ಮಹಾರಾಷ್ಟ್ರ | ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಪ್ರತಿಭಟನೆ; ಹಲವರಿಗೆ ಗಾಯ

Date:

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ ಬಳಿಕ ಆಕ್ರೋಶಗೊಂಡ ಪ್ರತಿಭಟನಾಕಾರರ ಗುಂಪು, ಶನಿವಾರ ಕಲ್ಲು ತೂರಾಟ ನಡೆಸಿರುವುದಾಗಿ ವರದಿಯಾಗಿದೆ.

- Advertisement -

ಜಲ್ನಾದಲ್ಲಿ ಮರಾಠ ಮೀಸಲಾತಿಗೆ ಒತ್ತಾಯಿಸಿ ನಡೆಸಿದ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ಸಂಭವಿಸಿದ್ದು, ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪೊಲೀಸರು ಲಾಠಿ ಚಾರ್ಜ್‌ ನಡೆಸಿ, ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಹಿಂಸಾಚಾರದ ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಮರಾಠ ಮೀಸಲಾತಿಗೆ ಒತ್ತಾಯಿಸಿ ಶುಕ್ರವಾರ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಇದರ ಪರಿಣಾಮವಾಗಿ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸುಮಾರು 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದಾರೆ. ಗಾಯಗೊಂಡ ಜನರನ್ನು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಜಯಂತ್ ಪಾಟೀಲ್ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದಾರೆ.

ಕಳೆದ ಮಂಗಳವಾರದಿಂದ ಮನೋಜ್ ಜಾರಂಗೆ ನೇತೃತ್ವದ ಪ್ರತಿಭಟನಾಕಾರರ ಗುಂಪು, ಮರಾಠ ಸಮುದಾಯದ ಮೀಸಲಾತಿಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದೆ.

360 ಮಂದಿಯ ವಿರುದ್ಧ ಪ್ರಕರಣ

ಶುಕ್ರವಾರದ ಘಟನೆಗೆ ಸಂಬಂಧಿಸಿ ಪೊಲೀಸರು 360ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರಲ್ಲಿ 16 ಮಂದಿಯನ್ನು ಗುರುತಿಸಲಾಗಿದ್ದು, ಇವರೆಲ್ಲರೂ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...