ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝುಗೆ ಆಹ್ವಾನ

Date:

Advertisements

ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರಿಗೆ ಆಹ್ವಾನ ನೀಡಲಾಗಿದ್ದು, ಆಹ್ವಾನವನ್ನು ಮುಯಿಜ್ಜು ಅವರು ಸ್ವೀಕರಿಸಿದ್ದಾರೆ ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ ತಿಳಿಸಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿರುವ ಮಾಲ್ಡೀವ್ಸ್ ಕಚೇರಿ, “ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿಗೆ ಭೇಟಿ ನೀಡಿದ್ದ ಭಾರತದ ಹೈಯರ್ ಕಮಿಷನರ್ ಮುನು ಮಹಾವರ್ ಅವರಿಗೆ ಆಹ್ವಾನ ಪತ್ರವನ್ನು ನೀಡಿದ್ದರು. ಆಹ್ವಾನವನ್ನು ಸ್ವೀಕರಿಸಿರುವ ಅಧ್ಯಕ್ಷರು ಸಮಾರಂಭದಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದೆ.

ಆಹ್ವಾನಕ್ಕಾಗಿ ಪ್ರಧಾನಿ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿರುವ ಅಧ್ಯಕ್ಷ ಮುಯಿಝು, “ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಹಾಜರಾಗುವ ಮೂಲಕ ಮೋದಿಗೆ ಅವರಿಗೆ ಗೌರವ ನೀಡಲಾಗುವುದು” ಎಂದು ಹೇಳಿದರು.

Advertisements

“ಭಾರತದೊಂದಿಗಿನ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಭಾರತದ ಪ್ರಧಾನ ಮಂತ್ರಿಯೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ. ಮಾಲ್ಡೀವ್ಸ್-ಭಾರತದ ಸಂಬಂಧಗಳು ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿವೆ ಎಂಬುದು ಹೈಯರ್ ಕಮಿಷನರ್‌ ಭೇಟಿಯಿಂದ ಸಾಬೀತಾಗಿದೆ” ಎಂದು ಮಾಲ್ಡೀವ್ಸ್‌ ಪ್ರಕಟಣೆ ತಿಳಿಸಿದೆ.

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ, ಎನ್‌ಡಿಎ ಸರ್ಕಾರ ರಚಿಸುವುದು ಖಚಿತವಾದ ಬಳಿಕ ಬುಧವಾರ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದ ಮಾಲ್ಡೀವ್ಸ್ ಅಧ್ಯಕ್ಷರು, “ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ, 2024ರ ಭಾರತೀಯ ಸಾರ್ವತ್ರಿಕ ಚುನಾವಣೆಯಲ್ಲಿ ಸತತ ಮೂರನೇ ಅವಧಿಗೆ ಆಯ್ಕೆಯಾಗಿರುವುದಕ್ಕೆ ಅಭಿನಂದನೆಗಳು. ಸಹಭಾಗಿತ್ವದಲ್ಲಿ ಉಭಯ ರಾಷ್ಟ್ರಗಳ ಹಿತಾಸಕ್ತಿಗಳನ್ನು ಮುನ್ನಡೆಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದಿದ್ದರು.

ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದ ಮೋದಿ, “ಮಾಲ್ಡೀವ್ಸ್ ಅಧ್ಯಕ್ಷರಿಗೆ ಧನ್ಯವಾದಗಳು. ಮಾಲ್ಡೀವ್ಸ್ ಹಿಂದು ಮಹಾಸಾಗರ ಪ್ರದೇಶದಲ್ಲಿ ನಮ್ಮ ಮೌಲ್ಯಯುತ ಪಾಲುದಾರ ಮತ್ತು ನೆರೆಹೊರೆಯ ರಾಷ್ಟ್ರವಾಗಿದೆ. ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ನಾನು ಸಹಕಾರಕ್ಕಾಗಿ ಎದುರು ನೋಡುತ್ತಿದ್ದೇನೆ” ಎಂದು ‘ಎಕ್ಸ್‌’ನಲ್ಲಿ ಪೋಸ್ಟ್‌ ಹಾಕಿದ್ದರು.

