ಏರ್ ಇಂಡಿಯಾ ವಿಮಾನ ದುರಂತ: ಉನ್ನತ ಮಟ್ಟದ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

Date:

ಅಹಮದಾಬಾದ್ ಹೊರವಲಯದಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

- Advertisement -

ಕೆಲವು ಪ್ರಯಾಣಿಕರು ಇಂಗ್ಲೆಂಡ್‌ಗೆ ಹೋಗುವ ಆತುರದಲ್ಲಿದ್ದರು ಮತ್ತು ಬೇಗ ಟೇಕ್ಆಫ್ ಆಗುವಂತೆ ಸಿಬ್ಬಂದಿ ಮೇಲೆ ಒತ್ತಡ ಹೇಳಿದ್ದರು ಎಂದು ವರದಿಯಾಗಿವೆ. ಆದ್ದರಿಂದ ಈ ಘಟನೆಯ ಬಗ್ಗೆ ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರು ತನಿಖೆ ನಡೆಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

“ಇದರಲ್ಲಿ ತಾಂತ್ರಿಕ ದೋಷವಿದೆಯೇ? ಪೈಲಟ್ ತಪ್ಪು ಮಾಡಿದ್ದಾರೆಯೇ? ಪ್ರಯಾಣಿಕರ ಒತ್ತಡವಿದೆಯೇ? ಯಾರ ಕಡೆಯಿಂದಾದರೂ ನಿರ್ಲಕ್ಷ್ಯವಿದೆಯೇ? ಈ ಎಲ್ಲಾ ಅಂಶಗಳನ್ನು ಪರಿಶೀಲಿಸಲು ಸರ್ಕಾರವು ಹಾಲಿ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಆದೇಶಿಸಬೇಕು” ಎಂದು ಖರ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುತ್ತಾ ಹೇಳಿದ್ದಾರೆ.

ಇನ್ನು ಇದಕ್ಕೂ ಮೊದಲು ಏರ್‌ ಇಂಡಿಯಾ ದುರಂತದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ ಅವರು, “ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಲವು ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದ ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು. ಇದು ಹೃದಯ ವಿದ್ರಾವಕ ಘಟನೆ. ಪ್ರಯಾಣಿಕರು, ಪೈಲಟ್ ಮತ್ತು ಸಿಬ್ಬಂದಿಗಳ ಕುಟುಂಬಕ್ಕಾಗಿ ನಾವು ಪ್ರಾರ್ಥಿಸುತ್ತೇವೆ” ಎಂದು ಖರ್ಗೆ ಪೋಸ್ಟ್‌ನಲ್ಲಿ ಬರೆದಿದ್ದಾರೆ.

230 ಮಂದಿ ಪ್ರಯಾಣಿಕರು ಮತ್ತು 12 ಮಂದಿ ಸಿಬ್ಬಂದಿಗಳ ದಾರುಣ ಸಾವಿಗೆ ಕಾರಣವಾದ ಅಹಮದಾಬಾದ್ ವಿಮಾನ ದುರಂತ ಕುರಿತು ಈಗಾಗಲೇ ತನಿಖೆ ಆರಂಭವಾಗಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ ಔಪಚಾರಿಕ ತನಿಖೆಯನ್ನು ಪ್ರಾರಂಭಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ತಿಳಿಸಿದ್ದಾರೆ. ಆದರೆ ಈ ಬಗ್ಗೆ ಹಾಲಿ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...