಸಿದೆ. ಆದರೂ, ಬಿಜೆಪಿಗರು ಅಜಿತ್ ಜೊತೆ ಮುಂದುವರೆಯಲು ನಿರ್ಧರಿಸಿದ್ದಾರೆ. ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಗಮನಾರ್ಹವಾಗಿ ‘ಇಂಡಿಯಾ’ ಮೈತ್ರಿಕೂಟವು ಮಹಾರಾಷ್ಟ್ರದಲ್ಲಿ 31 ಸ್ಥಾನಗಳನ್ನು ಗೆದ್ದು, ಪ್ರಾಬಲ್ಯತೆಯನ್ನು ಹೆಚ್ಚಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಕಾರಣಕ್ಕೆ ಅಜಿತ್ ಅವರ ಎನ್‌ಸಿಪಿಯನ್ನು ದೂಷಿಸಿರುವ ಆರ್‌ಎಸ್‌ಎಸ್‌ ಮುಖವಾಣಿ ‘ಆರ್ಗನೈಸರ್’, “ವಿಭಿನ್ನ ಸಿದ್ಧಾಂತ ಮತ್ತು ಅಜಿತ್ ಅವರು ತಮ್ಮ ಇಮೇಜ್ ಕಳೆದುಕೊಂಡಿರುವ ಕಾರಣದಿಂದಾಗಿ ಬಿಜೆಪಿ ನೇತೃತ್ವದ ಮಹಾಯುತಿಯು ಕಳಪೆ ಪ್ರದರ್ಶನ ನೀಡಬೇಕಾಯಿತು” ಎಂದು ಹೇಳಿಕೊಂಡಿದೆ. ಅಲ್ಲದೆ, ಆರ್‌ಎಸ್‌ಎಸ್‌ನ ಮತ್ತೊಂದು ಮುಖವಾಣಿ, ಮರಾಠಿ ವಾರಪತ್ರಿಕೆ ‘ವಿವೇಕ್’ ಕೂಡ ಅದೇ ಅಭಿಪ್ರಾಯಗಳನ್ನು ಪ್ರತಿಧ್ವನಿಸಿದೆ. ಅಜಿತ್ ಜೊತೆಗಿನ ಮೈತ್ರಿಯನ್ನು ಮುರಿಯುವಂತೆ ಪರೋಕ್ಷವಾಗಿ ಬಿಜೆಪಿಗೆ ಸೂಚನೆ ನೀಡಿದೆ.

ಆದಾಗ್ಯೂ, ಅಜಿತ್ ಮತ್ತು ಅವರ ಸಂಗಡಿಗರು ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್‌ ಜೊತೆ ಗೌಪ್ಯ ಸಭೆ ನಡೆಸಿದ್ದಾರೆ. ಬಳಿಕ, ಬಿಜೆಪಿ ತಮ್ಮೊಂದಿಗಿನ ಮೈತ್ರಿಯನ್ನು ಕಡಿತಗೊಳಿಸುವುದಿಲ್ಲ. ಮುಂಬರು ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ (ಶಿಂಧೆ) ಮತ್ತು ಎನ್‌ಸಿಪಿ (ಅಜಿತ್) ಒಟ್ಟಾಗಿ ಮುನ್ನಡೆಯುತ್ತದೆ ಎಂದು ಬಿಜೆಪಿ ನಾಯಕರು ಭರವಸೆ ನೀಡಿರುವುದಾಗಿ ಅಜಿತ್ ಬಣ ಹೇಳಿಕೊಂಡಿದೆ.

ಮೂಲಗಳ ಪ್ರಕಾರ, ಅಜಿತ್ ಜೊತೆಗಿನ ಮೈತ್ರಿ ಪ್ರಸ್ತುತ ಅಗತ್ಯವಾಗಿದೆ ಎಂದು ಬಿಜೆಪಿ ನಾಯಕತ್ವವು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಮೂಲಕ ಆರ್‌ಎಸ್‌ಎಸ್‌ಗೆ ಸಂದೇಶ ರವಾನಿಸಿದೆ.

“ಮಹಾರಾಷ್ಟ್ರದಲ್ಲಿ ಬಿಜೆಪಿ ಸ್ವಂತ ಬಲದಿಂದ ಚುನಾವಣೆ ಎದುರಿಸುವ ಸ್ಥಿತಿಯಲ್ಲಿಲ್ಲ. ಎಂವಿಎಯನ್ನು (ಇಂಡಿಯಾ ಒಕ್ಕೂಟ) ಎದುರಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯೊಂದಿಗೆ ಮೈತ್ರಿ ಅಗತ್ಯ” ಎಂದು ಅಜಿತ್ ಅವರ ಎನ್‌ಸಿಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...