ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಬಿಹಾರದಲ್ಲಿ ಅದೇ ರೀತಿ ಆಗಲು ಬಿಡಲ್ಲ: ರಾಹುಲ್ ಗಾಂಧಿ

Date:

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಬಿಹಾರದಲ್ಲಿ ಅದೇ ರೀತಿ ಆಗಲು ಬಿಡಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ(SIR) ಅನ್ನು ಕಡಿಮೆ ಅವಧಿಯಲ್ಲಿ ಜಾರಿಗೆ ತರುವ ಮತ್ತು ಮತದಾರರ ಪರಿಷ್ಕರಣಾ ಕಾರ್ಯವನ್ನು ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸುವ ಚುನಾವಣಾ ಸಮಿತಿಯ ಪ್ರಯತ್ನವನ್ನು ಪ್ರಶ್ನಿಸಿದರು.

- Advertisement -

ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧ ಪಟನಾದಲ್ಲಿ ಇಂಡಿಯಾ ಒಕ್ಕೂಟ ನಡೆಸಿದ ಮೆರವಣಿಗೆಯಲ್ಲಿ ಭಾಗಿಯಾದ ಬಳಿಕ ಮಾತನಾಡಿದ ರಾಹುಲ್ ಗಾಂಧಿ ಅವರು, “ಮಹಾರಾಷ್ಟ್ರ ಚುನಾವಣೆಯ ಸಮಯದಲ್ಲಿ ‘ಮತ ಕಳ್ಳತನ’ ನಡೆದಂತೆ, ಬಿಹಾರದಲ್ಲಿಯೂ ಇದೇ ರೀತಿಯ ಪ್ರಯತ್ನ ನಡೆಯುತ್ತಿದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಬಿಹಾರ ಹಾಸ್ಟೆಲ್‌ನಲ್ಲಿ ‘ಅನಧಿಕೃತ’ ಕಾರ್ಯಕ್ರಮ ಆರೋಪ; ರಾಹುಲ್ ಗಾಂಧಿ ವಿರುದ್ಧ 2 ಎಫ್‌ಐಆರ್‌ಗಳು

“ಮಹಾರಾಷ್ಟ್ರದಲ್ಲಿ, ನಾವು ಲೋಕಸಭಾ ಚುನಾವಣೆಯ ಸಮಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇವೆ. ಆದರೆ ಲೋಕಸಭಾ ಚುನಾವಣೆಯ ಕೆಲವೇ ತಿಂಗಳುಗಳ ನಂತರ ನಡೆದ ವಿಧಾನಸಭಾ ಚುನಾವಣೆಯಲ್ಲಿ, ನಾವು ತುಂಬಾ ಕಳಪೆ ಪ್ರದರ್ಶನ ನೀಡಿದ್ದೇವೆ. ಈ ವಿಚಾರದಲ್ಲಿ ನಾವು ಸ್ವಲ್ಪ ಸಮಯದವರೆಗೆ ಮೌನವಾಗಿದ್ದೆವು. ಆದರೆ ನಂತರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮೊದಲು ಮತದಾರರ ಪಟ್ಟಿಯಲ್ಲಿ ಸುಮಾರು 1 ಕೋಟಿ ಹೊಸ ಮತದಾರರನ್ನು ಸೇರಿಸಲಾಗಿದೆ ಎಂದು ತಿಳಿದುಬಂದಿತು. ಎಲ್ಲೆಲ್ಲ ಇಂತಹ ಸೇರ್ಪಡೆಯಾಗಿದೆಯೊ ಅಲ್ಲೆಲ್ಲ ಎನ್‌ಡಿಎ ಅಭ್ಯರ್ಥಿಗಳು ಗೆದ್ದಿದ್ದಾರೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಲೋಜಸಭೆ ಚುನಾವಣೆಯ 48 ಸ್ಥಾನಗಳ ಪೈಕಿ 30 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟವು ಗೆದ್ದಿತ್ತು. ಆದರೆ ವಿಧಾನಸಭೆ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ಭಾರೀ ಹಿನ್ನೆಡೆ ಕಂಡಿತ್ತು. ಅದಾದ ಬಳಿಕ ಮತದಾರರ ಅಂಕಿ ಅಂಶದಲ್ಲಿ ವ್ಯತ್ಯಾಸ ಕಂಡುಬಂದಿದೆ.

“ಮಹಾರಾಷ್ಟ್ರದಲ್ಲಿ ಆದಂತೆ ಇಲ್ಲಿ ಆಗಲು ಬಿಡಲ್ಲ. ಬಿಹಾರದ ಜನರು ಚುರುಕಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಮಾಡಿದಂತೆ ಇಲ್ಲಿ ಮಾಡಲು ಚುನಾವಣಾ ಆಯೋಗಕ್ಕೆ ನಾವು ಬಿಡುವುದಿಲ್ಲ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...