ಮೈತ್ರಿ ಮುಟ್ಟಿನ ಕಪ್ ಯೋಜನೆ: ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್

Date:

Advertisements
  • ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ‘ಕಾಂತಾರ’ ಸಿನಿಮಾದ ನಟಿ ಸಪ್ತಮಿ ಗೌಡ ರಾಯಭಾರಿ
  • ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ವಿತರಣೆ

ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌, ಪ್ರತಿಯೊಬ್ಬ ವಿದ್ಯಾರ್ಥಿನಿಯರು ಮೈತ್ರಿ ಯೋಜನೆಯ ರಾಯಭಾರಿಗಳಾಗಿ, ಮುಟ್ಟಿನ ಕಪ್ ಹೆಚ್ಚು ಹೆಚ್ಚು ಬಳಕೆಗೆ ಪ್ರೇರಕರಾಗಬೇಕು. ಮೈತ್ರಿ ಯೋಜನೆ ಮಂಗಳೂರಿನಲ್ಲಿ ಯಶಸ್ವಿಯಾಗಿದೆ. ಆದ್ದರಿಂದ ಇದನ್ನು ರಾಜ್ಯಾದ್ಯಂತ ತೆಗೆದುಕೊಂಡು ಹೋಗಲಿದ್ದೇವೆ ಎಂದು ಹೇಳಿದರು.

“ಮಂಗಳೂರಿನಲ್ಲಿ‌11 ಸಾವಿರ ಹಾಗೂ ಚಾಮರಾಜನಗರದಲ್ಲಿ 4 ಸಾವಿರ ಮೈತ್ರಿ ಯೋಜನೆಯ ಮುಟ್ಟಿನ ಕಪ್ ಸೇರಿ ಒಟ್ಟು 15 ಸಾವಿರ ಶಾಲಾ – ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಣೆ ಮಾಡಲಾಗಿದೆ” ಎಂದು ತಿಳಿಸಿದರು.

Advertisements

‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ರಾಯಭಾರಿ ಆಗಿ ನೇಮಕವಾಗಿರುವ ‘ಕಾಂತಾರ’ ಸಿನಿಮಾ ಖ್ಯಾತಿಯ ನಟಿ ಸಪ್ತಮಿ ಗೌಡ, ಶುಚಿ ನನ್ನ ಮೈತ್ರಿ ಯೋಜನೆಯ ರಾಯಭಾರಿಯನ್ನಾಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಋತುಚಕ್ರದ ಕಾರಣಕ್ಕೆ ಹೆಣ್ಣುಮಕ್ಕಳು ಚಟುವಟಿಕೆಯಿಂದ ಹಿಂದೆ ಸರಿಯುವುದನ್ನು ತಡೆಯಲು ಮುಟ್ಟಿನ ಕಪ್ ಸಹಕಾರಿ. ನನ್ನ ವೈಯಕ್ತಿಕ ಅನುಭವದಿಂದ ಈ ಮಾತನ್ನು ಹೇಳುತ್ತಿದ್ದೇನೆ” ಎಂದು ಹೇಳಿದರು.

“ಈಜು ಸ್ಪರ್ಧೆಯಲ್ಲಿ ಮೊದಲ ಬಾರಿಗೆ ಚಿನ್ನದ ಪದಕ ಪಡೆದಿದ್ದು ಮಂಗಳೂರಿನಲ್ಲಿ, ಸಿನಿಮಾದಲ್ಲಿ ಹೆಸರು ಬಂದಿದ್ದು ಮಂಗಳೂರಿನಿಂದಲೇ ಅದೇ ರೀತಿ ಮೈತ್ರಿ ಯೋಜನೆಗೆ ಮಂಗಳೂರಿನಿಂದಲೇ ರಾಯಭಾರಿಯಾಗಿ ಆಗಿರುವುದಕ್ಕೆ ಹೆಮ್ಮೆಯಿದೆ. ಹೆಣ್ಣುಮಕ್ಕಳು ಎಲ್ಲಾ ಕ್ಷೇತ್ರಗಳಲ್ಲೂ ಮುಂದಿದ್ದಾರೆ. ಆದರೆ ಮುಟ್ಟಿನ ಕಾರಣಕ್ಕೆ ಹಿಂದೆ ಉಳಿಯಬಾರದು. ಪ್ಯಾಡ್‌ನ ತ್ಯಾಜ್ಯವನ್ನು ಎಸೆಯೋದು ಹೇಗೆ ಎಂಬುದೇ ಕಷ್ಟ. ಆದರೆ ಮುಟ್ಟಿನ ಕಪ್‌ನಿಂದ ಅಂತಹ ಯಾವುದೇ ತೊಂದರೆಯಿಲ್ಲ” ಎಂದು ನಟಿ ಸಪ್ತಮಿಗೌಡ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ. ರಂದೀಪ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಡಾ. ಎಂ. ಇಂದುಮತಿ, ವಿಧಾನ ಪರಿಷತ್ ಸದಸ್ಯರಾದ ಕೆ. ಮಂಜುನಾಥ ಭಂಡಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಯೋಜನಾ ನಿರ್ದೇಶಕ ಡಾ. ಶ್ರೀನಿವಾಸ್ ಜಿ.ಎನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗಿಯ ಸಹ ನಿರ್ದೇಶಕಿ ಡಾ.ರಾಜೇಶ್ವರಿ ದೇವಿ ಎಚ್. ಆರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕಿ ಡಾ. ವೀಣಾ ವಿ., ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X