ಮಹಾರಾಷ್ಟ್ರ ಚುನಾವಣೆ | ಮುಂಬೈನಲ್ಲಿ ‘ಶಾಯಿ’ ತಿರುಚಿದ, ನಕಲಿ ಮತದಾನದ ಗಂಭೀರ ಆರೋಪ

Date:

ಗುರುವಾರ (ಜ.15), ಮಹಾರಾಷ್ಟ್ರದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದೆ. ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಮತದಾನದ ವೇಳೆ ಬೆರಳಿಗೆ ಹಾಕಲಾಗುವ ಶಾಯಿ ಕುರಿತು ಭಾರೀ ಗದ್ದಲ, ವಿವಾದಗಳು ಭುಗಿಲೆದ್ದಿವೆ. ಶೀಘ್ರವೇ ಅಳಿಸಬಹುದಾದ ಶಾಯಿಯನ್ನು ಹಾಕುವ ಮೂಲಕ ಪುನರಾವರ್ತಿತ ಮತದಾನಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಆದರೆ, ಈ ಆರೋಪವನ್ನು ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರ ನಿರಾಕರಿಸಿವೆ.

- Advertisement -

ಬಿಎಂಸಿ ವ್ಯಾಪ್ತಿಯಲ್ಲಿ ಮತದಾನದ ವೇಳೆ ಮತದಾರರಿಗೆ ಹಾಕಲಾಗುವ ಶಾಯಿಯ ಗುರುತುಗಳನ್ನು ಕೆಲವೇ ನಿಮಿಷಗಳಲ್ಲಿ ಅಳಿಸಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆ ವರದಿಯನ್ನು ಬಿಎಂಸಿ ತಳ್ಳಿಹಾಕಿದೆ. ಅಂತಹ ಯಾವುದೇ ಘಟನೆಗಳು ನಡೆದಿಲ್ಲ. ಮತದಾರರ ಎಡಗೈ ಬೆರಳಿಗೆ ಪ್ರಮಾಣಿತ ಶಾಯಿಯನ್ನು ಹಾಕಲಾಗುತ್ತಿದೆ” ಬಿಎಂಸಿ ಆಯುಕ್ತ ಭೂಷಣ್ ಗಗ್ರಾಣಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಎಂಎನ್‌ಎಸ್‌ ಮುಖ್ಯಸ್ಥ ರಾಜ್‌ ಠಾಕ್ರೆ ಅವರು, “ಚುನಾವಣೆಗಳಲ್ಲಿ ಬಳಸಲಾಗುವ ಸಾಂಪ್ರದಾಯಿಕ ಶಾಯಿಯ ಬದಲಿಗೆ ‘ಹೊಸ ಪೆನ್ನು’ಅನ್ನು ಬಳಸಲಾಗುತ್ತಿದೆ. ಇದರಿಂದ ಹಚ್ಚಲಾಗುವ ಶಾಯಿಯನ್ನು ಸ್ಯಾನಿಟೈಸರ್‌ನಿಂದ ಸುಲಭವಾಗಿ ತೆಗೆದುಹಾಕಲಾಗುತ್ತಿದೆ. ರಾಜ್ಯ ಮಹಾಯುತಿ ಸರ್ಕಾರವು ಅಧಿಕಾರಕ್ಕಾಗಿ ವಂಚನೆಯನ್ನು ಅವಲಂಬಿಸಿದೆ” ಎಂದು ಆರೋಪಿಸಿದ್ದಾರೆ.

“ನಕಲಿ ಮತದಾರರು ಸಿಕ್ಕಿಬಿದ್ದಿದ್ದಾರೆ. ಶಾಯಿ ಹಚ್ಚಿಸಿಕೊಂಡು ಮತದಾನ ಮಾಡಿ ಹೊರಬಂದು ಅದನ್ನು ಅಳಿಸಿಕೊಂಡು, ಮತ್ತೆ ಮರು ಮತ ಚಲಾಯಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. “ನಕಲಿ ಶಾಯಿ ಬಳಸುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗವು ಕ್ರಮ ಕೈಗೊಳ್ಳಬೇಕು” ಎಂದು ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ.

