ಮಹಾರಾಷ್ಟ್ರದಲ್ಲಿ ವಿಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಉದ್ಧವ್ ಹೇಳಿದ್ದೇನು?

Date:

ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಮೈತ್ರಿ ‘ಮಹಾವಿಕಾಸ್ ಅಘಾಡಿ’ (ಎಂವಿಎ) ಕೂಟದ ಮುಖ್ಯಮಂತ್ರಿ ಮುಖ, ಅಭ್ಯರ್ಥಿ ಯಾರು ಎಂಬುದನ್ನು ಸೂಕ್ತ ಸಮಯದಲ್ಲಿ ಮೈತ್ರಿಯು ಬಹಿರಂಗಪಡಿಸುತ್ತದೆ. ಆದರೆ, ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರವು ಮೊದಲು ‘ಸೋಲಿನ ಮುಖ’ ತೋರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

- Advertisement -

ಮಾಧ್ಯಮಗಳೊಂದಿಗೆ ಮಾತನಾಡಿದ ಉದ್ದವ್ ಠಾಕ್ರೆ, “ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ) ಮತ್ತು ಎನ್‌ಸಿಪಿ (ಅಜಿತ್ ಪವಾರ್) ಆಡಳಿತಾರೂಢ ಮೈತ್ರಿಕೂಟವನ್ನು ಎಂವಿಎ ಮಣಿಸಿದ್ದು, ವಿಧಾನಸಭಾ ಚುನಾವಣೆಗೆ ಪ್ರಬಲ ಸ್ಪರ್ಧೆ ಏರ್ಪಟ್ಟಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಇಂದು ಕೇಂದ್ರ ಮತ್ತು ರಾಜ್ಯದಲ್ಲಿ ಸೋರಿಕೆ ಸರ್ಕಾರಗಳಿವೆ. ವೈದ್ಯಕೀಯ ಶಿಕ್ಷಣ ಆಕಾಂಕ್ಷಿಗಳ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಅಕ್ರಮಗಳು ಬಿಜೆಪಿ ಸರ್ಕಾರಗಳ ವೈಫಲ್ಯವನ್ನು ಎತ್ತಿತೋರಿಸಿವೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಗೆ ಮಳೆನೀರು ಸೋರುತ್ತಿದೆ. ಅದರೆ, ಆ ವರದಿಗಳನ್ನು ದೇವಾಲಯ ಸಮಿತಿಯು ಕಸದ ಬುಟ್ಟಿಗೆ ಹಾಕಿದೆ” ಎಂದು ಆರೋಪಿಸಿದ್ದಾರೆ.

2022ರಲ್ಲಿ ಹಾಲಿ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಶಿವಸೇನೆಯನ್ನು ವಿಭಜಿಸಿದರೆ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಎನ್‌ಪಿಸಿಯನ್ನು ವಿಭಜಿಸಿ ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿದ್ದಾರೆ. ಮಹಾರಾಷ್ಟ್ರದ ಎರಡು ಪ್ರಮುಖ ಪಕ್ಷಗಳು ವಿಭಜನೆಯಾದ ಬಳಿಕ, ಇದೀಗ ವಿಧಾನಸಭಾ ಚುನಾವಣೆ ಎದುರಾಗುತ್ತಿದೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ (ಶಿಂಧೆ ಬಣ) ಹಾಗೂ ಎನ್‌ಸಿಪಿ (ಅಜಿತ್ ಬಣ) ಮೈತ್ರಿಯನ್ನು ಕಾಂಗ್ರೆಸ್‌ ನೇತೃತ್ವದ ಎಂವಿಎ ಮಣಿಸಿ, ಭರ್ಜರಿ ಜಯ ಗಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ನೋಯ್ಡಾ ಬಳಿ ವಿದ್ಯಾರ್ಥಿಗಳಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

​ನೋಯ್ಡಾದ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಜಿಎನ್‌ಐಓಟಿ (GNIOT) ಕಾಲೇಜಿನ ಮುಂಭಾಗದಲ್ಲಿ...

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...