ಚೀನಾ ಪರವಾದ ನಿಲುವು ಹೊಂದಿದ್ದ ಮುಯಿಝು ಅವರು ಕಳೆದ ವರ್ಷ ನವೆಂಬರ್ 17ರಂದು ಮಾಲ್ಡೀವ್ಸ್‌ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರು ಈ ವರ್ಷದ ಜನವರಿಯಲ್ಲಿ ತನ್ನ ಮೊದಲ ವಿದೇಶಿ ಭೇಟಿಯಲ್ಲಿ ಮೊದಲು ಟರ್ಕಿ ಮತ್ತು ಚೀನಾಕ್ಕೆ ಭೇಟಿ ನೀಡಿದ್ದರು. ಅಲ್ಲದೆ, ಮಾಲ್ಡೀವ್ಸ್‌ನಿಂದ ಸುಮಾರು 88 ಭಾರತೀಯ ಸೇನಾ ಸಿಬ್ಬಂದಿಯನ್ನು ಹಿಂಪಡೆಯುವಂತೆ ಭಾರತವನ್ನು ಒತ್ತಾಯಿಸಿದ್ದರು. ಇದು, ಎರಡು ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧದಲ್ಲಿ ಬಿರುಕಿಗೆ ಕಾರಣವಾಗಿತ್ತು. ಪ್ರತಿಯಾಗಿ, ಭಾರತೀಯರು ‘ಬಾಯ್ಕಾಟ್ ಮಾಲ್ಡೀವ್ಸ್‌’ ಅಭಿಯಾನ ನಡೆಸಿದ್ದರು.

ಭಾನುವಾರ ನಡೆಯಲಿರುವ ಪ್ರಧಾನಿ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಶ್ರೀಲಂಕಾ, ಮಾಲ್ಡೀವ್ಸ್, ಬಾಂಗ್ಲಾದೇಶ, ಮಾರಿಷಸ್, ನೇಪಾಳ ಮತ್ತು ಭೂತಾನ್ ರಾಷ್ಟ್ರಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ. ” “ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ; ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು; ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಶನಿವಾರ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಬಾನಿಯ ವಂತಾರ ಮೃಗಾಲಯದ ಕಾರ್ಯಾಚರಣೆ ತನಿಖೆಗೆ ಎಸ್‌ಐಟಿ ರಚನೆ

ಕಳೆದ ಕೆಲವು ತಿಂಗಳುಗಳಿಂದ ಅಂಬಾನಿ ಅವರ ರಿಲಯನ್ಸ್‌ ಸಂಸ್ಥೆಗೆ ಸೇರಿದ, ಮುಕೇಶ್...

ಮದುವೆಯಾಗಲು ನಿರಾಕರಿಸಿದ ಯುವತಿಗೆ ಗುಂಡಿಕ್ಕಿ ಕೊಲೆ: ತಾನೂ ಆತ್ಮಹತ್ಯೆಗೆ ಶರಣಾದ ಯುವಕ

ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ಯುವತಿಗೆ ಗುಂಡಿಕ್ಕಿ ಕೊಲೆ ಮಾಡಿ, ಬಳಿಕ...

ಶೇ.200 ತೆರಿಗೆ ವಿಧಿಸಿ ಚೀನಾವನ್ನು ನಾಶಪಡಿಸಬಲ್ಲೆ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಚೀನಾ ಅಪರೂಪದ ಅಯಸ್ಕಾಂತ(earth magnets) ಅನ್ನು ಪೂರೈಸಬೇಕು, ಇಲ್ಲವಾದರೆ ಶೇಕಡ 200ರಷ್ಟು...

ಅಣ್ಣಾಮಲೈ ಕೈಯಿಂದ ಪ್ರಶಸ್ತಿ ಪಡೆಯಲು ವಿದ್ಯಾರ್ಥಿ ನಕಾರ

ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ್ದ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ...

Download Eedina App Android / iOS

X