ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡಿದ ಮಹಾರಾಷ್ಟ್ರ ಸರ್ಕಾರ

Date:

Advertisements

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡಲಾಗುತ್ತಿದೆ ಎಂದು ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಮಳೆಗಾಳದ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಸರ್ಕಾರ ಈ ಘೋಷಣೆ ಮಾಡಿದೆ.

ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ಹೇಳಿದ್ದಾರೆ. ಇನ್ನು ರಾಜ್ಯ ಸರ್ಕಾರವು ಸಂಪುಟದ ನಿರ್ಧಾರವನ್ನು ಕೇಂದ್ರದ ಅನುಮೋದನೆಗೆ ಕಳುಹಿಸುತ್ತದೆ ಎಂದೂ ಸಚಿವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡವೇಕೆ ಮಂಗಳೂರು ಆಗಬೇಕು; ಏನಿದು ಮರುನಾಮಕರಣ ಕೂಗು?

ಹಿಂದುತ್ವ ಸಂಘಟನೆಯಾದ ಶಿವ ಪ್ರತಿಷ್ಠಾನವು ಇಸ್ಲಾಂಪುರ ಹೆಸರನ್ನು ಈಶ್ವರಪುರ ಎಂದು ಬದಲಾಯಿಸಬೇಕೆಂದು ಒತ್ತಾಯಿಸಿತ್ತು. ಸಂಭಾಜಿ ಭಿಡೆ ನೇತೃತ್ವದ ಶಿವ ಪ್ರತಿಷ್ಠಾನವು ಬೇಡಿಕೆ ಈಡೇರುವವೆಗೂ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರು. ಹಾಗೆಯೇ ಈ ಬೇಡಿಕೆ 1986ರಿಂದ ಇದೆ ಎಂದೂ ಹೇಳಲಾಗಿದೆ.

ಹಲವು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವು ಸ್ಥಳದ ಚಿರಪರಿಚಿತ ಹೆಸರನ್ನು ಬದಲಾಯಿಸುತ್ತಿದ್ದು ಇದು ಕೇಸರಿಕರಣ ಮತ್ತು ಇತಿಹಾಸವನ್ನು ತಿರುಚು ಪ್ರಯತ್ನ ಎಂದು ವಿಪಕ್ಷಗಳು ಆರೋಪಿಸಿದೆ. ಈಗಾಗಲೇ ವಿಶ್ವವಿಖ್ಯಾತ ತಾಜ್‌ಮಹಲ್ ಹೆಸರೂ ಬದಲಾಯಿಸುವ ಪ್ರಸ್ತಾಪವನ್ನು ಬಿಜೆಪಿ ಮಾಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X