ಪೋಲಿಯೊ ನಿರ್ಮೂಲನೆ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಮುಖ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Date:

ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದನ್ನ ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಹೀಗಾಗಿ ಇಂದಿನಿಂದ ಮಾರ್ಚ್ 6 ರವರೆಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಪೋಲಿಯೊ ಲಸಿಕಾ ಅಭಿಯಾನದಲ್ಲಿ 5 ವರ್ಷದ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ ಎಂದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.‌

ಬೆಂಗಳೂರಿನಲ್ಲಿ ಇಂದು ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಪೋಲಿಯೊ ಲಸಿಕೆ ಹಾಕುವ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಮೂಲಕ ಬೆಂಗಳೂರಿನಲ್ಲಿ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರಾದ ನವೀನ್ ಭಟ್ ಪಾಲ್ಗೊಂಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾರ್ಚ್ 3 ರಿಂದ 6ರವರೆಗೆ ಪೋಲಿಯೊ ಲಸಿಕೆ ಅಭಿಯಾನ

Wild Polio Virusನ ಪಸರಿಸುವಿಕೆಯು ಇಂದಿಗೂ ಜಗತ್ತಿನಾದ್ಯಂತ ಮಕ್ಕಳನ್ನು ಬಾಧಿಸುತ್ತಿದೆ. ಇದರಲ್ಲಿ ಭಾರತದ ನೆರೆ ರಾಷ್ಟ್ರಗಳೂ ಸೇರಿರುವುದು ಭಾರತಕ್ಕೆ ಕಳವಳಕಾರಿಗಿದೆ. ಹೀಗಾಗಿ ಪೋಲಿಯೊ ನಿರ್ಮೂಲನೆ ಸ್ಥಿತಿಯನ್ನು ಭಾರತ ಕಾಯ್ದುಕೊಳ್ಳುಬೇಕಿದೆ.‌ India Expert Advisory Group (IEAG) ಶಿಫಾರಸ್ಸಿನನ್ವಯ 0-5 ವರ್ಷದೊಳಗಿನ ಎಲ್ಲ ಮಕ್ಕಳನ್ನು ವ್ಯಾಪ್ತಿಗೊಳಪಡಿಸಿದಂತೆ ರಾಷ್ಟ್ರೀಯ ಪೋಲಿಯೊ ಲಸಿಕಾ ಅಭಿಯಾನವನ್ನ ಮಾರ್ಚ್ 3 ರಿಂದ 6ರ ವರೆಗೆ ಹಮ್ಮಿಕೊಳ್ಳಲಾಗಿದೆ.‌

ಮೊದಲನೇ ದಿನ ಮಾರ್ಚ್ 3ರಂದು ಪೋಲಿಯೊ ಬೂತ್‌ಗಳಲ್ಲಿ ಹಾಗೂ ನಂತರದ 2-3 ದಿನಗಳಲ್ಲಿ ಮನೆ-ಮನೆ ಭೇಟಿಯ ಮೂಲಕ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ 2 ಹನಿ ಪೋಲಿಯೊ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ವಿಶೇಷವಾಗಿ ವಲಸಿಗ ಸಮುದಾಯದ, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳಲ್ಲಿನ ಹಾಗೂ ನಗರ ಪ್ರದೇಶದ ಸ್ಲಂಗಳಲ್ಲಿ ವಾಸಿಸುವ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ನಿರ್ದೇಶಕ ನವೀನ್ ಭಟ್ ತಿಳಿಸಿದ್ದಾರೆ.

ಪಿ-2 ವಿಧದ ಪೋಲಿಯೊ ಸೋಂಕು ಜಾಗತಿಕ ಮಟ್ಟದಲ್ಲಿ ನಿರ್ಮೂಲನೆಯಾಗಿದೆ.‌ ಪಿ-3 ಯ ಯಾವುದೇ ಪ್ರಕರಣಗಳು ವರದಿಯಾಗಿರುವುದಿಲ್ಲ. ಇದಕ್ಕೆ ಅಧಿಕೃತವಾಗಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಕ್ಟೋಬರ್ 2019 ರಲ್ಲಿ ಪ್ರಮಾಣಪತ್ರ ಪಡೆದಿದೆ. ಈಗ ಪಿ-1 ಪ್ರಕರಣಗಳು ಮಾತ್ರವೇ ವರದಿಯಾಗುತ್ತಿರುವುದು. ದಿನಾಂಕ:13.01.2011ರಲ್ಲಿ ಪಶ್ಚಿಮ ಬಂಗಳಾದಲ್ಲಿ ಕೊನೆಯ ಪೋಲಿಯೊ ಪ್ರಕರಣವು ವರದಿಯಾಗಿತ್ತು. ಇದಾದ ಮೇಲೆ ಭಾರತದಲ್ಲಿ ಇಲ್ಲಿಯವರೆಗೂ ಯಾವುದೇ ಪೋಲಿಯೊ ಪ್ರಕರಣಗಳು ವರದಿಯಾಗಿರುವುದಿಲ್ಲ.

ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ನಿಯಮಿತವಾಗಿ ಪ್ರತಿ ಶಿಶುವಿಗೆ 5 ವರಸೆ ಒಪಿವಿ(ಓರಲ್ ಪೋಲಿಯೊ ವ್ಯಾಕ್ಸಿನ್) ಮತ್ತು 3 ವರಸೆ ಐಪಿವಿ(ಇನ್‌ಜಕ್ಟಬಲ್ ಪೋಲಿಯೊ ವ್ಯಾಕ್ಸಿನ್) ಲಸಿಕೆಗಳನ್ನು ನೀಡಲಾಗುತ್ತಿದೆ. ಯಾವುದೇ ಮಗುವು ಲಸಿಕೆಯಿಂದ ವಂಚಿತರಾಗದಂತೆ ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲು ಗುರಿ ಹೊಂದಲಾಗಿದೆ.

ಸುಮಾರು 33,712 ಪೋಲಿಯೊ ಬೂತ್‌ಗಳನ್ನ ತೆರೆಯಲಾಗಿದ್ದು, 1,11,370 ಲಸಿಕಾ ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ. 963 ಸಂಚಾರಿ ತಂಡಗಳನ್ನ ರಚಿಸಲಾಗಿದ್ದು, 7206 ಮೇಲ್ವಿಚಾರಕರನ್ನ ನಿಯೋಜಿಸಲಾಗಿದೆ. ಈ ಹಿಂದೆ ಎಷ್ಟು ಬಾರಿ ಪೋಲಿಯೊ ಲಸಿಕೆ ಪಡೆದಿದ್ದರೂ ಸಹ ಈ ಅಭಿಯಾನದಲ್ಲಿ ಮತ್ತೆ ಲಸಿಕೆ ಹಾಕಿಸುವುದು ಅವಶ್ಯಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಆರೋಗ್ಯ ಕೇಂದ್ರವನ್ನು ಭೇಟಿ ಮಾಡಿ ಅಥವಾ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ನಿಮ್ಮ ಹತ್ತಿರದ ಪೋಲಿಯೊ ಬೂತ್ ಅನ್ನು ಗುರುತಿಸಲು ‘Nearby Vaccination centre Karnataka’ ಆ್ಯಂಡ್ರಾಯ್ಡ್ ಆ್ಯಪ್‌ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...