ಅವರ ಆರೋಪವನ್ನು ನಿರಾಕರಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, “ಈ ರೀತಿ ಗದ್ದಲದ ಸೃಷ್ಟಿಸುವುದು ತಪ್ಪು. ನನಗೂ ಶಾಯಿ ಹಾಕಲಾಗಿದೆ. ಅದನ್ನು ಅಳಿಸಲಾಗುತ್ತಿದೆಯೇ? ಚುನಾವಣಾ ಆಯೋಗ ತನಿಖೆ ಮಾಡಲಿ ಅಥವಾ ಎಣ್ಣೆ ಬಣ್ಣವನ್ನು ಬಳಸಲಿ; ಚುನಾವಣೆಗಳು ನಿಷ್ಪಕ್ಷಪಾತವಾಗಿರಬೇಕು” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಬಂಗಾಳ ಚುನಾವಣೆ ಮೇಲೆ ಕೋಮುವಾದದ ಕರಿನೆರಳು!

ಶಾಯಿ ತಿರುಚುವಿಕೆ ಮಾತ್ರವಲ್ಲದೆ, ಮತದಾನದ ವೇಳೆಯೇ, ವಿವಿಪ್ಯಾಟ್‌ಗಳ ಅನುಪಸ್ಥಿತಿ, ಕೊನೆ ಕ್ಷಣದಲ್ಲಿ PADU ಬಳಕೆ, ನಕಲಿ ಮತದಾರರಿಂದ ಮತ ಚಲಾವಣೆ, ವಿಭಿನ್ನ ಪಕ್ಷಗಳ ಪರವಾಗಿ ಎರಡು ಕ್ಷೇತ್ರಗಳಲ್ಲಿ ಓರ್ವ ಅಭ್ಯರ್ಥಿ ಸ್ಪರ್ಧೆ, ಮತಗಟ್ಟೆಗಳ ಸರಿಯಾದ ಮಾಹಿತಿ ಇಲ್ಲದಿರುವುದು, ಕೆಟ್ಟು ಸ್ಥಗಿತಗೊಳ್ಳುತ್ತಿರುವ ಇವಿಎಂಗಳು ಹಾಗೂ ಅನಿಯಂತ್ರಿತ ಹಣ ವಿತರಣೆಯ ಆರೋಪಗಳು ಕೇಳಿಬರುತ್ತಿವೆ. ಆದರೂ, ಚುನಾವಣಾ ಆಯೋಗವು ಗಂಭೀರವಾಗಿ ಸಮಸ್ಯೆಗಳನ್ನು ಪರಿಗಣಿಸುತ್ತಿಲ್ಲ ಮತ್ತು ಪರಿಹರಿಸುತ್ತಿಲ್ಲ ಎಂದೂ ಹೇಳಲಾಗುತ್ತಿದೆ. ಇದು, ಆಯೋಗದ ಅದಕ್ಷತೆಯತ್ತ ಬೊಟ್ಟುಮಾಡಿತೋರುತ್ತಿದೆ.

ಈಗಾಗಲೇ ಅನುಮಾನದ ಸುಳಿಯಲ್ಲಿ ಸಿಲುಕಿರುವ ಚುನಾವಣಾ ಪ್ರಕ್ರಿಯೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಚುನಾವಣಾ ಆಯೋಗವು ತನ್ನದೇ ಆದ ಸ್ವತಂತ್ರ ಅಸ್ತಿತ್ವವನ್ನು ಉಳಿಸಿಕೊಂಡಿದೆಯೇ? ಚುನಾವಣೆಗಳನ್ನು ವಿಶ್ವಾಸಾರ್ಹ, ಸುರಕ್ಷಿತ ಹಾಗೂ ದೋಷರಹಿತ ರೀತಿಯಲ್ಲಿ ನಡೆಸಲಾಗುತ್ತಿದೆಯೇ ಎಂಬ ಪ್ರಶ್ನೆಗಳು ಮುನ್ನಲೆಯಲ್ಲಿವೆ.

ಬಿಎಂಸಿ 227 ವಾರ್ಡ್‌ಗಳನ್ನು ಹೊಂದಿದ್ದು, 1,700 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 10,231 ಮತದಾನ ಕೇಂದ್ರಗಳನ್ನು ತೆಗೆಯಲಾಗಿದ್ದು, ಚುನಾವಣಾ ಕರ್ತವ್ಯಕ್ಕಾಗಿ 64,375 ಸಿಬ್ಬಂದಿಯನ್ನು ನೇಮಿಸಲಾಗಿದೆ. 3.49 ಕೋಟಿ ಮತದಾರರು ಮತದಾನ ಚಲಾಯಿಸುತ್ತಿದ್ದಾರೆ. ಬೆಳಗ್ಗೆ 11:30ರವರೆಗೆ 17.73% ಮತದಾನವಾಗಿದೆ. ಆ ನಂತರದ ಮತದಾನದ ಅಂಕಿಅಂಶವನ್ನು ಆಯೋಗ ಇನ್ನೂ ಪ್ರಕಟಿಸಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...