ಬಹಿರಂಗ ಹೇಳಿಕೆ ಕೊಡುವುದರಿಂದ ಯತ್ನಾಳ್‌ಗೆ ಒಳ್ಳೆಯದಾಗುವುದಿಲ್ಲ: ಪ್ರಲ್ಹಾದ್‌ ಜೋಶಿ ಎಚ್ಚರಿಕೆ

Date:

Advertisements

ಪಕ್ಷದೊಳಗೆ ಯಾರಿಗಾದರೂ ದೂರುದುಮ್ಮಾನಗಳು ಇದ್ದರೆ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷರ ಜತೆ ಮಾತುಕತೆ ನಡೆಸಬೇಕು. ಅದನ್ನು ಬಿಟ್ಟು ಪಕ್ಷದ ವಿರುದ್ಧ ಮಾತನಾಡಿದರೆ, ಬಹಿರಂಗ ಹೇಳಿಕೆ ಕೊಡುವುದು ಮಾಡಿದರೆ ಒಳ್ಳೆಯದಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಪದಾಧಿಕಾರಿಗಳ ಪಟ್ಟಿಯಲ್ಲಿ ಯಡಿಯೂರಪ್ಪ ಪರ ಇರುವವರಿಗೆ ಮಾತ್ರ ಸ್ಥಾನ ನೀಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು.

“ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ಕೊಡುವುದು ಸರಿ ಅಲ್ಲ, ರಾಜ್ಯಾಧ್ಯಕ್ಷರ ಆಯ್ಕೆ ತಪ್ಪಾಗಿದೆ ಎಂದು ಅನಿಸಿದರೆ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ ಚರ್ಚಿಸಲಿ. ಈ ರೀತಿ ಬಹಿರಂಗ ಹೇಳಿಕೆ ಕೊಡುವುದು ಸರಿ ಅಲ್ಲ” ಎಂದರು.

Advertisements

ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲು ರಾಷ್ಟ್ರೀಯ ಅಧ್ಯಕ್ಷರು, ವರಿಷ್ಠರು, ಪ್ರಧಾನಿಯವರು ಕೂತೇ ಆಯ್ಕೆ ಮಾಡಿರುತ್ತಾರೆ. ಇದು ರಾಷ್ಟ್ರೀಯ ಘಟಕದ ನಿರ್ಣಯ. ಇದಕ್ಕೆ ಬಹಿರಂಗವಾಗಿ ಹೇಳಿಕೆ ಕೊಡುವವರಿಗೆ ನಾನು ಹೇಳುವುದೇನೆಂದರೆ, ಬಿಜೆಪಿ ಹಿತಕಾಯುವವರು ತಮ್ಮ ಬಹಿರಂಗ ಹೇಳಿಕೆಗಳನ್ನು ಕೊಡುವುದು ತಕ್ಷಣ ನಿಲ್ಲಿಸಬೇಕು. ಇದು ಸರಿ ಅಲ್ಲ” ಎಂದು ಹೇಳಿದರು.

“ಯತ್ನಾಳ್ ಅವರು ಶಾಸಕರಿದ್ದಾರೆ. ಅವರನ್ನು ಕರೆದು ಮಾತನಾಡುವ ಕೆಲಸವನ್ನು ರಾಷ್ಟ್ರೀಯ ಅಧ್ಯಕ್ಷರು ಮಾಡುತ್ತಾರೆ” ಎಂದು ಇದೇ ವೇಳೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಜಾಬ್ ಹಿಂಜರಿಕೆ; ರಣತಂತ್ರವೋ, ಇಲ್ಲವೇ ಪಲಾಯನ ಮಂತ್ರವೇ?

ಬಿಜೆಪಿ ಸರ್ಕಾರ ಬುರುಡೆ ಸರ್ಕಾರ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಪ್ರತಿಕ್ರಿಯಿಸಿ, “ಬುರುಡೆ ಯಾರು ಎಂಬ ಬಗ್ಗೆ ಹಿಂದೆ ಮಾತನಾಡಿದ್ದಾರೆ. 1971 ರಿಂದ ಗರಿಬಿ ಹಟಾವೋ ಎಂದು ಹೇಳಿದವರು ನೀವು, 1971 ರಿಂದ 1977 ರವರೆಗೆ, 1980 ರಿಂದ 1984 ರವರೆಗೆ, 1984 ರಿಂದ 1989 ರವರೆಗೆ 1991 ರಿಂದ 1996 ರವರೆಗೆ, 2004 ರಿಂದ 2010 ರವರೆಗೆ ಹೀಗೆ ಈ ಎಲ್ಲಾ ವರ್ಷಗಳಲ್ಲಿ ಕಾಂಗ್ರೆಸ್ ಆಡಳಿತ ನಡೆಸಿದೆ. ಇಷ್ಟು ವರ್ಷಗಳ ಕಾಲ ನೀವು ಆಡಳಿತ ನಡೆಸಿದ್ದೀರಿ. ನಿಮಗೆ ಒಂದು ಗ್ಯಾಸ್ ಕೊಡಲು ಆಗಲಿಲ್ಲ” ಎಂದು ಟೀಕಿಸಿದರು.

ಕನ್ನಡ ಪರ ಹೋರಾಟಗಾರರ ಪರವಾಗಿ ಮಾತನಾಡಿದ ಅವರು, “ಕನ್ನಡ ಪರ ಹೋರಾಟಗಾರರ ಮೇಲೆ ಇದ್ದ ಬದ್ದ ಸೆಕ್ಷನ್​​ಗಳನ್ನು ಹಾಕಿ ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದು ಸರಿಯಲ್ಲ. ಕನ್ನಡ ಬಳಕೆ ಮಾಡಬೇಕು ಎಂಬುದು ಕನ್ನಡಪರ ಹೋರಾಟಗಾರರ ಬೇಡಿಕೆ ನ್ಯಾಯಯುತವಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಯತ್ನಾಳ್ ಹಿಂದೆ ವಿಜಯೇಂದ್ರಗೆ ವಿರುದ್ಧ ಎತ್ತಿ ಕಟ್ಟಿದವರು ಯಾರು ರಾಜ್ಯಕ್ಕೆ ಗೊತ್ತು,,,, ಬಾಲಿಶ ಹೇಳಿಕೆ ಏಕೆ ,, ಅಕಸ್ಮಾತ್ ಕಾಂಗ್ರೆಸ್ ಪಕ್ಷದಲ್ಲಿ ಇಂಥಾ ಸನ್ನಿವೇಶ ಆಗಿದ್ದರೆ ಪ್ರಧಾನಿ ಮಂತ್ರಿಯಿಂದ ಹಿಡಿದು ಇಡೀ ಪಕ್ಷವೇ ಹೋ ಎಂದು ಕೂಗಿರುತ್ತಿದ್ದರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X